ಶಿರೂರು:ಬಸ್ ಹಾಗೂ ಲಾರಿ ನಡುವೆ ಅಪಘಾತ,ಇಬ್ಬರೂ ಗಂಭೀರ

ಕುಂದಾಪುರ:ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಶಿರೂರು ಕರಿಕಟ್ಟೆ ಬಳಿ ಬುಧವಾರ ನಡೆದಿದೆ.ಬೈಂದೂರು ಕಡೆಯಿಂದ ಭಟ್ಕಳದ ಕಡೆಗೆ ಸಾಗುತ್ತಿದ್ದ ಸರಕಾರಿ ಬಸ್ಸಿಗೆ ಬೈಕ್ ಅಡ್ಡ ಬಂದ ಪರಿಣಾಮ ಬಸ್‌ ಚಾಲಕ ಬ್ರೇಕ್ ಹಾಕಿದ ಪರಿಣಾಮ ಹಿಂಬದಿಯಲ್ಲಿ ಬರುತ್ತಿದ್ದ ಮೀನು ಲಾರಿ ಬಸ್ ಗೆ ಡಿಕ್ಕಿ ಹೊಡೆದಿದೆ.ಮೀನು ಲಾರಿಯಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ.ಬಸ್ಸಿನ ಹಿಂಭಾಗದಲ್ಲಿದ್ದ ಒರ್ವ ಮಹಿಳೆಗೆ ಸಣ್ಣ ಪುಟ್ಟ ಗಾಯಗಳಾಗಿದೆ.

ಸರಕಾರಿ ಹಿರಿಯ ಪ್ರಾಥಮಿಕ ಮಂಕಿ ಶಾಲೆ ದತ್ತು ಸ್ವೀಕಾರ

ಕುಂದಾಪುರ:ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೈಂದೂರು ವಲಯ,ಸರಕಾರಿ ಹಿರಿಯ ಪ್ರಾಥಮಿಕ ಮಂಕಿ ಶಾಲೆ ದತ್ತು ಸ್ವೀಕಾರ ಕಾರ್ಯಕ್ರಮ ಯು.ರಾಜೇಶ ಕಾರಂತ್ ಉಪ್ಪಿನಕುದ್ರು ಅವರ ಸಾರಧ್ಯದಲ್ಲಿ ಸೋಮವಾರ ಮಂಕಿ ಶಾಲೆಯಲ್ಲಿನಡೆಯಿತು.ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ,ತನ್ನ ತಾಯಿ ಕಲಿತ ಶಾಲೆಯನ್ನು ನೆನೆದು ದತ್ತು ಸ್ವೀಕಾರ ಮಾಡಿರುವುದು ಶ್ಲಾಘನೀಯ ಕೆಲಸವಾಗಿದೆ.ದಾನಿಗಳ ಸಹಕಾರದಿಂದ ಬೈಂದೂರು ಕ್ಷೇತ್ರದಲ್ಲಿ ಸರಕಾರಿ ಶಾಲೆಗಳನ್ನು ಬಲಗೊಳಿಸುವ ಕೆಲಸ ಮಾಡಲಾಗುತ್ತಿದ್ದು.ದಾನಿಗಳ ವಿಶಿಷ್ಟ ಕಲ್ಪನೆಯೊಂದಿಗೆ ಸರಕಾರಿ ಶಾಲೆಗಳು […]

ಮರವಂತೆ:ಬೆಳ್ಳಿ ರಥ ಲೋಕಾರ್ಪಣೆ ಮನವಿ ಪತ್ರ ಬಿಡುಗಡೆ

ಕುಂದಾಪುರ:ಸಹಸ್ರಾರು ವರ್ಷಗಳ ಕಾಲದ ಇತಿಹಾಸವನ್ನು ಹೊಂದಿರುವ ಮರವಂತೆ ಶ್ರೀ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿದ್ದ ಬೆಳ್ಳಿ ರಥ ಅನಾದಿ ಕಾಲದಲ್ಲಿ ಸಮುದ್ರದಲ್ಲಿ ಹುದುಗಿದೆ ಎನ್ನುವ ವಿಷಯ ಪ್ರಶ್ನಾ ಚಿಂತನೆಯಲ್ಲಿ ಮೂಡಿ ಬಂದಿದೆ.ಆ ನಿಟ್ಟಿನಲ್ಲಿ ಶ್ರೀದೇವರಿಗೆ ಬೆಳ್ಳಿ ರಥವನ್ನು ಸಮರ್ಪಣೆ ಮಾಡಲು ನಿರ್ಧರಿಸಲಾಗಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸತೀಶ್.ಎಂ ನಾಯಕ್ ಹೇಳಿದರು.ಬೈಂದೂರು ತಾಲೂಕಿನ ಮರವಂತೆ ಶ್ರೀಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿ ಸೋಮವಾರ ಬೆಳ್ಳಿ ರಥ ಲೋಕಾರ್ಪಣೆ ಮನವಿ ಪತ್ರ ಬಿಡುಗಡೆಗೊಳಿಸಿ ಅವರು ಮಾತನಾಡಿದರು.ಶ್ರೀದೇವರಿಗೆ […]

You cannot copy content of this page