ಪಲ್ಸ್ ಪೋಲಿಯೊ ಕಾರ್ಯಕ್ರಮ

ಕುಂದಾಪುರ:ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ ಉಡುಪಿ,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಷ್ಟ್ರೀಯ ಆರೋಗ್ಯ ಅಭಿಯಾನ ಉಡುಪಿ ಜಿಲ್ಲೆ ಮತ್ತು ಆರೋಗ್ಯ ಕೇಂದ್ರ ಹಾಗೂ ಗ್ರಾಮ ಪಂಚಾಯತ್ ಸಹಯೋಗದಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಹಾಗು ಆರೋಗ್ಯ ಸಿಬ್ಬಂದಿಗಳ ಸಹಕಾರದಲ್ಲಿ ಪಲ್ಸ್ ಪೋಲಿಯೊ ಕಾರ್ಯಕ್ರಮ ಕುಂದಾಪುರ ಮತ್ತು ಬೈಂದೂರು ತಾಲೂಕಿನ ಭಾಗದಲ್ಲಿ ಭಾನುವಾರ ಯಶಸ್ವಿಯಾಗಿ ನಡೆಯಿತು.5 ವರ್ಷದೊಳಗಿನ ಮಕ್ಕಳನ್ನು ಹೆತ್ತವರು ಅಂಗನವಾಡಿ ಕೇಂದ್ರಗಳಿಗೆ ಕರೆದು ತಂದು ಲಸಿಕೆಯನ್ನು ಹಾಕಿಕೊಂಡರು.

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ,ನಾಲ್ವರು ಶಂಕಿತರು ಪೊಲೀಸರ ವಶಕ್ಕೆ

ಬೆಂಗಳೂರು:ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರು ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಶಂಕಿತರನ್ನು ಅಜ್ಞಾತ ಸ್ಥಳದಲ್ಲಿ ಗುಪ್ತಚರ ಇಲಾಖೆ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಅಬ್ದುಲ್​ ಕಲಾಂ ಅವರ ಸ್ಪೂರ್ತಿಯಿಂದ ತೆರೆದಂತಹ ರಾಮೇಶ್ವರಂ ಕೆಫೆ, ಭಾರತದಾದ್ಯಂತ ಬ್ರಾಂಚ್​ಗಳನ್ನ ಹೊಂದಿದೆ.ರಾಮೇಶ್ವರಂ ಕೆಫೆ ದೇಗುಲದ ಕಾನ್ಸೆಪ್ಟ್​ನಲ್ಲಿ ನಿರ್ಮಾಣವಾಗಿದೆ. ಬೆಂಗಳೂರಿನಲ್ಲೂ ಹಲವು ಬ್ರಾಂಚ್​ಗಳಿದ್ದು, ಜನ ಸಾಮಾನ್ಯರ ಜೊತೆಗೆ ಐಟಿ ಸಿಬ್ಬಂದಿಯ ಹಾಟ್​ ಫೇವರೆಟ್ ಸ್ಪಾಟ್ ಕೂಡ ಆಗಿದೆ.ರಾಮೇಶ್ವರ ಕೆಫೆಯಲ್ಲಿ ಮಧ್ಯಾಹ್ನ ಊಟದ ಸಮಯಕ್ಕೆ ಸರಿಯಾಗಿ ಬಾಂಬ್ ಬ್ಲಾಸ್ಟ್ […]

ಆಲೂರು ಶಾಲೆ ವಿದ್ಯಾರ್ಥಿಗಳು,ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಕುಂದಾಪುರ:ಶಾಲಾ ಶಿಕ್ಷಣ ಇಲಾಖೆ ಸಹಕಾರದೊಂದಿಗೆ ಎಚ್‍ಸಿಎಲ್ ಫೌಂಡೇಶನ್ ವತಿಯಿಂದ ತುಮಕೂರಿನಲ್ಲಿ ನಡೆದ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಆಲೂರು ಶಾಲೆ ವಿದ್ಯಾರ್ಥಿಗಳಾದ ನಿತೇಶ್.ಜೆ ಮತ್ತು ನಿಧಿಶ್ರೀ ಅವರು ಟ್ರಯಥ್ಲಾನ್ (60.ಮೀ ಓಟ,ಉದ್ದ ಜಿಗಿತ,ಬಾಲ್ ಥ್ರೋ) ವಿಭಾಗದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.600.ಮೀ ಓಟದಲ್ಲಿ ಪ್ರಣಮ್ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

You cannot copy content of this page