ಮರವಂತೆ:ಬೆಳ್ಳಿ ರಥ ಲೋಕಾರ್ಪಣೆ ಮನವಿ ಪತ್ರ ಬಿಡುಗಡೆ

ಕುಂದಾಪುರ:ಸಹಸ್ರಾರು ವರ್ಷಗಳ ಕಾಲದ ಇತಿಹಾಸವನ್ನು ಹೊಂದಿರುವ ಮರವಂತೆ ಶ್ರೀ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿದ್ದ ಬೆಳ್ಳಿ ರಥ ಅನಾದಿ ಕಾಲದಲ್ಲಿ ಸಮುದ್ರದಲ್ಲಿ ಹುದುಗಿದೆ ಎನ್ನುವ ವಿಷಯ ಪ್ರಶ್ನಾ ಚಿಂತನೆಯಲ್ಲಿ ಮೂಡಿ ಬಂದಿದೆ.ಆ ನಿಟ್ಟಿನಲ್ಲಿ ಶ್ರೀದೇವರಿಗೆ ಬೆಳ್ಳಿ ರಥವನ್ನು ಸಮರ್ಪಣೆ ಮಾಡಲು ನಿರ್ಧರಿಸಲಾಗಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸತೀಶ್.ಎಂ ನಾಯಕ್ ಹೇಳಿದರು.ಬೈಂದೂರು ತಾಲೂಕಿನ ಮರವಂತೆ ಶ್ರೀಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿ ಸೋಮವಾರ ಬೆಳ್ಳಿ ರಥ ಲೋಕಾರ್ಪಣೆ ಮನವಿ ಪತ್ರ ಬಿಡುಗಡೆಗೊಳಿಸಿ ಅವರು ಮಾತನಾಡಿದರು.ಶ್ರೀದೇವರಿಗೆ […]

ಪಲ್ಸ್ ಪೋಲಿಯೊ ಕಾರ್ಯಕ್ರಮ

ಕುಂದಾಪುರ:ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ ಉಡುಪಿ,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಷ್ಟ್ರೀಯ ಆರೋಗ್ಯ ಅಭಿಯಾನ ಉಡುಪಿ ಜಿಲ್ಲೆ ಮತ್ತು ಆರೋಗ್ಯ ಕೇಂದ್ರ ಹಾಗೂ ಗ್ರಾಮ ಪಂಚಾಯತ್ ಸಹಯೋಗದಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಹಾಗು ಆರೋಗ್ಯ ಸಿಬ್ಬಂದಿಗಳ ಸಹಕಾರದಲ್ಲಿ ಪಲ್ಸ್ ಪೋಲಿಯೊ ಕಾರ್ಯಕ್ರಮ ಕುಂದಾಪುರ ಮತ್ತು ಬೈಂದೂರು ತಾಲೂಕಿನ ಭಾಗದಲ್ಲಿ ಭಾನುವಾರ ಯಶಸ್ವಿಯಾಗಿ ನಡೆಯಿತು.5 ವರ್ಷದೊಳಗಿನ ಮಕ್ಕಳನ್ನು ಹೆತ್ತವರು ಅಂಗನವಾಡಿ ಕೇಂದ್ರಗಳಿಗೆ ಕರೆದು ತಂದು ಲಸಿಕೆಯನ್ನು ಹಾಕಿಕೊಂಡರು.

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ,ನಾಲ್ವರು ಶಂಕಿತರು ಪೊಲೀಸರ ವಶಕ್ಕೆ

ಬೆಂಗಳೂರು:ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರು ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಶಂಕಿತರನ್ನು ಅಜ್ಞಾತ ಸ್ಥಳದಲ್ಲಿ ಗುಪ್ತಚರ ಇಲಾಖೆ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಅಬ್ದುಲ್​ ಕಲಾಂ ಅವರ ಸ್ಪೂರ್ತಿಯಿಂದ ತೆರೆದಂತಹ ರಾಮೇಶ್ವರಂ ಕೆಫೆ, ಭಾರತದಾದ್ಯಂತ ಬ್ರಾಂಚ್​ಗಳನ್ನ ಹೊಂದಿದೆ.ರಾಮೇಶ್ವರಂ ಕೆಫೆ ದೇಗುಲದ ಕಾನ್ಸೆಪ್ಟ್​ನಲ್ಲಿ ನಿರ್ಮಾಣವಾಗಿದೆ. ಬೆಂಗಳೂರಿನಲ್ಲೂ ಹಲವು ಬ್ರಾಂಚ್​ಗಳಿದ್ದು, ಜನ ಸಾಮಾನ್ಯರ ಜೊತೆಗೆ ಐಟಿ ಸಿಬ್ಬಂದಿಯ ಹಾಟ್​ ಫೇವರೆಟ್ ಸ್ಪಾಟ್ ಕೂಡ ಆಗಿದೆ.ರಾಮೇಶ್ವರ ಕೆಫೆಯಲ್ಲಿ ಮಧ್ಯಾಹ್ನ ಊಟದ ಸಮಯಕ್ಕೆ ಸರಿಯಾಗಿ ಬಾಂಬ್ ಬ್ಲಾಸ್ಟ್ […]

You cannot copy content of this page