ಮುಳ್ಳಿಕಟ್ಟೆ-ಆಲೂರು ಮುಖ್ಯ ರಸ್ತೆಗೆ ಅಭಿವೃದ್ಧಿ ಭಾಗ್ಯ

ಕುಂದಾಪುರ:ಸಂಪೂರ್ಣವಾಗಿ ಹದಗೆಟ್ಟು ಹೋಗಿರುವ ಮುಳ್ಳಿಕಟ್ಟೆ-ಆಲೂರು ಜಿಲ್ಲಾ ಮುಖ್ಯ ರಸ್ತೆಗೆ ಕೊನೆಗೂ ಅಭಿವೃದ್ಧಿ ಭಾಗ್ಯ ಕೂಡಿ ಬಂದಿದೆ.ರಸ್ತೆ ಅಭಿವೃದ್ಧಿ ಕಾರ್ಯ ಬರದಿಂದ ಸಾಗುತ್ತಿದ್ದು ಕೆಲಸ ಪ್ರಗತಿಯಲ್ಲಿದೆ.ರಾಷ್ಟ್ರೀಯ ಹೆದ್ದಾರಿ 66 ಕ್ಕೆ ಸಂಪರ್ಕ ಕಲ್ಪಿಸುವ ಸುಮಾರು 10.ಕಿ.ಮೀ ದೂರವಿರುವ ಕುಂದಾಪುರ ತಾಲೂಕಿನ ಆಲೂರು-ಮುಳ್ಳಿಕಟ್ಟೆ ಮುಖ್ಯ ರಸ್ತೆ ಹೊಂಡಗುಂಡಿ ಕೂಡಿದ್ದು ವಾಹನ ಸವಾರರಿಗೆ ರಸ್ತೆಯಲ್ಲಿ ಸಂಚರಿಸುವುದೆ ದುಸ್ತರವಾಗಿದ್ದು,ಕಿರಿದಾದ ರಸ್ತೆಯಲ್ಲಿ ವಾಹನಗಳನ್ನು ಚಲಾಯಿಸಿ ಕೊಂಡು ಹೋಗುವುದೇ ಕಷ್ಟಕರವಾಗಿತ್ತು.ಕಿರಿದಾದ ರಸ್ತೆಯನ್ನು ಸಂಪೂರ್ಣವಾಗಿ ಅಗಲಗೊಳಿಸುವುದರ ಮುಖೇನ ಹದಗೆಟ್ಟ ರಸ್ತೆಯನ್ನು ವಿಶೇಷ ಅನುದಾನದ ಮೂಲಕ ಅಭಿವೃದ್ಧಿಗೊಳಿಸಲಾಗುತ್ತಿದೆ.ರಸ್ತೆ ಅಭಿವೃದ್ಧಿ […]

ಸೇನಾಪುರದಲ್ಲಿಎಕ್ಸ್ ಪ್ರೆಸ್ ರೈಲು ನಿಲುಗಡೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

ಕುಂದಾಪುರ:ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕಾಗಿ ಹಾಗೂ ಯುವಜನರು ಉದ್ಯೋಗಕ್ಕಾಗಿ ಬೆಂಗಳೂರು,ಮುಂಬಯಿ ಸೇರಿದಂತೆ ದೇಶದ ಬೇರೆ ಬೇರೆ ರಾಜ್ಯಗಳಿಗೆ ದಿನಂಪ್ರತಿ ತೆರಳುತ್ತಿದ್ದಾರೆ.ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲವಾಗುವ ದೃಷ್ಟಿಯಿಂದ ಸೇನಾಪುರ ರೈಲು ನಿಲ್ದಾಣದಲ್ಲಿ ಎಕ್ಸ್‍ಪ್ರೆಸ್ ರೈಲು ನಿಲುಗಡೆ ಮಾಡಲು ಕೂಡಲೆ ಕ್ರಮಗಳನ್ನು ಕೈಗೊಳ್ಳಬೇಕು ಇದು 24 ಗ್ರಾಮದ ಜನರ ಆಗ್ರಹವಾಗಿದೆ.ಎಕ್ಸ್ ಪ್ರೆಸ್ ರೈಲು ನಿಲುಗಡೆಗೆ ಕ್ರಮ ಕೈಗೊಳ್ಳದೆ ಇದ್ದಲ್ಲಿ ಮುಂದಿನ ದಿನಗಳಲ್ಲಿ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹದ ಮೂಲಕ ಉಗ್ರ ಹೋರಾಟ ಮಾಡಲಾಗುವುದೆಂದು ಸೇನಾಪುರ ಎಕ್ಸ್‍ಪ್ರೆಸ್ ರೈಲು ನಿಲುಗಡೆ ಹೋರಾಟ ಸಮಿತಿ ಸಂಚಾಲಕ […]

ಇಬ್ರಾಹಿಂ ಗಂಗೊಳ್ಳಿಗೆ ಸನ್ಮಾನ

ಕುಂದಾಪುರ:ತುರ್ತು ಸಂದರ್ಭದ ಪರಿಸ್ಥಿತಿಯಲ್ಲಿ ಹಾಗೂ ಅಪಘಾತದ ಸಮಯದಲ್ಲಿ ಗಾಯಾಳುಗಳನ್ನು ಆಸ್ಪತ್ರೆ ಸಾಗಿಸಲು,ಅನಾಥ ಶವಗಳನ್ನು ಶವಾಗಾರಕ್ಕೆ ತಲುಪಿಸಲು ಆಂಬ್ಯುಲೆನ್ಸ್ ಸೇವೆ ಮೂಲಕ ಜನಾಸೇವಾ ಕಾರ್ಯಗಳನ್ನು ಮಾಡುತ್ತಿರುವ ಜೀವರಕ್ಷಕ ಎಂದೆ ಖ್ಯಾತಿಗಳಿಸಿರುವ ಸಮಾಜ ಸೇವಕ ಕುಂದಾಪುರ ತಾಲೂಕಿನ ಗಂಗೊಳ್ಳಿ ಗ್ರಾಮದ ನಿವಾಸಿಯಾಗಿರುವ ಮೊಹಮ್ಮದ್ ಇಬ್ರಾಹಿಂ ಗಂಗೊಳ್ಳಿ ಅವರನ್ನು ಗಂಗೊಳ್ಳಿಯಲ್ಲಿ ನಡೆದ ಜೈ ಜವಾನ್ ಜೈ ಕಿಸಾನ್ ಕ್ರಿಕೆಟ್ ಟ್ರೋಫಿ-2024 ರ ಸಭಾ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.ಈ ಸಂದರ್ಭ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

You cannot copy content of this page