ವಿದ್ಯಾರ್ಥಿ ಶಶಾಂಕ್‍ಗೆ ಪ್ರೋತ್ಸಾಹ ಧನ ವಿತರಣೆ

ಕುಂದಾಪುರ:ಆರ್ಥಿಕವಾಗಿ ಹಿಂದುಳಿದ ತೀರ ಬಡತನದ ಕುಟುಂದ ಸದಸ್ಯನಾಗಿರುವ ಕುಂದಾಪುರ ತಾಲೂಕಿನ ಕೊಡ್ಲಾಡಿ ಗ್ರಾಮದ ನಿವಾಸಿ,ಪ್ರಥಮ ಪಿ.ಯು.ಸಿ ಯಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರತಿಭಾನ್ವಿತ ವಿದ್ಯಾರ್ಥಿ ಶಶಾಂಕ್‍ಗೆ ಮುಂದಿನ ವಿದ್ಯಾಭ್ಯಾಸಕ್ಕಾಗಿ ಅನುಕೂಲವಾಗುವ ಉದ್ದೇಶದಿಂದ ಹೆಮ್ಮಾಡಿ ಸಮರ್ಪಣಾ ಎಜುಕೇಶನಲ್ ಟ್ರಸ್ಟ್ ವಯಿಯಿಂದ 25 ಸಾವಿರ.ರೂ ಅನ್ನು ಟ್ರಸ್ಟ್‍ನ ಅಧ್ಯಕ್ಷ ಜನತಾ ಕಾಲೇಜಿನ ಪ್ರಿನ್ಸಿಪಾಲ್ ಗಣೇಶ ಮೊಗವೀರ ಅವರು ಹಸ್ತಾಂತರ ಮಾಡಿದರು.ಈ ಸಂದರ್ಭದಲ್ಲಿ ಜನತಾ ಕಾಲೇಜಿನ ಉಪನ್ಯಾಸಕ ವೃಂದದವರು,ವಿದ್ಯಾರ್ಥಿ ಪೋಷಕರು ಉಪಸ್ಥಿತರಿದ್ದರು.

ಸೇನಾಪುರದಲ್ಲಿ ಫೆ.18 ರಂದು ಬೃಹತ್ ಪ್ರತಿಭಟನೆ

ಕುಂದಾಪುರ:ಎಕ್ಸ್‍ಪ್ರೆಸ್ ರೈಲು ನಿಲುಗಡೆ ಹೋರಾಟ ಸಮಿತಿ ನೇತೃತ್ವದಲ್ಲಿ ಸೇನಾಪುರ ನಿಲ್ದಾಣದಲ್ಲಿ ಎಕ್ಸ್‍ಪ್ರೆಸ್ ರೈಲು ನಿಲುಗಡೆಗೆ ಒತ್ತಾಯಿಸಿ ಸೇನಾಪುರ ಚಲೋ ಬೃಹತ್ ಪ್ರತಿಭಟನೆ ಫೆ.18 ರಂದು ಭಾನುವಾರ ಸಂಜೆ 3 ಗಂಟೆಗೆ ಸೇನಾಪುರ ರೈಲು ನಿಲ್ದಾಣದ ಎದುರುಗಡೆ ನಡೆಯಲಿದೆ ಎಂದು ಸೇನಾಪುರ ಎಕ್ಸ್‍ಪ್ರೆಸ್ ರೈಲು ನಿಲುಗಡೆ ಹೋರಾಟ ಸಮಿತಿ ಸಂಚಾಲಕ ರಾಜೀವ ಪಡುಕೋಣೆ ತಿಳಿಸಿದ್ದಾರೆ.ಸೇನಾಪುರ ನಿಲ್ದಾಣದಲ್ಲಿ ಎಕ್ಸ್‍ಪ್ರೆಸ್ ರೈಲು ನಿಲುಗಡೆ ಆಗ್ರಹಿಸಿ ಹಲವು ಸಂಘಟನೆಗಳ ನೇತೃತ್ವದಲ್ಲಿ ಅಕ್ಟೋಬರ್ ತಿಂಗಳಿನಲ್ಲಿ ಬೃಹತ್ ಪ್ರತಿಭಟನೆಯನ್ನು ನಡೆಸಲಾಗಿತ್ತು.ಸಂಘಟನೆಗಳು ಸರಕಾರಕ್ಕೆ ನೀಡಿದ ಮೂರು ತಿಂಗಳುಗಳ […]

ನರಸಿಂಹ ದೇವಾಡಿಗರಿಗೆ ಅಂತಾರಾಷ್ಟ್ರೀಯ ಪ್ರಶಸ್ತಿ

ಕುಂದಾಪುರ:ಸಮಾಜ ಸೇವಾ ಕಾರ್ಯಗಳ ಮೂಲಕ ಗುರುತಿಸಿಕೊಂಡಿರುವ ಲಯನ್ ಜೋನ್ ಚೇರ್ ಪರ್ಸನ್ ನರಸಿಂಹ ದೇವಾಡಿಗ ಅವರು ಅಂತಾರಾಷ್ಟ್ರೀಯ ಅತ್ಯುತ್ತಮ ವಲಯ ಅಧ್ಯಕ್ಷ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

You cannot copy content of this page