ಕಂಬದಕೋಣೆ:ಆರ್.ಕೆ ಸಂಜೀವ ರಾವ್ ಮೆಮೋರಿಯಲ್ ಟ್ರೋಫಿ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಉದ್ಘಾಟನೆ

ಕುಂದಾಪುರ:ಆರ್.ಕೆ ಸಂಜೀವ ರಾವ್ ಮೆಮೋರಿಯಲ್ ಟ್ರೋಫಿ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಬೈಂದೂರು ತಾಲೂಕಿನ ಕಂಬದಕೋಣೆಯಲ್ಲಿ ಅದ್ದೂರಿಯಾಗಿ ಶನಿವಾರ ನಡೆಯಿತು. ರಾಷ್ಟ್ರ ಪ್ರಶಸ್ತಿ ವಿಜೇತರಾದ ನಿವೃತ್ತ ಶಿಕ್ಷಕ ಕರುಣಾಕರ ಶೆಟ್ಟಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿ,ಊರಿನ ಒಳಿತಿನ ಬಗ್ಗೆ ಶ್ರಮಿಸಿದ ಆರ್.ಕೆ ಸಂಜೀವ ರಾವ್ ಅವರು ವ್ಯಕ್ತಿ ಅಲ್ಲಾ ಒಂದು ಶಕ್ತಿ ಕುಂದಾಪುರ ತಾಲೂಕಿನಾದ್ಯಂತ ವಿವಿಧ ಕ್ಷೇತ್ರಗಳಲ್ಲಿ ತನ್ನನ್ನು ತೊಡಗಿಸಿಕೊಂಡು ಸಾಮಾಜಿಕ,ಧಾರ್ಮಿಕ,ರಾಜಕೀಯ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಅಪಾರವಾದ ಸೇವೆಯನ್ನು ಸಲ್ಲಿಸಿ ಎಲ್ಲರಿಂದಲೂ ಗೌರವಿಸಲ್ಪಡುವ ಆರ್.ಕೆ […]

ಖಂಬದಕೋಣೆ:ರಾಷ್ಟ್ರೀಯ ರೈತ ದಿನಾಚರಣೆ,ಸಾಧಕ ರೈತರಿಗೆ ಸನ್ಮಾನ

ಕುಂದಾಪುರ:ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ರೈತರಿಗೆ ಮಾದರಿ ಸಂಸ್ಥೆಯಾಗಿ ಸೇವೆ ನೀಡುತ್ತಿರುವುದು ಅತ್ಯಂತ ಮಹತ್ವದ ಸಂಗತಿಯಾಗಿದೆ.ಇದಕ್ಕೆ ಸಂಘದ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ಯವರ ಅನನ್ಯ ಕೊಡುಗೆ ಕಾರಣವಾಗಿದೆ.ರೈತರಿಗೆ ಹೆಚ್ಚು ಸೇವೆ ನೀಡಿದಷ್ಟು ಕೃಷಿ ಸೇರಿದಂತೆ ಹೈನುಗಾರಿಕೆ ಕ್ಷೇತ್ರ ಬಲಪಡಿಸಲು ಸಾಧ್ಯವಾಗುತ್ತದೆ.ಈ ನಿಟ್ಟಿನಲ್ಲಿ ಖ.ರೈ.ಸೇ.ಸಂಘದ ರೈತರ ಕಾರ್ಯಕ್ರಮಗಳು ಮಾದರಿಯಾಗಿ ಗುರುತಿಸಿಕೊಂಡಿದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು. ನಾಗೂರು ಶ್ರೀ ಕೃಷ್ಣ ಲಲಿತ ಕಲಾಮಂದಿರದಲ್ಲಿ ನಡೆದ ರೈತರ ಸೇವಾ ಸಹಕಾರಿ ಸಂಘ ನಿ.,ಉಪ್ಪುಂದ ಹಾಗೂ […]

ಕಿರಿಮಂಜೇಶ್ವರ:ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಕಾರ್ಯಕ್ರಮ

ಕುಂದಾಪುರ:ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಕಿರಿಮಂಜೇಶ್ವರ ಶಾಲೆಯಲ್ಲಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಅದ್ಧೂರಿಯಾಗಿ ಶನಿವಾರ ನಡೆಯಿತು. ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ‌ ಅವರು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಉದ್ಘಾಟಿಸಿ ಮಾತನಾಡಿ,ಮಕ್ಕಳ ಒಳಗೆ ಅಡಗಿರುವ ಪ್ರತಿಭೆಯನ್ನು ಹೊರ ತರುವಲ್ಲಿ ಪ್ರತಿಭಾ ಕಾರಂಜಿ ಅಂತಹ ಕಾರ್ಯಕ್ರಮಗಳು ಬಹಳಷ್ಟು ಉಪಯೋಗಕಾರಿ ಆಗಿದೆ.ವಿದ್ಯಾಭ್ಯಾಸದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸುವುದರಿಂದ ಮಗುವಿನ ಬೌದ್ಧಿಕ ಶಕ್ತಿ ವೃದ್ಧಿ […]

You cannot copy content of this page