ಕಂಪ್ಯೂಟರ್ ತರಬೇತಿ ಕೇಂದ್ರ:ಲೈಬ್ರರಿ,ಪೀಠೋಪಕರಣ ಹಸ್ತಾಂತರ

ಬೈಂದೂರು:ಸಮೃದ್ಧ ಬೈಂದೂರು ಯೋಜನೆಯ ಭಾಗವಾಗಿ ಸ್ವಯಂ ಸ್ಪೂರ್ತಿ ಫೌಂಡೇಶನ್ ಬೆಂಗಳೂರು ವತಿಯಿಂದ ಸ.ಹಿ.ಪ್ರಾ ಶಾಲೆ ಬಿಜೂರು,ಸ.ಹಿ.ಪ್ರಾ ಶಾಲೆ ಕಾಲ್ತೋಡು ಹಾಗೂ ಸ.ಹಿ.ಪ್ರಾ ಶಾಲೆ ಜಡ್ಕಲ್ ನಲ್ಲಿ ನಿರ್ಮಿಸಿದಕಂಪ್ಯೂಟರ್ ಲ್ಯಾಬ್ ಮತ್ತು ಗ್ರಂಥಾಲಯಗಳನ್ನು ಒಳಗೊಂಡ ಸ್ವಯಂ ಸ್ಪೂರ್ತಿ ಕೌಶಲ್ಯ ಕೇಂದ್ರವನ್ನು ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ‌ ಅವರು ಉದ್ಘಾಟಿಸಿ,ಪುಸ್ತಕ ಕ್ರೀಡಾ ಸಾಮಾಗ್ರಿಗಳನ್ನು ಹಸ್ತಾಂತರ ಮಾಡಿದರು.ಫೌಂಡೇಶನ್ ವತಿಯಿಂದ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಶಾಸಕರು ಸಮೃದ್ಧ ಬೈಂದೂರು ಪರಿಕಲ್ಪನೆ ಯೋಜನೆಯ ಬಗ್ಗೆ ಹಾಗೂ […]

ಇಸ್ರೇಲ್‍ನಲ್ಲಿ ಕರಾವಳಿ ಕನ್ನಡಿಗರು ಸುರಕ್ಷಿತ

ಕುಂದಾಪುರ:ಇಸ್ರೇಲ್ ಸೇನಾಪಡೆ ಮತ್ತು ಹಮಾಸ್ ಉಗ್ರರ ನಡುವೆ ನಡೆಯುತ್ತಿರುವ ಕದನ ತೀವೃಗೊಳ್ಳುತ್ತಿರುವ ನಡುವೆ ಕರಾವಳಿ ಭಾಗದಲ್ಲಿ ಆತಂಕ ಎದುರಾಗಿದೆ.ಉಡುಪಿ ಮತ್ತು ಮಂಗಳೂರು ಜಿಲ್ಲೆಯ ಭಾಗ ಒಂದರಲ್ಲೇ ಅಂದಾಜು 2000 ಕ್ಕೂ ಅಧಿಕ ಮಂದಿ ಇಸ್ರೇಲ್‍ನಲ್ಲಿ ಉದ್ಯೋಗವನ್ನು ಮಾಡುತ್ತಿದ್ದಾರೆ.ಇಸ್ರೇಲ್‍ನಲ್ಲಿ ಯುದ್ದದ ಪರಿಸ್ಥಿತಿ ನಿರ್ಮಾಣವಾಗಿದ್ದರಿಂದ ಕುಟುಂಬಸ್ಥರಲ್ಲಿ ಒಂದು ರೀತಿಯ ಭಯದ ವಾತಾವರಣ ನಿರ್ಮಾಣವಾಗಿದ್ದು.ತಮ್ಮ ಮಕ್ಕಳ ಯೋಗ ಕ್ಷೇಮದ ಬಗ್ಗೆ ಚಿಂತಿಸುವಂತೆ ಆಗಿದೆ. ಯುದ್ದದ ಭೀತಿ ಉಂಟಾಗಿದ್ದ ಇಸ್ರೇಲ್-ಗಾಜಾಪಟ್ಟಿಯಿಂದ ಸುಮಾರು 90 ಕಿ.ಮೀ ದೂರದಲ್ಲಿ ವಾಸಮಾಡುತ್ತಿರುವ ಕುಂದಾಪುರ ತಾಲೂಕಿನ ಹೆಮ್ಮಾಡಿ ಗ್ರಾಮದ […]

ಕೊಲ್ಲೂರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ

ಕುಂದಾಪುರ:ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಕರ್ನಾಟಕ ರಾಜ್ಯದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಭೇಟಿ ದರ್ಶನ ಪಡೆದರು.ದೇವಳದ ವ್ಯವಸ್ಥಾಪನಾ ಸಮಿತಿ ವತಿಯಿಂದ ರಾಜ್ಯಪಾಲರನ್ನು ಗೌರವಿಸಲಾಯಿತು.ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ‌, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮತ್ತು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು,ಸದಸ್ಯರು, ಅರ್ಚಕರು ಉಪಸ್ಥಿತರಿದ್ದರು.

You cannot copy content of this page