ಹೆಮ್ಮಾಡಿ:ಕಟ್ಟಡ ನಿರ್ಮಾಣ ಕಾರ್ಯ ಸಹಿತ ತೋಟದ ಕೆಲಸಗಳು ಸಹ ನಡೆಯದಂತಹ ಪರಿಸ್ಥಿತಿ ಉದ್ಭವವಾಗಿದೆ-ಬಿ.ಎಂ ಸುಕುಮಾರ್ ಶೆಟ್ಟಿ

ಕುಂದಾಪುರ:ಕಠಿಣವಾದ ಕಾನೂನನ್ನು ಜಿಲ್ಲೆಯಲ್ಲಿ ಜಾರಿ ಮಾಡಿರುವುದರಿಂದ ಲಾರಿ ಮಾಲೀಕರು ಮತ್ತು ಚಾಲಕರಿಗೆ ಬಹಳಷ್ಟು ತೊಂದರೆ ಆಗಿದ್ದು ಕಟ್ಟಡ ನಿರ್ಮಾಣ ಕಾರ್ಯ ಸಹಿತ ತೋಟದ ಕೆಲಸಗಳು ಸಹ ನಡೆಯದಂತಹ ಪರಿಸ್ಥಿತಿ ಉದ್ಭವವಾಗಿದೆ.ಜನರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಬೈಂದೂರು ಕ್ಷೇತ್ರದ ಮಾಜಿ ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಹೇಳಿದರು.ಲಾರಿ ಮತ್ತು ಟೆಂಪೊ ಮಾಲೀಕರು ಹಾಗೂ ಚಾಲಕರ ಸಂಘ ಬೈಂದೂರು ವಲಯದ ವತಿಯಿಂದ ಹೆಮ್ಮಾಡಿಯಲ್ಲಿ ನಡೆಯುತ್ತಿರುವ 5ನೇ ದಿನದ ಕಟ್ಟಡ ಸಾಮಾಗ್ರಿ ಸಾಗಾಟದ ವಾಹನಗಳ […]

ಬೈಂದೂರು:ಲಾರಿ ಟೆಂಪೋ ಮಾಲೀಕರು ಮತ್ತು ಚಾಲಕರ ಸಂಘದ ಅನಿರ್ದಿಷ್ಟಾವಧಿ ಮುಷ್ಕರ ನಾಲ್ಕನೇ ದಿನಕ್ಕೆ

ಬೈಂದೂರು:3ಎ ಲೈಸೆನ್ಸ್ ರದ್ದು ಪಡಿಸಿರುವುದನ್ನು ವಿರೋಧಿಸಿ ಹಾಗೂ ಇನ್ನಿತರ ಬೇಡಿಕೆಗಳ ಈಡೇರಿಕೆಗಾಗಿ ಬೈಂದೂರು ವಲಯ ಲಾರಿ ಮತ್ತು ಟೆಂಪೋ ಮಾಲಿಕರು ಹಾಗೂ ಚಾಲಕರ ಸಂಘದ ವತಿಯಿಂದ ಅನಿರ್ದಿಷ್ಟಾವಧಿ ಮುಷ್ಕರ ಬೈಂದೂರು ಯಡ್ತರೆ ಸರ್ಕಲ್ ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿದೆ.ಬೇಡಿಕೆ ಈಡೇರಿಕೆಗೆ ಆಗುವ ತನಕ ಮುಷ್ಕರ ಕೈ ಬಿಡಲ್ಲ ಎಂದು ಸಂಘದ ಘೋಷಿಸಿದೆ. ಬೈಂದೂರು ವಲಯ ಲಾರಿ ಮಾಲಿಕರ ಹಾಗೂ ಚಾಲಕರ ಸಂಘದ ಜಂಟಿ ಅಧ್ಯಕ್ಷ ನೆಲ್ಯಾಡಿ ದಿವಾಕರ ಶೆಟ್ಟಿ ಮಾತನಾಡಿ,ಈ ವರೆಗೆ ಇಲ್ಲದ ಕಾನೂನನ್ನು ಪ್ರಸ್ತುತ ಹೇರಿರುವ […]

ಹೆಮ್ಮಾಡಿ:ಲಾರಿ ಮುಷ್ಕರ ನಾಲ್ಕನೇ ದಿನವೂ ಮುಂದುವರಿಕೆ

ಕುಂದಾಪುರ:ಲಾರಿ ಮತ್ತು ಟೆಂಪೆÇ ಮಾಲಕರು ಹಾಗೂ ಚಾಲಕರ ಸಂಘ ಬೈಂದೂರು ವಲಯದ ವತಿಯಿಂದ ಕೈಗೊಂಡಿದ್ದ ಕಟ್ಟಡ ಸಾಮಾಗ್ರಿ ಸಾಗಾಟದ ವಾಹನಗಳ ಅನಿರ್ದಿಷ್ಟವಾಧಿ ಮುಷ್ಕರ ಶನಿವಾರವೂ ಮುಂದುವರೆದಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.ನಾನಾ ಬೇಡಿಕೆಗಳ ಈಡೇರಿಕೆಗಾಗಿ ಕೈಗೊಂಡಿದ್ದ ಮುಷ್ಕರದ ಅಂಗವಾಗಿ ಲಾರಿ ಮಾಲೀಕರು ಮತ್ತು ಚಾಲಕರು ತಮ್ಮ ವಾಹನಗಳನ್ನು ಹೆಮ್ಮಾಡಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನಿಲ್ಲಿಸಿ ಪ್ರತಿಭಟನೆಯನ್ನು ನಡೆಸುತ್ತಾ ಇದ್ದಾರೆ.

You cannot copy content of this page