ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಅರವಿಂದ ಪೂಜಾರಿ ಆಯ್ಕೆ

ಕುಂದಾಪುರ:ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ವ್ಯಾಪ್ತಿಯ ಬೈಂದೂರು ವಿಧಾನಸಭೆ ಕ್ಷೇತ್ರದ ಬೈಂದೂರು ಬ್ಲಾಕ್ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಅರವಿಂದ ಪೂಜಾರಿ ಪಡುಕೋಣೆ ಅವರನ್ನು ಆಯ್ಕೆ ಮಾಡಿ ಕೆಪಿಪಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆದೇಶ ನೀಡಿದ್ದಾರೆ.ಪಕ್ಷದ ಚಟುವಟಿಕೆಯಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿರುವ ಅರವಿಂದ ಪೂಜಾರಿ ಅವರು ಈ ಹಿಂದೆ ಬೈಂದೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಕರ್ತವ್ಯವನ್ನು ನಿರ್ವಹಿಸಿದ್ದರು.

ಕೊಲ್ಲೂರು:ಮಾನಸಿಕ ಅಸ್ವಸ್ಥ,ಮೂಕ ಯುವಕನ ರಕ್ಷಣೆ

ಕುಂದಾಪುರ:ಉಡುಪಿ ಜಿಲ್ಲೆಯ ಬೈಂದೂರು ವೃತ್ತದ ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಮೂರು ದಿನಗಳಿಂದ ಸಾರ್ವಜನಿಕರಿಗೆ ಸ್ವಲ್ಪ ಮಟ್ಟಿನ ತೊಂದರೆಯನ್ನು ನೀಡುತ್ತಿದ್ದ ಮಾನಸಿಕ ಅಸ್ವಸ್ಥ,ಮೂಕ ಯುವಕನನ್ನು ಕೊಲ್ಲೂರು ಪೊಲೀಸರ ವಿನಂತಿ ಮೇರೆಗೆ ಗಂಗೊಳ್ಳಿಯ ಆಪತ್ಭಾಂದವ ಆಂಬ್ಯುಲೆನ್ಸ್ ಇಬ್ರಾಹಿಂ ಗಂಗೊಳ್ಳಿ ಅವರು ಕೊಲ್ಲೂರಿಗೆ ತೆರಳಿ ತನ್ನ ಆಂಬ್ಯುಲೆನ್ಸ್ ಮೂಲಕ ಯುವಕನನ್ನು ಕೇರಳ ರಾಜ್ಯದ ಸ್ನೇಹಾಲಯ ಆಶ್ರಮಕ್ಕೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ.ಸ್ನೇಹಾಲಯ ಮುಖ್ಯಸ್ಥರಾದ ಜೋಸೆಫ್ ಕ್ರಾಸ್ತಾ ಅವರು ವರು ಯುವಕನನ್ನು ಯಾವುದೇ ಫಲಾಪೇಕ್ಷೆ ಇಲ್ಲದೇ ಆತ್ಮೀಯವಾಗಿ ಬರಮಾಡಿಕೊಂಡು ಆಶ್ರಯ ನೀಡಿದರು.ಕೊಲ್ಲೂರು […]

ಆಲೂರು-ಹರ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ವಾರ್ಷಿಕ ಸಭೆ

ಕುಂದಾಪುರ:ವರ್ಷದಿಂದ ವರ್ಷಕ್ಕೆ ಸಂಘವು ಗುರಿ ಮೀರಿದ ಸಾಧನೆಯೊಂದಿಗೆ ಅಭಿವೃದ್ದಿ ಹೊಂದುತ್ತಾ ಬಂದಿದೆ.ಸದಸ್ಯರು ಹಾಗೂ ಗ್ರಾಹಕರ ಸಹಕಾರದಿಂದ ವರದಿ ವರ್ಷದ ಅಂತ್ಯಕ್ಕೆ ರೂ.41,45,18,292.48 ಠೇವಣಾತಿ ಹೊಂದುವುದರೊಂದಿಗೆ ಠೇವಣಾತಿ ಸಂಗ್ರಹಣೆಯಲ್ಲಿ ಶೇ.15ರಷ್ಟು ಪ್ರಗತಿಯನ್ನು ಸಾಧಿಸಿದೆ.ಪ್ರಸ್ತುತ ವರದಿ ಸಾಲಿನಲ್ಲಿ ರೂ.68,00,561 ಲಾಭ ಗಳಿಸಲಾಗಿದೆ.ಶೇ.11 ಡಿವಿಡೆಂಡ್ ನೀಡಲು ನಿರ್ಧರಿಸಲಾಗಿದೆ ಎಂದು ಆಲೂರು-ಹರ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಚ್.ಮಂಜಯ್ಯ ಶೆಟ್ಟಿ ಹೇಳಿದರು.ಆಲೂರು ಶ್ರೀಮೂಕಾಂಬಿಕಾ ಸಭಾ ಭವನದಲ್ಲಿ ನಡೆದ ಆಲೂರು-ಹರ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆಯ […]

You cannot copy content of this page