ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘ ಸಾಮಾನ್ಯ ಸಭೆ:15% ಡಿವಿಡೆಂಟ್ ಘೋಷಣೆ

ಕುಂದಾಪುರ:ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘ ಗಂಗೊಳ್ಳಿ ಅದರ 2022-23ನೇ ಸಾಲಿನ ವಾರ್ಷಿಕ ಸರ್ವಸದಸ್ಯರ ಸಾಮಾನ್ಯ ಸಭೆ ವೀರೇಶ ಮಾಂಗಲ್ಯ ಮಂದಿರ ಗಂಗೊಳ್ಳಿಯಲ್ಲಿ ಶನಿವಾರ ನಡೆಯಿತು.ಮುಳುಗುತಜ್ಞ ದಿನೇಶ್ ಖಾರ್ವಿ ಗಂಗೊಳ್ಳಿ ಲೈಟ್‍ಹೌಸ್ ಅವರನ್ನು ಸಘದ ವತಿಯಿಂದ ಸನ್ಮಾನಿಸಲಾಯಿತು.84ನೇ ವರ್ಷದ ಸಮಾನ್ಯ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ ಮಾತನಾಡಿ,ಸಂಘದ ಸದಸ್ಯರು ಮತ್ತು ಠೇವಣಿದಾರರ ಸಹಕಾರದಿಂದ ಸಂಘವು ಅಭಿವೃದ್ಧಿ ಹೊಂದಲು ಸಹಕಾರಿ ಆಗಿದೆ.ಸದಸ್ಯರು ಸೂಕ್ತವಾದ ಸಲಹೆ ಸೂಚನೆಗಳನ್ನು ನೀಡಿ ಸಂಘದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು […]

ಸಾಧಕರ‌ ಜೀವನದ ಯಶೋಗಾಥೆ ಮಾರ್ಗದರ್ಶಿ ಆಗುತ್ತದೆ -ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಕುಂದಾಪುರ:ಡಾ.ಶ್ರೀನಿವಾಸ ಶೆಟ್ಟಿ ಹಾಲಾಡಿ ಅವರು ಈ ಹಂತಕ್ಕೆ ಬೆಳೆಯುವುದರ ಹಿಂದೆ ಸಾಕಷ್ಟು ಪರಿಶ್ರಮವಿದೆ.ಅವರ ಸಾಧನೆಯ ಹಾದಿಯನ್ನು ನಾವು ಮೆಲುಕು ಹಾಕಬೇಕು. ಮುನ್ನೆಡೆಗೆ ಇಂಥಹ ಸಾಧಕರ ಜೀವನದ ಯಶೋಗಾಥೆ ಮಾರ್ಗದರ್ಶಿ ಆಗುತ್ತದೆ ಎಂದು ರಾಜ್ಯ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಡಾ.ಶ್ರೀನಿವಾಸ ಶೆಟ್ಟಿ ಹಾಲಾಡಿ ಹುಟ್ಟೂರ ಸನ್ಮಾನ ಸಮಿತಿ ನೇತೃತ್ವದಲ್ಲಿ.ಹಾಲಾಡಿಯ ಶ್ರೀಮತಿ ಶಾಲಿನಿ ಜಿ.ಶಂಕರ್ ಕನ್ವೆಶನ್ ಸೆಂಟರ್‍ನಲ್ಲಿ ನಡೆದ ಗೌರವ ಡಾಕ್ಟರ್ ಆಫ್ ಸೈನ್ಸ್ ಪುರಸ್ಕೃತರಾದ ಮೈಸೂರು ಮರ್ಕಂಟೈಲ್ ಕಂಪನಿ […]

ಗಂಗೊಳ್ಳಿ:ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸಮಾರೋಪ ಸಮಾರಂಭ

ಕುಂದಾಪುರ:ಉಡುಪಿ ಜಿಲ್ಲಾ ಪಂಚಾಯತ್,ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿ ಉಡುಪಿ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಹಾಗೂ ಸ.ವಿ. ಆಂಗ್ಲ ಮಾಧ್ಯಮ ಪ್ರೌಢಶಾಲೆ ಗಂಗೊಳ್ಳಿ ಆಶ್ರಯದಲ್ಲಿ ಗಂಗೊಳ್ಳಿ ಎಸ್.ವಿ. ಪದವಿ ಪೂರ್ವ ಕಾಲೇಜಿನ ವಠಾರದಲ್ಲಿ ನಡೆದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ-ಬಾಲಕಿಯರ ಉಡುಪಿ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದ ಸಮಾರೋಪ ಸಮಾರಂಭ ಗುರುವಾರ ನಡೆಯಿತು.ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಎಂ.ನಾಗೇಂದ್ರ ಪೈ,ಶಾಲೆಯ ಶಿಕ್ಷಕ-ರಕ್ಷಕ ಸಮಿತಿ ಉಪಾಧ್ಯಕ್ಷ ಜಿ.ವಿಠಲ ಶೆಣೈ ವಿಜೇತರಿಗೆ ಬಹುಮಾನ ವಿತರಿಸಿ ಶುಭ ಹಾರೈಸಿದರು.ಪಂಚಾಯತ್ ಸದಸ್ಯ […]

You cannot copy content of this page