ಶ್ರೀಗೋಪಾಲಕೃಷ್ಣ ದೇವಸ್ಥಾನ ಅರಾಟೆ

ಕುಂದಾಪುರ:ಹೊಸಾಡು ಗ್ರಾಮದ ಅರಾಟೆ ಶ್ರೀಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಬುಧವಾರ ನಡೆಯಿತು.ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಶ್ರೀಗೋಪಾಲ ಕೃಷ್ಣ ದೇವರಿಗೆ ಲಕ್ಷ ತುಳಸಿ ಅರ್ಚನೆಯನ್ನು ಸಮರ್ಪಿಸಲಾಯಿತು.ಗ್ರಾಮಸ್ಥರು,ಅರ್ಚಕವೃಂದದವರು ಉಪಸ್ಥಿತರರಿದ್ದರು.

ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಹೆಮ್ಮಾಡಿ ಜನತಾ ಕಾಲೇಜಿಗೆ-21 ಪದಕ: ಜಿಲ್ಲಾ ಚಾಂಪಿಯನ್ ಪಟ್ಟ

ಕುಂದಾಪುರ-ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಹೆಮ್ಮಾಡಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು 13 ಚಿನ್ನ,7 ಬೆಳ್ಳಿ,1 ಕಂಚಿನ ಪದಕ ಸೇರಿ ಒಟ್ಟು 21ಪದಕ ಗಳಿಸಿ ಇತಿಹಾಸ ಸೃಷ್ಟಿಸಿದ್ದಾರೆ. ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದಹರ್ಷಿಣಿ ಪ್ರಥಮ ಪಿ.ಯು.ಸಿ.59 ಕೆ.ಜಿ ವಿಭಾಗದಲ್ಲಿ ಚಿನ್ನ,62ಕೆ.ಜಿ.ವಿಭಾಗದಲ್ಲಿ ಭೂಮಿಕಾ ದ್ವಿತೀಯ ಪಿ.ಯು.ಸಿ.ಚಿನ್ನ,68ಕೆ.ಜಿ.ವಿಭಾಗದಲ್ಲಿ ಅಮಿಶಾ ಚೌದ್ರಿ […]

ಹೆಮ್ಮಾಡಿ ಜನತಾ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ,ಗುರು ನಮನ ಕಾರ್ಯಕ್ರಮ

ಕುಂದಾಪುರ:ಶಿಕ್ಷಣ ಮತ್ತು ಸಂಸ್ಕಾರದ ಕುರಿತಾಗಿ ಸಾಕಷ್ಟು ಸ್ವಾರಸ್ಯಕರವಾಗಿರುವ ವಿಚಾರಗಳನ್ನು ಮನ ಮುಟ್ಟುವಂತೆ ವಿದ್ಯಾರ್ಥಿಗಳಿಗೆ ಜನತಾ ಕಾಲೇಜು ಶಿಕ್ಷಣ ಸಂಸ್ಥೆ ಬೋಧನೆ ಮಾಡುತ್ತಿರುವುದು ಶೈಕ್ಷಣಿಕ ಕ್ರಾಂತಿಗೆ ಮುನ್ನುಡಿ ಬರೆದಂತೆ ಇದೆ ಎಂದು ಕಂಬದಕೋಣೆ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಶಿಕ್ಷಕ ವಿಶ್ವನಾಥ ಶೆಟ್ಟಿ ಹೇಳಿದರು.ಕುಂದಾಪುರ ತಾಲೂಕಿನ ಹೆಮ್ಮಾಡಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆದ ಶಿಕ್ಷಕರ ದಿನಾಚರಣೆ ಮತ್ತು ಗುರು ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಆಡಳಿತ ಮಂಡಳಿ ಅಧ್ಯಕ್ಷರಾದ ಕಾಲೇಜಿನ ಪ್ರಿನ್ಸಿಪಾಲ್ […]

You cannot copy content of this page