ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ

ಬೈಂದೂರು:ಪಡುಕೋಣೆ ನಿವಾಸಿ ಪ್ರಶಾಂತ್ ಸುನಂದಾ ದಂಪತಿಗಳ ಪುತ್ರಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿನಿ ಸಿಂಧು (16) ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ಗಂಗೊಳ್ಳಿ ಪೆÇಲೀಸ್ ಠಾಣೆ ವ್ಯಾಪ್ತಿಯ ಪಡುಕೋಣೆಯಲ್ಲಿ ಗುರುವಾರ ನಡೆದಿದೆ.ಕುಂದಾಪುರ ವಡೇರಹೋಬಳಿಯಲ್ಲಿರುವ ಬಾಲಕಿಯರ ವಸತಿ ನಿಲಯದಲ್ಲಿದ್ದು,ಸಮೀಪದ ಶಾಲೆಯೊಂದರಲ್ಲಿ ಸಿಂಧು 10ನೇ ತರಗತಿಯಲ್ಲಿ ವಿದ್ಯಾಭ್ಯಾಸವನ್ನು ಮಾಡುತ್ತಿದ್ದಾರೆ.ಕಳದೆರಡು ದಿನಗಳ ಹಿಂದೆ ಅನಾರೋಗ್ಯದ ಕಾರಣದಿಂದ ಸಿಂಧು ಮನೆಗೆ ತೆರಳಿದ್ದರು,ಬುಧವಾರ ಅವರ ತಾಯಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.ಗುರುವಾರ ಶಾಲೆಗೆ ತೆರಳಬೇಕಿದ್ದ ಸಿಂಧು ಅವರು ಶಾಲೆಗೆ ತೆರಳದೆ ನೇಣು ಬಿಗಿದುಕೊಂಡು ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ಮೃತದೇಹವನ್ನು […]

ಗಂಗೊಳ್ಳಿ ಗ್ರಾಮ ಪಂಚಾಯತ್:ಗೃಹ ಲಕ್ಷ್ಮೀ ಕಾರ್ಯಕ್ರಮ ವೀಕ್ಷಣೆ

ಕುಂದಾಪುರ:ಗಂಗೊಳ್ಳಿ ಗ್ರಾಮ ಪಂಚಾಯತ್ ವತಿಯಿಂದ ಗೃಹ ಲಕ್ಷ್ಮೀ ಯೋಜನೆಯ ಲೈವ್ ವೀಕ್ಷಣೆ ಕಾರ್ಯಕ್ರಮ ಗಂಗೊಳ್ಳಿ ರಾಮ ಮಂದಿರದಲ್ಲಿ ನಡೆಯಿತು.ಗೃಹ ಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಪಂಚಾಯತ್ ವತಿಯಿಂದ ಅರಿಶಿನ ಕುಂಕುಮ,ಹೂ ನೀಡಿ ಸ್ವಾಗತಿಸಿಕೊಳ್ಳಲಾಯಿತು.ನೂರಾರು ಫಲಾನುಭವಿಗಳು ಭಾಗವಹಿಸಿದ್ದರು.ಗಂಗೊಳ್ಳಿ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ್ ಖಾರ್ವಿ,ಉಪಾಧ್ಯಕ್ಷೆ ಪ್ರೇಮಾ ಸಿ ಪೂಜಾರಿ ಮತ್ತು ಸದಸ್ಯರು ಹಾಗೂ ಸಿಬ್ಬಂದಿಗಳು,ನೋಡಲ್ ಅಧಿಕಾರಿ ರಾಜುಕುಮಾರ್ ಉಪಸ್ಥಿತರಿದ್ದರು.ಗಂಗೊಳ್ಳಿ ಗ್ರಾಮ ಪಂಚಾಯತ್ ಒಂದರಲ್ಲೆ ಸುಮಾರು 3500 ಮಹಿಳೆಯರು ಗೃಹ ಲಕ್ಷ್ಮೀ ಯೋಜನೆಗೆ ಹೆಸರನ್ನು ನೋಂದಾವಣೆ ಮಾಡಿಕೊಂಡಿದ್ದಾರೆ.

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ:ಹೆಮ್ಮಾಡಿ ಜನತಾ ಕಾಲೇಜಿನ ವಿದ್ಯಾರ್ಥಿಗಳು ಸಾಧನೆ

ಕುಂದಾಪುರ:ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಉಡುಪಿ ತ್ರಿಷಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಹೆಮ್ಮಾಡಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಪ್ರೀತಮ್ 40 ಕೆ.ಜಿ ವಿಭಾಗದಲ್ಲಿ ದ್ವಿತೀಯ ಸ್ಥಾನ ಹಾಗೂ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಸುಮನ್ ಕೆ.ಎಸ್ 58 ಕೆ.ಜಿ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಿನ್ಸಿಪಾಲ್,ಬೋಧಕ,ಬೋಧಕೇತರ ವೃಂದದವರು ಅಭಿನಂದನೆ […]

You cannot copy content of this page