ಚಂದ್ರಯಾನ-3 ಸಾಫ್ಟ್ ಲ್ಯಾಂಡಿಂಗ್ ಯಶಸ್ವಿ-ಭಾರತೀಯರು ಸಂಭ್ರಮಾಚರಣೆ

ಬೆಂಗಳೂರು-ವಿಶ್ವದಾದ್ಯಂತ ಬಹಳಷ್ಟು ಕುತೂಹಲ ಮೂಡಿಸಿದ ಭಾರತೀಯರ ಮಹತ್ವಾಕಾಂಕ್ಷಿಯ ಚಂದ್ರಯಾನ -3 ಸಾಫ್ಟ್ ಲ್ಯಾಂಡಿಂಗ್ ಯಶಸ್ವಿಯಾಗಿ ನೆರವೇರಿದೆ.ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಇಸ್ರೋ ವಿಜ್ಞಾನಿಗಳು, ಭಾರತೀಯರು ಸಂಭ್ರಮಾಚರಣೆಯನ್ನು ಮಾಡಿದರು.ಚಂದ್ರಯಾನ -3 ಉಡಾವಣೆ ಯಶಸ್ವಿನ ಹಾದಿಯಲ್ಲಿದ್ದ ಇಸ್ರೋ ವಿಜ್ಞಾನಿಗಳಿಗೆ ಚಂದ್ರನ ಅಂಗಳದಲ್ಲಿ ಲ್ಯಾಂಡರ್ ಅನ್ನು ಇಳಿಸಿ ಸಾಫ್ಟ್ ಲ್ಯಾಂಡಿಂಗ್ ಮಾಡುವುದು ಮಹತ್ವದ ಕೆಲಸವಾಗಿತ್ತು.ಚಂದ್ರಯಾನ-3 ಯಶಸ್ವಿಯಾಗಿ ಲ್ಯಾಂಡಿಂಗ್ ಆಗುವುದರ ಮುಖೇನ ಶತಕೋಟಿ ಭಾರತೀಯರ ಹಾರೈಕೆ ಫಲಿಸಿದೆ.ಬಹುತೇಕ ಕಾಲ ಕತ್ತಲೆ ಇರುವ ದಕ್ಷಿಣ ಧ್ರುವದಲ್ಲಿ ಇದುವರೆಗೆ ಯಾರೂ ಸಂಶೋಧನೆ ಮಾಡಲು ಮುಂದಾಗದ […]

ಹಕ್ಲಾಡಿ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಪ್ರೇಮ ದೇವಾಡಿಗ ಆಯ್ಕೆ

ಕುಂದಾಪುರ:ಹಕ್ಲಾಡಿ ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಬಿಜೆಪಿ ಪಕ್ಷದ ಬೆಂಬಲಿತ ಪಂಚಾಯತ್ ಸದಸ್ಯರಾದ ಪ್ರೇಮ ದೇವಾಡಿಗ ಹಾಗೂ ಉಪಾಧ್ಯಕ್ಷರಾಗಿ ಸುಭಾಶ್ಚಂದ್ರ ಶೆಟ್ಟಿ ಹೊಳ್ಮಗೆ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಹಕ್ಲಾಡಿ ಗ್ರಾಮ ಪಂಚಾಯತಿಯಲ್ಲಿ ಬಿಜೆಪಿ ಬೆಂಬಲಿತ 14 ಸದಸ್ಯರು ಹಾಗೂ ಕಾಂಗ್ರೆಸ್ ಬೆಂಬಲಿತ 02 ಸದಸ್ಯರು ಸೇರಿ ಒಟ್ಟು 16 ಸದಸ್ಯರಿದ್ದಾರೆ.ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರು ನಾಮಪತ್ರ ಸಲ್ಲಿಕೆ ಮಾಡದಿರುವ ಹಿನ್ನೆಲೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಗೊಂಡರು.

ಸುಳ್ಳು ಸುದ್ದಿ ಪತ್ತೆ-ನಿಯಂತ್ರಣ-ಕಠಿಣ ಶಿಕ್ಷೆಗೆ ತುರ್ತು ಕ್ರಮ :ಮುಖ್ಯ ಮಂತ್ರಿ ಸಿದ್ದರಾಮಯ್ಯ

ಬೆಂಗಳೂರು:ಪ್ರಜಾಪ್ರಭುತ್ವಕ್ಕೆ ಬೆದರಿಕೆ ಹಾಗೂ ಸಮಾಜದ ದ್ರುವೀಕರಣಕ್ಕೆ ಸುಳ್ಳು ಸುದ್ದಿಗಳು ಕಾರಣವಾಗಿದ್ದು, ಇದರ ನಿಯಂತ್ರಣ ಅತ್ಯಗತ್ಯ ಎಂದು ಅಭಿಪ್ರಾಯಪಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆ ಸೇರಿದಂತೆ ಅಗತ್ಯ ಇರುವ ಎಲ್ಲಾ ನಿಯಮ ಮತ್ತು ಕಾನೂನು ರೂಪಿಸುವ ಪ್ರಯತ್ನಕ್ಕೆ ಗ್ರೀನ್ ಸಿಗ್ನಲ್ ನೀಡಿದರು.ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸೈಬರ್ ಸುರಕ್ಷತೆಗೆ ಸಂಬಂಧಿಸಿದಂತೆ ಸಭೆಯಲ್ಲಿ ಅವರು ಈ ತೀರ್ಮಾನ ಮಾಡಿದರು.ಸುಳ್ಳು ಸುದ್ದಿಗಳ ಮತ್ತು ಸುಳ್ಳು ಸುದ್ದಿ ಸೃಷ್ಟಿಸುವ ಸಿಂಡಿಕೇಟ್ ಗಳ ಪತ್ತೆ,ಸುಳ್ಳು ಸುದ್ದಿ […]

You cannot copy content of this page