ಡಿಸೆಂಬರ್.14 ರಂದು ಬಡಾಕೆರೆ ಶಾಲೆ ಸ್ನೇಹ ಸಮ್ಮಿಲನ,ಶಾಲಾ ವಾರ್ಷಿಕೋತ್ಸವ

ಕುಂದಾಪುರ:ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ (ಉತ್ತರ) ಬಡಾಕೆರೆಯಲ್ಲಿ ಡಿಸೆಂಬರ್ 14.ರಂದು ಸ್ನೇಹ ಸಮ್ಮಿಲನ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಲಿದೆ.ಸ್ನೇಹ ಸಮ್ಮಿಲನ ಹಾಗೂ ಶಾಲಾ ವಾರ್ಷಿಕೋತ್ಸವ ಅಂಗವಾಗಿ ಬೆಳಿಗ್ಗೆ 11 ರಿಂದ ಅರೆಹೊಳೆ ಪ್ರತಿಷ್ಠಾನ ನಂದಗೋಕುಲ ನೃತ್ಯ ತಂಡದಿಂದ ನೃತ್ಯ ವೈಭವ,12.30 ರಿಂದ 1.30 ರ ತನಕ ಗುರು ವಂದನಾ ಕಾರ್ಯಕ್ರಮ,2.30 ರಿಂದ ವಿವಿಧ ಶಾಲಾ ಮಕ್ಕಳಿಂದ ನಾಟ್ಯ ವೈಭವ,ನೃತ್ಯ ಸ್ಪರ್ಧಾ ಕಾರ್ಯಕ್ರಮ.4.30 ರಿಂದ 5.30 ರ ತನಕ ಶಾಲಾ ಶಿಕ್ಷಕಿಯರು ಹಾಗೂ ಹಳೆ […]

ಧನ್ವಿ ಪೂಜಾರಿ ಮರವಂತೆಗೆ ಚಿನ್ನದ ಪದಕ

ಕುಂದಾಪುರ:ವರ್ಷಿಣಿ ಯೋಗ ಎಜ್ಯುಕೇಶನ್ ಆಂಡ್ ಕಲ್ಚರಲ್ ಸ್ಪೋಟ್ರ್ಸ್ ಟ್ರಸ್ಟ್ ಶಿವಮೊಗ್ಗ ವತಿಯಿಂದ ಥಾಯ್ಲೆಂಡ್‍ನಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಯೋಗ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹೆಮ್ಮಾಡಿ ಜನತಾ ಕಾಲೇಜಿನ ವಿಜ್ಞಾನ ವಿಭಾಗದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಧನ್ವಿ ಪೂಜಾರಿ ಮರವಂತೆ ಭಾರತ ದಿಂದ ಪ್ರತಿನಿಧಿಸಿ ಚಿನ್ನದ ಪದಕ ಗಳಿಸಿದ್ದಾರೆ.ವಿದ್ಯಾರ್ಥಿ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಿನ್ಸಿಪಾಲ್,ಬೋಧಕ ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

ಪಾದಾಚಾರಿಗೆ ಬೈಕ್ ಡಿಕ್ಕಿ:ಮೂವರಿಗೆ ಗಾಯ

ಕುಂದಾಪುರ:ಹೆಮ್ಮಾಡಿ ಯಿಂದ ತಲ್ಲೂರು ಕಡೆಗೆ ಸಾಗುತ್ತಿದ್ದ ಬೈಕ್ ಜಾಲಾಡಿಯಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದ ಪರಿಣಾಮ ಪಾದಾಚಾರಿ ಕೊಲ್ಲೂರು ದುರ್ಗಾ ಲಾಡ್ಜ್ ಓನರ್ ಮಂಜುನಾಥ ಭಟ್ ಗಂಭೀರ ಸ್ವರೂಪದ ಗಾಯದೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ.ಬೈಕ್ ಸವಾರರಾದ ರೋಹಿತ್ ಮತ್ತು ಅಪ್ಪಯ್ಯ ಸ್ವಾಮಿ ಮಾಲಾಧಾರಿ ದಕ್ಷ ಎನ್ನುವರಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದ್ದರು.ಆ್ಯಂಬುಲೆನ್ಸ್ ಇಬ್ರಾಹಿಂ ಗಂಗೊಳ್ಳಿ ಗಾಯಾಳುಗಳನ್ನು ಆಸ್ಪತ್ರೆ ಸಾಗಿಸಲು ಸಹಕರಿಸಿದರು.

You cannot copy content of this page