ಕರ್ಕಾಟಕ ಅಮಾವಾಸ್ಯೆ ಜಾತ್ರಾ ಮಹೋತ್ಸವ ಕಾರ್ಯಕ್ರಮ

ಬೈಂದೂರು:ಮರವಂತೆ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿ ಕರ್ಕಾಟಕ ಅಮಾವಾಸ್ಯೆ ಜಾತ್ರಾ ಮಹೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಬುಧವಾರ ಜರುಗಿತು.ಕರ್ಕಾಟಕ ಅಮಾವಾಸ್ಯೆ ಜಾತ್ರಾ ಮಹೋತ್ಸವ ಕಾರ್ಯಕ್ರಮದ ಪ್ರಯುಕ್ತ ಶ್ರೀವರಾಹ ಸ್ವಾಮಿ,ಶ್ರೀವಿಷ್ಣು ಮತ್ತು ಶ್ರೀ ನರಸಿಂಹ ದೇವರಿಗೆ ವಿಶೇಷ ಅಲಂಕಾರ ಪೂಜೆ,ಮಂಗಳಾರತಿ ಮತ್ತು ಹಣ್ಣುಕಾಯಿ ಸೇವೆ ನಡೆಯಿತು.ಬೆಳೆಗೆ ಶ್ರೇಯಸ್ಸು ಆಗಲಿ ಎಂದು ರೈತಾಪಿ ಜನರು ಮಳೆ ದೇವರಾದ ಶ್ರೀವರಾಹ ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು.ನವ ಜೋಡಿಗಳು ಶ್ರೀ ಕ್ಷೇತ್ರಕ್ಕೆ ಆಗಮಿಸಿ ದೇವರ ದರ್ಶನ ಪಡೆದರು.ದೇವಳದ ವ್ಯವಸ್ಥಾಪನಾ ಸಮಿತಿ […]

ಹೆಮ್ಮಾಡಿ ಪಂಚಾಯತಿನ ಅಧ್ಯಕ್ಷರಾಗಿ ನೇತ್ರಾವತಿ ಆಯ್ಕೆ

ಕುಂದಾಪುರ:ಹೆಮ್ಮಾಡಿ ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷರಾಗಿ ನೇತ್ರಾವತಿ ಹಾಗೂ ಉಪಾಧ್ಯಕ್ಷರಾಗಿ ಶೋಭಾ ಡಿ ಕಾಂಚನ್ ಆಯ್ಕೆಯಾಗಿದ್ದಾರೆ.11 ಪಂಚಾಯತ್ ಸದಸ್ಯರೊಳಗೊಂಡ ಹೆಮ್ಮಾಡಿ ಪಂಚಾಯತ್‍ನಲ್ಲಿ ಕಾಂಗ್ರೆಸ್ ಬೆಂಬಲಿತ 08 ಸದಸ್ಯರು ಹಾಗೂ ಬಿಜೆಪಿ ಬೆಂಬಲಿತ 03 ಸದಸ್ಯರಿದ್ದಾರೆ ನಿರೀಕ್ಷೆಯಂತೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ಬೆಂಬಲಿತ ಪಕ್ಷದ ಸದಸ್ಯರ ಪಾಲಾಗಿದೆ.

ಹಾರ್ದಳ್ಳಿ-ಮಂಡಳ್ಳಿ ಗ್ರಾಮ ಪಂಚಾಯತ್ ಕಾರ್ಯಾಲಯ ಉದ್ಘಾಟನೆ

ಕುಂದಾಪುರ:ಉಡುಪಿ ಜಿಲ್ಲೆಯ ಕುಂದಾಪುರ ಕಾತಾಲೂಕಿನ ಹಾರ್ದಳ್ಳಿ-ಮಂಡಳ್ಳಿ ಗ್ರಾಮ ಪಂಚಾಯತನ ನೂತನ ಕಾರ್ಯಾಲಯವನ್ನು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಂಗಳವಾರ ಉದ್ಘಾಟಿಸಿದರು.ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ,ವಿಧಾನ ಪರಿಷತ್ ಸದಸ್ಯರಾದ ಕೋಟಾ ಶ್ರೀನಿವಾಸ ಪೂಜಾರಿ, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ ಹಾಕೆ,ಜಿಲ್ಲಾ ಪಂಚಾಯತ್ ಸಿಇಒ ಎಚ್. ಪ್ರಸನ್ನ,ಉಪ ವಿಭಾಗಧಿಕಾರಿ ರಶ್ಮಿ,ಕಾಂಗ್ರೆಸ್ ಮುಖಂಡರಾದ ಉದಯಕುಮಾರ್ ಶೆಟ್ಟಿ, ದಿನೇಶ್ ಹೆಗ್ಡೆ, ಗ್ರಾಮಸ್ಥರು ಉಪಸ್ಥಿತರಿದ್ದರು.

You cannot copy content of this page