ವಿದ್ಯಾರ್ಥಿ ನಿಲಯಕ್ಕೆ ಜಿಲ್ಲಾಧಿಕಾರಿ ಅನಿರೀಕ್ಷಿತ ಭೇಟಿ

ಕುಂದಾಪುರ:ಬೈಂದೂರುನಲ್ಲಿರುವ ಮೆಟ್ರಿಕ್ ನಂತರದ ಪರಿಶಿಷ್ಟ ವರ್ಗಗಳ ಸರಕಾರಿ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅವರು ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಹಾಸ್ಟೆಲ್‍ನಲ್ಲಿ ಸ್ವಚ್ಛತೆ ಮತ್ತು ವಿದ್ಯಾರ್ಥಿಗಳ ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ನಿರ್ದೇಶನ ನೀಡಿದರು.ಈ ಸಂದರ್ಭದಲ್ಲಿ ಬೈಂದೂರು ತಹಶೀಲ್ದಾರ್ ಶ್ರೀಕಾಂತ್ ಎಸ್ ಹೆಗ್ಡೆ ಉಪಸ್ಥಿತರಿದ್ದರು.

ಶಂಕರನಾರಾಯಣ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕ ಗಂಟಿಹೊಳೆ ಭೇಟಿ

ಕುಂದಾಪುರ:ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ‌ ಅವರು ಶಂಕರನಾರಾಯಣ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ,ಆಸ್ಪತ್ರೆಯ ವೈದ್ಯಾಧಿಕಾರಿ ಜತೆ ಚರ್ಚೆಸಿ ಮಾತುಕತೆ ನಡೆಸಿದರು.ಶಂಕರನಾರಾಯಣ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಎಲ್ಲ ರೀತಿಯ ಸೌಲಭ್ಯಗಳಿದ್ದರು ಉತ್ತಮ ರೀತಿಯಲ್ಲಿ ಸೇವೆಯನ್ನು ನೀಡುವಲ್ಲಿ ವೈದ್ಯಾಧಿಕಾರಿಗಳು ಸಹಿತ ಸಿಬ್ಬಂದಿಗಳು ನಿರ್ಲಕ್ಷ್ಯ ತೋರುತ್ತಿದ್ದುದರ ಬಗ್ಗೆ ಮಾಹಿತಿ ಪಡೆದು ತರಾಟೆಗೆ ತೆಗೆದುಕೊಂಡರು.ಕರ್ತವ್ಯ ನಿರ್ಲಕ್ಷ್ಯವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ, ಮತ್ತೆ ಇದೇ ರೀತಿ ಮುಂದುವರೆದರೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದರು.ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ […]

ಸೈಕಲ್‍ನಲ್ಲಿ ದೇಶಾದ್ಯಂತ ಸುತ್ತಿ ಡ್ರಗ್ಸ್ ಜಾಗೃತಿ ಅಭಿಯಾನ

ಕುಂದಾಪುರ:ಗಾಂಜಾ,ಡ್ರಗ್ಸ್‍ನಂತಹ ಮಾದಕ ವಸ್ತುಗಳಿಗೆ ಯುವಕರು ಬಲಿ ಆಗುತ್ತಿರುವ ಹಿನ್ನೆಲೆಯಲ್ಲಿ ಜನ ಜಾಗೃತಿಯನ್ನು ಮೂಡಿಸುವ ಸಲುವಾಗಿ ಛತ್ತೀಸ್‍ಗಢ ರಾಯಭಾಗ್ ಮೂಲದ ನಿವಾಸಿ ನೇಮ್ ಕುಮಾರ್ ಎನ್ನುವ ಯುವಕ ಸೈಕಲ್‍ನಲ್ಲೆ ದೇಶಾದ್ಯಂತ ಸುತ್ತಿ ಮಾದಕ ವಸ್ತುಗಳ ವಿರುದ್ಧ ಅಭಿಯಾನವನ್ನು ಕೈಗೊಂಡಿದ್ದಾರೆ.ಕಳೆದ 75 ದಿನಗಳ ಹಿಂದೆ ಛತ್ತೀಸ್‍ಗಢ ರಾಯಭಾಗ್‍ನಿಂದ ಸೈಕಲ್ ಮೂಲಕ ತೆರಳಿದ್ದ ನೇಮ್ ಕುಮಾರ್ ರಾಷ್ಟ್ರೀಯ ಹೆದ್ದಾರಿ ಮೂಲಕ ಸಾಗಿ ಬಂದಿದ್ದ ಅವರು ಬುಧವಾರ ಕುಂದಾಪುರ ತಾಲೂಕನ್ನು ಪ್ರವೇಶ ಮಾಡಿದ್ದಾರೆ.ಈ ಸೈಕಲ್ ಅಭಿಯಾನ ಒಂದು ವರ್ಷಗಳ ಕಾಲ ಮುಂದುವರೆಯಲಿದ್ದು ದೇಶಾದ್ಯಂತ […]

You cannot copy content of this page