ಬೈಂದೂರು:ಕೆಂಪು ಕಲ್ಲು,ಮರಳು ನೀಡುವಂತೆ ಆಗ್ರಹ,ರಾಜಕೀಯ ತಿರುವು ಪಡೆದ ಬೃಹತ್ ಪ್ರತಿಭಟನೆ

ಕುಂದಾಪುರ:ಕಳೆದ ಎರಡು ವರ್ಷಗಳಿಂದ ಉಡುಪಿ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಪೂರೈಕೆ ಸಮಸ್ಯೆಯಿಂದಾಗಿ ನಿರ್ಮಾಣ ಕ್ಷೇತ್ರಕ್ಕೆ ಭಾರೀ ಹೊಡೆತ ಬಿದ್ದಿದ್ದು, ಇದನ್ನು ವಿರೋಧಿಸಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರ ನೇತೃತ್ವದಲ್ಲಿ,ಕಲ್ಲುಕೋರೆ ಮಾಲೀಕರ ಸಂಘ ಹಾಗೂ ಲಾರಿ ಮಾಲೀಕರ ಸಂಘ ಬೈಂದೂರು ಸಹಭಾಗಿತ್ವದಲ್ಲಿ ಬೈಂದೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.ಜಿಲ್ಲಾಡಳಿತ ಹಾಗೂ ಗಣಿ ಇಲಾಖೆಯ ಅವೈಜ್ಞಾನಿಕ ನಿಯಮಗಳಿಂದಾಗಿ ಕಟ್ಟಡ ನಿರ್ಮಾಣ ಕ್ಷೇತ್ರದ ಕಾರ್ಮಿಕರು ಕೆಲಸವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಲವಾರು ಬಾರಿ ಮೌಖಿಕ ಮನವಿ,‌ ಲಿಖಿತ ಮನವಿ ಸಲ್ಲಿಸಿದರೂ […]

ಕೋಡಿ ಬೀಚ್ ನಲ್ಲಿ ಸಹೋದರಿಬ್ಬರು ನೀರಿನಲ್ಲಿ ಮುಳುಗಿ ಸಾವು,ಒಬ್ಬನ ರಕ್ಷಣೆ

ಕುಂದಾಪುರ:ಕೋಡಿ ಬೀಚ್‍ನಲ್ಲಿ ಈಜಲು ತೆರಳಿದ್ದ ಸಿದ್ದಾಪುರ ಸಮೀಪದ ಅಂಪಾರು ಮೂಡುಬಗೆ ನಿವಾಸಿಯಾಗಿರುವ ಧನರಾಜ್ (23) ವರ್ಷ,ದರ್ಶನ್ (18) ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.ಧನುಷ್ (20) ಪ್ರಾಣಾಪಾಯದಿಂದ ಪಾರಾಗಿದ್ದು ಕುಂದಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ರಕ್ಷಣೆಗೆ ಒಳಪಟ್ಟ ಯುವಕ ಸಹಿತ,ಮೃತಪಟ್ಟ ಯುವಕರಿಬ್ಬರು ಒಂದೇ ತಾಯಿಯ ಮಕ್ಕಳಾಗಿದ್ದಾರೆ,ಕಂಪನಿಯಲ್ಲಿ ಉದ್ಯೋಗದಲ್ಲಿರುವ ಇವರು ಮಧ್ಯಾಹ್ನ ಸಮಯದಲ್ಲಿ ಕೋಡಿ ಬೀಚ್ಗೆ ತೆರಳಿದ್ದಾರೆ ಎನ್ನಲಾಗಿದೆ.ಶನಿವಾರ ಸಂಜೆ ಕುಟುಂಬ ಸಮೇತರಾಗಿ ಕೋಡಿ ಬೀಚ್ ಗೆ ಬಂದಿದ್ದು ಇವರು ಸಮುದ್ರದಲ್ಲಿ ಸ್ನಾನಕ್ಕೆ ಇಳಿದ ಸಂದರ್ಭ ಕಡಲ ಅಲೆಗೆ ಈ ಮೂವರು ಸಹೋದರರು […]

ಡಾನ್ ಬಾಸ್ಕೊ ರಜತ ಮಹೋತ್ಸವ ಸಂಭ್ರಮಕ್ಕೆ ಚಾಲನೆ,ರಜತ ಲೋಗೋ ಬಿಡುಗಡೆ

ಕುಂದಾಪುರ:2000 ಇಸವಿಯಲ್ಲಿ ಆರಂಭಗೊಂಡಿರುವ ಡಾನ್ ಬಾಸ್ಕೊ ತ್ರಾಸಿ-ಹೊಸಾಡು ಸಂಸ್ಥೆಗೆ 25 ವರ್ಷ ತುಂಬಿರುವುದರಿಂದ ಸಂಸ್ಥೆಯ ರಜತ ಮಹೋತ್ಸವ ಕಾರ್ಯಕ್ರಮವನ್ನು ಸ್ಮರಣೀಯವಾಗಿ ಆಚರಿಸುವ ಉದ್ದೇಶದಿಂದ ರಜತ ಸಂಭ್ರಮ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಗಿದೆ.ಇವೊಂದು ಸುಸಂದರ್ಭದಲ್ಲಿ ರಜತ ಮಹೋತ್ಸವ ವರ್ಷಾಚರಣೆ ಅಂಗವಾಗಿ ಶೈಕ್ಷಣಿಕ,ಸಾಂಸ್ಕೃತಿಕ,ಕ್ರೀಡೆ,ಸಾಮಾಜಿಕ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು.ಒಂದು ವರ್ಷಗಳ ಕಾಲ ನಿರಂತರವಾಗಿ ಕಾರ್ಯಕ್ರಮಗಳು ನಡೆಯುತ್ತವೆ.2025 ರ ಡಿಸೆಂಬರ್ ತಿಂಗಳಿನಲ್ಲಿ ರಜತ ಮಹೋತ್ಸವ ಕಾರ್ಯಕ್ರಮ ಸಂಪನ್ನವಾಗಲಿರುವ ಹಿನ್ನೆಲೆಯಲ್ಲಿ ಅದ್ದೂರಿಯಾಗಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲು ಆಲೋಚನೆಗಳನ್ನು ಹಾಕಿಕೊಳ್ಳಲಾಗಿದೆ ಎಂದು ಡಾನ್ ಬಾಸ್ಕೊ ಶಾಲೆಯ […]

You cannot copy content of this page