ಗುಜ್ಜಾಡಿ:ಹದಗೆಟ್ಟ ಮಡಿ ಸಂಪರ್ಕ ರಸ್ತೆ ಅಭಿವೃದ್ಧಿಗೆ ಆಗ್ರಹ

ಕುಂದಾಪುರ:ಗಂಗೊಳ್ಳಿ ಲೈಟ್‍ಹೌಸ್ ಬಳಿಯ ಗುಜ್ಜಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಸೇರಿದ ಮಡಿಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಹದಗೆಟ್ಟು ಹೋಗಿದ್ದು ಕೆಸರು ರಾಡಿಯಿಂದ ಕೂಡಿದೆ,ದುರಾವಸ್ಥೆಯಿಂದ ಕೂಡಿದ ರಸ್ತೆಯಲ್ಲಿ ಸಾಗುವುದೆ ದುಸ್ತರವಾಗಿದೆ.ರಸ್ತೆಯನ್ನು ಅಭಿವೃದ್ಧಿಗೊಳಿಸಬೇಕ್ಕೆನ್ನುವ ಹಲವಾರು ವರ್ಷಗಳ ಬೇಡಿಕೆ ಮರಿಚಿಕೆ ಆಗಿ ಉಳಿದಿದ್ದು,ಮೀನುಗಾರರಿಗೆ ಅನುಕೂಲಕರವಾಗಿರುವ ರಸ್ತೆಯನ್ನು ಅಭಿವೃದ್ಧಿಗೊಳಿಸಬೇಕೆಂದು ಆಗ್ರಹಿಸಿದ್ದಾರೆ.

ಸುಗುಣ ಆರ್.ಕೆ ವಿದ್ಯಾರ್ಥಿಗಳಿಗೆ ಸಂಸ್ಕೃತ ಪುಸ್ತಕ ಕೊಡುಗೆ

ಕುಂದಾಪುರ:ಗಂಗೊಳ್ಳಿ ರೋಟರಿ ಕ್ಲಬ್ ವತಿಯಿಂದ ಗಂಗೊಳ್ಳಿ ಸ.ವಿ.ಪದವಿಪೂರ್ವ ಕಾಲೇಜಿನ ಪಿ.ಯು.ಸಿ ವಿಭಾಗದ ವಿದ್ಯಾರ್ಥಿಗಳಿಗೆ ಸಂಸ್ಕೃತ ಪುಸ್ತಕಗಳನ್ನು ಕ್ಲಬ್ಬಿನ ಅಧ್ಯಕ್ಷ ಎಂ.ನಾಗೇಂದ್ರ ಪೈ ವಿತರಿಸಿದರು.ಕ್ಲಬ್ಬಿನ ಸದಸ್ಯರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಗಂಗೊಳ್ಳಿ ರೋಟರಿ ಕ್ಲಬ್ ಪರವಾಗಿ ಝೋನಲ್ ರೋಟರ್ಯಾಕ್ಟ್ ಕೋ-ಆರ್ಡಿನೇಟರ್ ಸುಗುಣ ಆರ್.ಕೆ. ಅವರು ಸುಮಾರು 10 ಸಾವಿರ ರೂ. ಮೌಲ್ಯದ ಸಂಸ್ಕೃತ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದರು.

ಆಸ್ತಿಗಾಗಿ ಸಹೋದರರ ನಡುವೆ ಗಲಾಟೆ:ಅಣ್ಣನ ಸಾವು

ಮಂಗಳೂರು:ಆಸ್ತಿಗಾಗಿ ಸಹೋದರರ ನಡುವೆ ಗಲಾಟೆ ಉಂಟಾಗಿ ತಮ್ಮನೋರ್ವ ಅಣ್ಣನನ್ನೇ ಕೊಲೆಗೈದ ಭೀಕರ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಚೆಂಬು ಗ್ರಾಮದಲ್ಲಿ ಶುಕ್ರವಾರ ನಡೆದಿದೆ.ಕೊಲೆಯಾದವರನ್ನು ಉಸ್ಮಾನ್ ಎಂದು ಗುರುತಿಸಲಾಗಿದೆ.ಚೆಂಬು ಗ್ರಾಮದ ಕುದ್ರೆಪಾಯದ ಸಮೀಪ ಇರುವ ಜಾಗಕ್ಕೆ ಹೋಗಿದ್ದ ವೇಳೆ ಆಸ್ತಿ ವಿಚಾರದಲ್ಲಿ ಸಹೋದರರ ನಡುವೆ ಮಾತಿಗೆ ಮಾತು ಬೆಳೆದು,ಸಿಟ್ಟಿಗೆದ್ದ ತಮ್ಮ ಅಣ್ಣ ಉಸ್ಮಾನ್ ಅವರಿಗೆ ಚೂರಿಯಿಂದ ಚುಚ್ಚಿದ್ದು, ಈ ವೇಳೆ ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

You cannot copy content of this page