ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು,ಕುಂದಾಪುರ-ಬ್ಯಾಂಕ್ ಬ್ಯಾಟಲ್ ಕಾರ್ಯಕ್ರಮ

ಕುಂದಾಪುರ:ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ “ಬ್ಯಾಂಕ್ ಬ್ಯಾಟಲ್” ಎನ್ನುವ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಕುಂದಾಪುರ ಗುಲ್ವಾಡಿ ಶಾಖೆಯ ಮ್ಯಾನೇಜರ್ ಶ್ರೀ. ಬಿ ಕರುಣಾಕರ್ ಶೆಟ್ಟಿಯವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ಬ್ಯಾಂಕುಗಳ ಪಾತ್ರ ಮತ್ತು ಬ್ಯಾಂಕಿನ ಅಗತ್ಯತೆಯ ಬಗ್ಗೆ ಹಾಗೂ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು.ಕಾಲೇಜಿನ ಪ್ರಿನ್ಸಿಪಾಲ್ ಪ್ರೊ.ಕೆ.ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದರು.ವೈಸ್ ಪ್ರಿನ್ಸಿಪಾಲ್ ಚೇತನ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ವೀಣಾ ಭಟ್ […]

ಸಮಾಜದ ಅಭಿವೃದ್ಧಿಗಾಗಿ ದುಡಿಯುವ ಮನಸ್ಸುಗಳನ್ನು ಸಮಾಜ ಯಾವತ್ತೂ ಸ್ಮರಿಸುತ್ತದೆ- ಡಾ.ಗೋವಿಂದ ಬಾಬು ಪೂಜಾರಿ

ಕುಂದಾಪುರ:ಒಂದು ಸಮುದಾಯದ ಅಭಿವೃದ್ಧಿಯಲ್ಲಿ ಪರಸ್ಪರ ಸಹಕಾರ ಪ್ರೀತಿ ವಿಶ್ವಾಸ ಮತ್ತು ಸ್ವಾವಲಂಬನೆ ಕೂಡ ಬಹಳ ಮಹತ್ವದ ಪಾತ್ರವನ್ನು ವಹಿಸುತ್ತದೆ.ಸಮಾಜದ ಅಭಿವೃದ್ಧಿಗಾಗಿ ದುಡಿಯುವ ಮನಸ್ಸುಗಳನ್ನು ಸಮಾಜ ಯಾವತ್ತೂ ಸ್ಮರಿಸುತ್ತದೆ ಎಂದು ಶ್ರೀವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಉಪ್ಪುಂದ ಮ್ಯಾನೇಜಿಂಗ್ ಟ್ರಸ್ಟಿ ಡಾ.ಗೋವಿಂದ ಬಾಬು ಪೂಜಾರಿ ಹೇಳಿದರು.ಗಂಗೊಳ್ಳಿ ಸರಸ್ವತಿ ವಿದ್ಯಾಲಯದ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ನಡೆದ ಗಂಗೊಳ್ಳಿ ಬಿಲ್ಲವರ ಹಿತರಕ್ಷಣಾ ವೇದಿಕೆ ಎರಡನೇ ವರ್ಷದ ಮಹಾಸಭೆ ಮತ್ತು ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಒಗ್ಗಟ್ಟು ಇರುವಲ್ಲಿ […]

ಲಯನ್ಸ್ ಕ್ಲಬ್ ತ್ರಾಸಿ-ಗಂಗೊಳ್ಳಿ ಪದಗ್ರಹಣ ಕಾರ್ಯಕ್ರಮ

ಕುಂದಾಪುರ:ಲಯನ್ಸ್ ಕ್ಲಬ್ 317ಸಿ ರಿಜನ್6 ವಲಯ2 ತ್ರಾಸಿ-ಗಂಗೊಳ್ಳಿ ಲಯನ್ಸ್ ಕ್ಲಬ್ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ತ್ರಾಸಿ ಮಿಲೇನಿಯಮ್ ಹಾಲ್‍ನಲ್ಲಿ ನಡೆಯಿತು.ತ್ರಾಸಿ-ಗಂಗೊಳ್ಳಿ ಲಯನ್ಸ್ ಕ್ಲಬ್ ನೂತನ ಅಧ್ಯಕ್ಷರಾಗಿ ಸೀನಾ ದೇವಾಡಿಗ ಎಂಜೆಎಫ್,ಕಾರ್ಯದರ್ಶಿಯಾಗಿ ನಾಗರಾಜ್ ಆಚಾರ್ಯ,ಕೋಶಾಧಿಕಾರಿ ಕಿರಣ್ ಡಿಸೋಜಾ ಪದಗ್ರಹಣ ಕಾರ್ಯಕ್ರಮದಲ್ಲಿ ಅಧಿಕಾರ ಸ್ವೀಕರಿಸಿದರು.ಪಿಎಂಜೆಎಫ್ ಸುರೇಶ್ ಪ್ರಭು ಪದಗ್ರಹಣ ಕಾರ್ಯಕ್ರಮವನ್ನು ನೆರವೇರಿಸಿದರು.ಪ್ರಾಂತೀಯ ಅಧ್ಯಕ್ಷ ಏಕನಾಥ ಬೋಳಾರ್,ವಲಯಾಧ್ಯಕ್ಷ ಜಗದೀಶ್ ಶೆಟ್ಟಿ ಕುದ್ರುಕೋಡು,ಕ್ಲಬ್ಬಿನ ಸದಸ್ಯರು ಉಪಸ್ಥಿತರಿದ್ದರು.ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಲಹರಿ ದೇವಾಡಿಗ ಅವರನ್ನು ಸನ್ಮಾನಿಸಲಾಯಿತು,ಅಶಕ್ತ ರೋಗಿಗಳಿಗೆ ಧನಸಹಾಯ ವಿತರಿಸಲಾಯಿತು.ನಾಗರಾಜ್ […]

You cannot copy content of this page