ಬಡಾಕೆರೆ:ರೈಲು ಡಿಕ್ಕಿ ಹೊಡೆದು ಚಿರತೆ ಸಾವು

ಕುಂದಾಪುರ:ಬೈಂದೂರು ತಾಲೂಕಿನ ಬಡಾಕೆರೆ ಸಮೀಪ ಸೌಪರ್ಣಿಕಾ ನದಿ ಮೇಲೆ ಹಾದು ಹೋಗಿರುವ ಕೊಂಕಣ ರೈಲು ಬ್ರಿಡ್ಜ್ ಮೇಲೆ ಅಂದಾಜು ಐದು ವರ್ಷ ಪ್ರಾಯವನ್ನು ಹೊಂದಿರುವ ಬೃಹತ್ ಗಾತ್ರದ ಗಂಡು ಚಿರತೆಯೊಂದು ರೈಲು ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ.ಬೆಳಗಿನ ಜಾವ 4.40 ರ ಸುಮಾರಿಗೆ ಇವೊಂದು ಘಟನೆ ನಡೆದಿದೆ ಎಂದು ಅಂದಾಜಿಸಲಾಗಿದೆ.ಉಪ ವಲಯ ಅರಣ್ಯಾಧಿಕಾರಿಗಳಾದ ಪೂರ್ಣಚಂದ್ರ ಮತ್ತು ಸೆಲ್ವ ಮುರುಗನ್,ಅರಣ್ಯ ವೀಕ್ಷಕ ಸುರೇಶ್,ಗಸ್ತು ಅರಣ್ಯ ಪಾಲಕರಾದ ಮಂಜುನಾಥ ನಾಯಕ್ ಮತ್ತು ರಮೇಶ್ ಹಾಗೂ ನಾಡ […]

ಅ.3 ರಿಂದ ಕೂಡ್ಲು ಬಾಡುಬೆಟ್ಟು,ಶ್ರೀಶನೀಶ್ವರ ಮತ್ತು ಶ್ರೀಚೌಡೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವ ಸಂಭ್ರಮ

ಕುಂದಾಪುರ:ತಾಲೂಕಿನ ಪ್ರಸಿದ್ಧ ಶ್ರೀ ಶನೀಶ್ವರ ಮತ್ತು ಶ್ರೀ ಚೌಡೇಶ್ವರಿ ದೇವಸ್ಥಾನ ಕೂಡ್ಲು ಬಾಡುಬೆಟ್ಟುವಿನಲ್ಲಿ ಅ.3 ರಿಂದ ಅ.12 ರ ವರೆಗೆ ಶರನ್ನವರಾತ್ರಿ ಮಹೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಜರುಗಲಿದೆ.ನವರಾತ್ರಿ ಉತ್ಸವದ ಅಂಗವಾಗಿ ಶ್ರೀ ಕ್ಷೇತ್ರದಲ್ಲಿ ಪ್ರತಿ ದಿನ ವಿಶೇಷ ಪೂಜೆ,ದುರ್ಗಾಹೋಮ,ದುರ್ಗಾ ಪಾರಾಯಣ,ಚಂಡಿಕಾ ಹೋಮ,ಭಜನಾ ಕಾರ್ಯಕ್ರಮ,ಅನ್ನಸಂತರ್ಪಣೆ ಕಾರ್ಯಕ್ರಮ,ರಂಗ ಪೂಜೆ,ಪಂಚವಾಧ ಸೇವೆ ಜರುಗಲಿದೆ.ಎಂದು ಶ್ರೀ ಕ್ಷೇತ್ರದ ಆಡಳಿತ ಧರ್ಮದರ್ಶಿ ಶ್ರೀ ಜಯರಾಮ ಸ್ವಾಮಿ ತಿಳಿಸಿದ್ದಾರೆ.

ಮಹಾತ್ಮ ಗಾಂಧಿಜೀ ಮತ್ತು ಶಾಸ್ತ್ರೀಜಿ ಜಯಂತಿ ಆಚರಣೆ

ಗಂಗೊಳ್ಳಿ:ರಾಷ್ಟ್ರಪೀತ ಮಹಾತ್ಮ ಗಾಂಧಿಜೀ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಕುಂದಾಪುರ ವಲಯದ ಗಂಗೊಳ್ಳಿ ಸ್ಟೆಲ್ಲಾ ಮಾರಿಸ್ ಪ್ರೌಢಶಾಲೆಯಲ್ಲಿ ಆಚರಿಸಲಾಯಿತು.ಶಾಲಾ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕವೃಂದವರು ಹಾಗೂ ವಿದ್ಯಾರ್ಥಿಗಳು ಮಹಾತ್ಮರ ಭಾವಚಿತ್ರಕ್ಕೆ ಪೂಷ್ಪಾರ್ಚನೆ ಸಲ್ಲಿಸಿ ನಮಿಸಿದರು.ಗೈಡ್ಸ್ ವಿದ್ಯಾರ್ಥಿನಿ ಲಾವಣ್ಯ ಗಾಂಧಿಜೀ ಮತ್ತು ಶಾಸ್ತ್ರೀಜಿ ಅವರ ಜೀವನ ಮತ್ತು ಸಾಧನೆಗಳ ಕುರಿತು ಮಾತನಾಡಿದರು.ಶಿಕ್ಷಕಿ ಜುನಿತ ಮಚಾದೊರ ಮತ್ತು ವಿದ್ಯಾರ್ಥಿಗಳು ಪ್ರಾರ್ಥಿಸಿದರು.

You cannot copy content of this page