ಶಿಕ್ಷಕ ಸುರೇಂದ್ರಗೆ ಮಕ್ಕಳ ಮಿತ್ರ ಪ್ರಶಸ್ತಿ
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ ಸೇನಾಪುರ ಗ್ರಾಮದ ನಿವಾಸಿ ಶಿಕ್ಷಕ ಸುರೇಂದ್ರ ನಾಡಗುಡ್ಡೆಹೋಟೆಲ್ ಅವರ ಅನುಪಮ ಸೇವೆಯನ್ನು ಗುರುತಿಸಿ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರತಿಷ್ಠೆಯನ್ನು ಗಳಿಸಿರುವ ಬಾಸ್ಕೋ ಸ್ವಯಂ ಸೇವಾ ಸಂಸ್ಥೆ ಬೆಂಗಳೂರು ಮಕ್ಕಳ ಮಿತ್ರ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.ಸುಪ್ರೀಂ ಕೋರ್ಟ್ ಮಾಜಿ ನ್ಯಾಯ ಮೂರ್ತಿ ಮತ್ತು ಕರ್ನಾಟಕದ ಮಾಜಿ ಲೋಕಾಯುಕ್ತರಾದ ಎನ್.ಸಂತೋಷ ಹೆಗ್ಡೆ ಅವರು ಪ್ರಶಸ್ತಿ ಪ್ರದಾನ ಮಾಡಿದರು.ಬಾಸ್ಕೋ ಸಂಸ್ಥೆ ಮುಖ್ಯಸ್ಥ […]






























































































































































































































































































































































































































































































































































































































































































































































































































































































































































































































































































































































































































































































































































































































































































