ಮಹಾತ್ಮ ಗಾಂಧಿಜೀ ಮತ್ತು ಶಾಸ್ತ್ರೀಜಿ ಜಯಂತಿ ಆಚರಣೆ

ಗಂಗೊಳ್ಳಿ:ರಾಷ್ಟ್ರಪೀತ ಮಹಾತ್ಮ ಗಾಂಧಿಜೀ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಕುಂದಾಪುರ ವಲಯದ ಗಂಗೊಳ್ಳಿ ಸ್ಟೆಲ್ಲಾ ಮಾರಿಸ್ ಪ್ರೌಢಶಾಲೆಯಲ್ಲಿ ಆಚರಿಸಲಾಯಿತು.ಶಾಲಾ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕವೃಂದವರು ಹಾಗೂ ವಿದ್ಯಾರ್ಥಿಗಳು ಮಹಾತ್ಮರ ಭಾವಚಿತ್ರಕ್ಕೆ ಪೂಷ್ಪಾರ್ಚನೆ ಸಲ್ಲಿಸಿ ನಮಿಸಿದರು.ಗೈಡ್ಸ್ ವಿದ್ಯಾರ್ಥಿನಿ ಲಾವಣ್ಯ ಗಾಂಧಿಜೀ ಮತ್ತು ಶಾಸ್ತ್ರೀಜಿ ಅವರ ಜೀವನ ಮತ್ತು ಸಾಧನೆಗಳ ಕುರಿತು ಮಾತನಾಡಿದರು.ಶಿಕ್ಷಕಿ ಜುನಿತ ಮಚಾದೊರ ಮತ್ತು ವಿದ್ಯಾರ್ಥಿಗಳು ಪ್ರಾರ್ಥಿಸಿದರು.

ಬೈಂದೂರು ಅರ್ಬನ್ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಸಭೆ:8% ಡಿವಿಡೆಂಡ್ ಘೋಷಣೆ

ಕುಂದಾಪುರ:ಬೈಂದೂರು ಅರ್ಬನ್ ಸೌಹಾರ್ದಾ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಸಭೆ ಸಂಘದ ಅಧ್ಯಕ್ಷರಾದ ಮಣಿಕಂಠ ಎಸ್ ದೇವಾಡಿಗ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಘದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ ವಿತರಣೆ.ಬೈಂದೂರು ಸರಕಾರಿ ಪದವಿ ಪೂರ್ವ ಕಾಲೀಜಿಗೆ ಶೈಕ್ಷಣಿಕ ಸಹಾಯ ಧನ ವಿತರಣೆ.ನಿವೃತ್ತ ಸರಕಾರಿ ಉದ್ಯೋಗಿಗಳಿಗೆ ಸನ್ಮಾನ.ಸಾಧನೆಗೈದಿರುವ ಸಂಘದ ಸ್ವ ಸಹಾಯ ಸಂಘದ ಸದಸ್ಯರಿಗೆ ವಿಶೇಷ ಬಹುಮಾನಗಳನ್ನು ನೀಡುತ್ತಾ ಬಂದಿರುವ ಸಂಘವು,ಕೊರೊನಾ ಸಂದರ್ಭದಲ್ಲಿ ಅಶಕ್ತರಿಗೆ ಆಹಾರ ಕಿಟ್ ವಿತರಣೆ,ಅನಾರೋಗ್ಯ ಪೀಡಿತರಿಗೆ ಧನ ಸಹಾಯ ಹಸ್ತ, ಬೈಂದೂರೂಪೊಲೀಸ್ ಠಾಣೆಗೆ ನಾಲ್ಕು […]

ಆಲೂರು-ಹರ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಸಾಮಾನ್ಯ ಸಭೆ 80.59 ಲಕ್ಷ.ರೂ ನಿವ್ವಳ ಲಾಭ:ಶೇ.12 ಡಿವಿಡೆಂಡ್ ಘೋಷಣೆ

ಕುಂದಾಪುರ:ಆಲೂರು-ಹರ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆ ಶ್ರೀಮೂಕಾಂಬಿಕಾ ಸಭಾಭವನದಲ್ಲಿ ಸೋಮವಾರ ನಡೆಯಿತು.5 ರಿಂದ 10ನೇ ತರಗತಿ ವರೆಗಿನ ಸಂಘದ ಸದಸ್ಯರ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು.ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಸಾಧನೆಗೈದಿರುವ ಸಂಘದ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಿಸಲಾಯಿತು.ಸಾಮಾನ್ಯ ಸಭೆ ಅಧ್ಯಕ್ಷತೆ ವಹಿಸಿದ ಸಂಘದ ಅಧ್ಯಕ್ಷ ಎಚ್.ಮಂಜಯ್ಯ ಶೆಟ್ಟಿ ಹರ್ಕೂರು ಮಾತನಾಡಿ,ಆರಂಭದ ದಿನಗಳಲ್ಲಿ ನಷ್ಟದಲ್ಲಿದ್ದ ಸಂಘವನ್ನು ಸದಸ್ಯರು ಮತ್ತು ನಿರ್ದೇಶಕ ಮಂಡಳಿ ಅವರ ಸಹಕಾರದಿಂದ ಹಂತ ಹಂತವಾಗಿ […]

You cannot copy content of this page