ಪರಿಸರ ಮಾಹಿತಿ ಕಾರ್ಯಕ್ರಮ,ಗಿಡ ವಿತರಣೆ

ಕುಂದಾಪುರ:ಶ್ರೀಕೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,ಬಿ.ಸಿ ಟ್ರಸ್ಟ್ ಬೈಂದೂರು,ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಅವರ ಆಶ್ರಯದಲ್ಲಿ ಪರಿಸರ ಮಾಹಿತಿ ಕಾರ್ಯಕ್ರಮ ಮತ್ತು ಹಣ್ಣಿನ ಗಿಡ ವಿತರಣೆ ಕಾರ್ಯಕ್ರಮ ಕುಂದಾಬಾರಂದಾಡಿ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಶುಕ್ರವಾರ ನಡೆಯಿತು.ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಸುಭಾಷ್ ಶೆಟ್ಟಿ ಗಿಡ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ದೇವಸ್ಥಾನದ ಸಮಿತಿ ಉಪಾಧ್ಯಕ್ಷ ಸೂರ ಪರಿಸರ ಸಂರಕ್ಷಣೆ ಮಹತ್ವದ ಕುರಿತು ಮಾತನಾಡಿದರು.ಕಾರ್ಯದರ್ಶಿ ಮಂಜುನಾಥ,ಒಕ್ಕೂಟದ ಅಧ್ಯಕ್ಷ ಪದ್ಮನಾಭ ಮತ್ತು ಉಪಾಧ್ಯಕ್ಷೆ ನಾಗರತ್ನ,ಹಕ್ಲಾಡಿ ಪಂಚಾಯಿತಿ ಸದಸ್ಯ […]

ನೆರೆ ಬಾಧಿತ ಪ್ರದೇಶದ ದನಕರುಗಳಿಗೆ ಔಷಧ ವಿತರಣೆ

ಕುಂದಾಪುರ:ನೆರೆ ನೀರಿನಿಂದ ಜಲಾವೃತ್ತವಾಗಿರುವ ಬೈಂದೂರು ತಾಲೂಕಿನ ನಾವುಂದ ಸಾಲ್ಬುಡ ಪ್ರದೇಶಕ್ಕೆ ಬೈಂದೂರು ಪಶು ಆಸ್ಪತ್ರೆ ವೈದ್ಯಾಧಿಕಾರಿ ನಾಗರಾಜ ಖಾರ್ವಿ ಮರವಂತೆ ಮತ್ತು ಸಿಬ್ಬಂದಿಗಳು ದೋಣಿಯಲ್ಲಿ ತೆರಳಿ ದನಕರುಗಳಿಗೆ ಅಗತ್ಯವಾಗಿ ಬೇಕಾಗಿರುವ ಔಷಧಗಳನ್ನು ಶುಕ್ರವಾರ ವಿತರಿಸಿದರು.ಸ್ಥಳೀಯರಾದ ನಾಗರಾಜ ನಾವುಂದ ಸಹರಿಸಿದರು.

ಮುಳ್ಳಿಕಟ್ಟೆ ಸರ್ಕಲ್‍ನಲ್ಲಿ ಸಕ್ಕರೆ ತುಂಬಿದ ಲಾರಿ ಪಲ್ಟಿ

ಕುಂದಾಪುರ:ರಾಷ್ರೀಯ ಹೆದ್ದಾರಿ 66 ರಲ್ಲಿ ಕುಂದಾಪುರ ಕಡೆಯಿಂದ ಬಂಟ್ವಾಡಿ ಕಡೆಗೆ ಸಾಗುತ್ತಿದ್ದ ಟ್ರಕ್ ಮುಳ್ಳಿಕಟ್ಟೆ ಸರ್ಕಲ್‍ನಲ್ಲಿ ಯೂರ್ಟನ್ ತೆಗೆದು ಕೊಳ್ಳುತ್ತಿದ್ದ ಸಮಯದಲ್ಲಿ ತ್ರಾಸಿ ಕಡೆಯಿಂದ ಕುಂದಾಪುರ ಕಡೆಗೆ ವೇಗವಾಗಿ ಸಾಗುತ್ತಿದ್ದ ಸಕ್ಕರೆ ತುಂಬಿದ ಲಾರಿ ಟ್ರಕ್‍ನ ಹಿಂಭಾಗಕ್ಕೆ ಡಿಕ್ಕಿ ಹೊಡೆದು ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿ ರಸ್ತೆ ಮೇಲೆ ಉರುಳಿ ಬಿದ್ದಿದ ಘಟನೆ ಶುಕ್ರವಾರ ನಡೆದಿದೆ.ಅಪಘಾತದಲ್ಲಿ ಲಾರಿ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.ಸಕ್ಕರೆ ಚೀಲ ರಸ್ತೆ ತುಂಬೆಲ್ಲಾ ಉರುಳಿ ಬಿದ್ದಿದ್ದು.ಧಾರಾಕಾರವಾಗಿ ಮಳೆ ಸುರಿಯುತ್ತಿದ್ದ ಪರಿಣಾಮ ಸಕ್ಕರೆ ಚೀಲಕ್ಕೆ ಮಳೆ ನೀರು […]

You cannot copy content of this page