ಹೊಸಾಡು ಶಾಲೆಯಲ್ಲಿ ಎಲ್‍ಕೆಜಿ,ಯುಕೆಜಿ ತರಗತಿ ಶುಭಾರಂಭ

ಕುಂದಾಪುರ:ಬೈಂದೂರು ವಲಯದ ಹೊಸಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ಆರಂಭಗೊಂಡಿರುವ ಎಲ್‍ಕೆಜಿ ಮತ್ತು ಯುಕೆಜಿ ತರಗತಿ ಶುಭಾರಂಭ ಕಾರ್ಯಕ್ರಮ ಅದ್ಧೂರಿಯಾಗಿ ಮಂಗಳವಾರ ನಡೆಯಿತು.ಹೊಸಾಡು ಶಾಲೆ ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷ ಡಾ.ಉಮೇಶ್ ಪುತ್ರನ್ ಎಲ್‍ಕೆಜಿ ಮತ್ತು ಯುಕೆಜಿ ತರಗತಿ ಕೋಣೆಯನ್ನು ಉದ್ಘಾಟಿಸಿದರು.ಎಸ್‍ಡಿಎಂಸಿ ಅಧ್ಯಕ್ಷೆ ರೇಖಾಗಣೇಶ ಅಧ್ಯಕ್ಷತೆ ವಹಿಸಿದ್ದರು.ಬೈಂದೂರು ಬಿಒ ನಾಗೇಶ್ ನಾಯ್ಕ್,ನಿವೃತ್ತ ಮುಖ್ಯೋಪಾಧ್ಯಾಯರಾದ ಸದಾಶಿವ ಶೆಟ್ಟಿ,ಜ್ಯೋತಿ ಐತಾಳ್ ಮತ್ತು ತೇಜಪ್ಪ ಶೆಟ್ಟಿ,ನಿವೃತ್ತ ಶಿಕ್ಷಕರಾದ ಭಾಸ್ಕರ ಶೆಟ್ಟಿ,ಭಾಸ್ಕರ ಮಯ್ಯ,ಮಾಜಿ ಗ್ರಾ.ಪಂ ಅಧ್ಯಕ್ಷ ಚಂದ್ರ ಪೂಜಾರಿ ಅರಾಟೆ,ಎಂ.ಎಂ ಸುವರ್ಣ,ನಿವೃತ್ತ […]

ಡಾ.ಎಂ ರಾಜೇಂದ್ರ ಕುಮಾರ್‍ಗೆ ಸಹಕಾರಿ ಸಂವರ್ಧಕ ಪ್ರಶಸ್ತಿ ಪ್ರದಾನ

ಕುಂದಾಪುರ:ದ.ಕ ಜಿಲ್ಲಾ ಸಹಕಾರಿ ಬ್ಯಾಂಕ್ ಮಂಗಳೂರು ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರಿಗೆ ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ವತಿಯಿಂದ ಸಂಘದ ಪ್ರಧಾನ ಕಚೇರಿ ನವೀಕೃತ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಹಕಾರಿ ಸಂವರ್ಧಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.ಸಂಘದ ಅಧ್ಯಕ್ಷ ಎಸ್.ರಾಜು ಪೂಜಾರಿ,ಶಾಸಕ ಗುರುರಾಜ ಗಂಟಿಹೊಳೆ,ಮಾಜಿ ಶಾಸಕರಾದ ಕೆ.ಗೋಪಾಲ ಪೂಜಾರಿ,ಬಿ.ಎಂ ಸುಕುಮಾರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಮರವಂತೆ-ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಾವುಂದ ಪ್ರಧಾನ ಕಛೇರಿ ನವೀಕೃತ ಮೇಲಂತಸ್ತಿನ ಕಟ್ಟಡ ಉದ್ಘಾಟನೆ

ಕುಂದಾಪುರ:ಬೈಂದೂರು ತಾಲೂಕಿನ ಮರವಂತೆ-ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಾವುಂದ ಪ್ರಧಾನ ಕಛೇರಿ ಮತ್ತು ಮೇಲಂತಸ್ತಿನ ನವೀಕೃತ ಕಟ್ಟಡದ ಉದ್ಘಾಟನಾ ಸಮಾರಂಭ ಕಾರ್ಯಕ್ರಮ ನಾವುಂದಲ್ಲಿ ಶನಿವಾರ ಅದ್ದೂರಿಯಾಗಿ ನಡೆಯಿತು.ಸಂಘದ ನವೀಕೃತ ಪ್ರಧಾನ ಕಛೇರಿ ಮತ್ತು ಮೇಲಂತಸ್ತಿನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ ಅಂಗವಾಗಿ ಸಂಗೀತ ರಸಮಂಜರಿ ಕಾರ್ಯಕ್ರಮ ಹಾಗೂ ಯಕ್ಷ ರಾಘವ ಜನ್ಸಾಲೆ ಪ್ರತಿಷ್ಠಾ ಮತ್ತು ಅತಿಥಿ ಕಲಾವಿದರ ಕೂಡುವಿಕೆಯಿಂದ ದಿ.ಕಾಳಿಂಗ ನಾವುಡ ವಿರಚಿತ ನಾಗಶ್ರೀ ಯಕ್ಷಗಾನ ಕಾರ್ಯಕ್ರಮ ಜರುಗಿತು.ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಅಧ್ಯಕ್ಷರಾದ,ಕರ್ನಾಟಕ […]

You cannot copy content of this page