ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ

ಕುಂದಾಪುರ:ಮನೋಸೋ ಇಚ್ಛೆ ಮರಗಳನ್ನು ಕಡಿದು ಭೂಮಿಯನ್ನು ಬಗೆದಿದ್ದರ ಪರಿಣಾಮ ಪ್ರಕೃತಿಯಲ್ಲಿ ಅಸಮಾತೋಲನ ಉಂಟಾಗಿ ಮಳೆ,ಬೆಳೆ ಕುಂಠಿತವಾಗುತ್ತಿದೆ.ಶುದ್ಧ ಗಾಳಿ ಸೇವನೆಗೂ ಪರಿತಪಿಸುವಂತೆ ಆಗಿದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.ಬೈಂದೂರು ವಲಯದ ಬಡಾಕೆರೆ ಉತ್ತರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಗಿಡಗಳನ್ನು ವಿತರಿಸಿ ಅವರು ಮಾತನಾಡಿದರು.ಭೂಮಿ ಹಸಿರಾಗಿದ್ದಾರೆ ಮಾತ್ರ ಮಾನವ ಸಹಿತ ಜೀವಿ ಸಂಕುಲಗಳು ಬದುಕಬಹುದಾಗಿದೆ.ಗಿಡಗಳನ್ನು ನೆಟ್ಟು ಬೆಳೆಸಿ ಪೋಷಿಸುವುದರ ಮೂಲಕ ಪ್ರಕೃತಿ ಉಳಿವಿಗೆ ಎಲ್ಲರೂ ಕೈಜೋಡಿಸಬೇಕೆಂದು […]

ಕಂಚುಗೋಡು ಸನ್ಯಾಸಿ ಬಲ್ಲೆಯಲ್ಲಿ ನೂತನ ಅಂಗನವಾಡಿ ಕೇಂದ್ರ ಉದ್ಘಾಟನೆ

ಕುಂದಾಪುರ:ಮೀನುಗಾರ ಕುಟುಂಬದ ಸದಸ್ಯರೆ ಹೆಚ್ಚಾಗಿ ವಾಸಮಾಡುತ್ತಿರುವ ಇವೊಂದು ಪರಿಸರದಲ್ಲಿ ಅಂಗನವಾಡಿ ಕೇಂದ್ರವನ್ನು ತೆರೆದಿರುವುದರಿಂದ ಜನರಿಗೆ ಬಹಳಷ್ಟು ಅನುಕೂಲವಾಗಲಿದೆ.ಸ್ವಂತ ಕಟ್ಟಡದಲ್ಲಿ ಅಂಗನವಾಡಿ ಕೇಂದ್ರ ಕಾರ್ಯಚರಣೆ ಮಾಡಬೇಕಾಗಿರುವುದರಿಂದ ಪಂಚಾಯಿತಿ ಕಡೆಯಿಂದ ಎಲ್ಲಾ ರೀತಿಯಿಂದಲೂ ಸಹಕಾರ ನೀಡಲಾಗುವುದು ಎಂದು ಗುಜ್ಜಾಡಿ ಪಂಚಾಯಿತಿ ಅಧ್ಯಕ್ಷ ತಮ್ಮಯ್ಯ ದೇವಾಡಿಗ ಹೇಳಿದರು.ಕುಂದಾಪುರ ತಾಲೂಕಿನ ಗುಜ್ಜಾಡಿ ಗ್ರಾಮದ ಕಂಚುಗೋಡು ಸನ್ಯಾಸಿ ಬಲ್ಲೆಯಲ್ಲಿ ನೂತನವಾಗಿ ಆರಂಭಗೊಂಡಿರುವ ಅಂಗನವಾಡಿ ಕೇಂದ್ರವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.ಗುಜ್ಜಾಡಿ ಪಂಚಾಯಿತಿ ಸದಸ್ಯ ಜನಾರ್ದನ ಪೂಜಾರಿ,ಗಣಪತಿ ಪಟೇಲ್,ಸದಾಶಿವ,ಅಂಗನವಾಡಿ ಶಿಕ್ಷಕಿಯರು,ಗ್ರಾಮಸ್ಥರು,ಆರೋಗ್ಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಮೇ.27 ರಂದು ಅನಿರ್ದಿಷ್ಟಾವಧಿ ಸತ್ಯಾಗ್ರಹ

ಕುಂದಾಪುರ:ಆಲೂರು ಕೊರಗ ಸಮುದಾಯದವರಿಗೆ ಡಾ.ಮಹಮ್ಮದ್ ಫೀರ್ ವರದಿ ಪ್ರಕಾರ ಭೂಮಿ ನೀಡಲು ಕಂದಾಯ ಇಲಾಖೆ ಹಾಗೂ ಸರ್ವೆ ಇಲಾಖೆ ವಿಳಂಬ ನೀತಿ ಅನುಸರಿಸುತ್ತಿರುವುದನ್ನು ಖಂಡಿಸಿ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ,ಜಿಲ್ಲಾ ಸಂಘಟನಾ ಸಮಿತಿ ಉಡುಪಿ ಅವರ ಆಶ್ರಯದಲ್ಲಿ ಮೇ.27 ರಂದು ಬೆಳಿಗ್ಗೆ 10 ರಿಂದ ಆಲೂರು ಗ್ರಾಮ ಪಂಚಾಯಿತಿ ಎದುರು ಅನಿರ್ದಿಷ್ಟಾವಧಿ ಹಗಲು ರಾತ್ರಿ ಧರಣಿ ಸತ್ಯಾಗ್ರಹ ನಡೆಯಲಿದೆ.

You cannot copy content of this page