ಶ್ರೀಲಕ್ಷ್ಮೀನಾರಾಯಣ ದೇವರ ಪುನರ್ ಪ್ರತಿಷ್ಠಾ ಮಹೋತ್ಸವ
ಕುಂದಾಪುರ:ತಾಲೂಕಿನ ಇತಿಹಾಸ ಪ್ರಸಿದ್ಧ ಹೆಮ್ಮಾಡಿ ಶ್ರೀ ಲಕ್ಷ್ಮೀನಾರಾಯಣ ದೇವರ ನೂತನ ಶಿಲಾಮಯಗುಡಿ ಲೋಕಾರ್ಪಣೆ ಹಾಗೂ ಶ್ರೀದೇವರ ಪುನರ್ ಪ್ರತಿಷ್ಠಾ ಮಹೋತ್ಸೊವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಭಾನುವಾರ ವಿಜೃಂಭಣೆಯಿಂದ ನಡೆಯಿತು.ಶ್ರೀಲಕ್ಷ್ಮೀನಾರಾಯಣ ದೇವರ ಪುನರ್ ಪ್ರತಿಷ್ಠಾ ಮಹೋತ್ಸವ ಅಂಗವಾಗಿ ಗುರುಗಣೇಶ ಪೂಜೆ,ಪುಣ್ಯಾಹವಾಚನ,ನವಗ್ರಹ ಧಾನ್ಯ ದಾನ,ಫಲದಾನ,ಜೀವಕುಭಾಭಿಷೇಕ,ಮಹಾಪ್ರಣ,ಪ್ರತಿಷ್ಠಾನ್ಯಾಸಾದಿಗಳು,ತತ್ತ್ವಕಲಶ ಸ್ಥಾಪನಾ,ಲಕ್ಷ್ಮೀನಾರಾಯಣ ಹೃದಯ ಹೋಮ,ಮಹಾಪೂಜಾ,ಪ್ರಸಾದ ವಿತರಣೆ ಕಾರ್ಯಕ್ರಮ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ ಜರುಗಿತು.ಶ್ರೀಲಕ್ಷ್ಮೀನಾರಾಯಣ ದೇವರಿಗೆ ಅಲಂಕಾರ ಪೂಜೆ ಮತ್ತು ಮಹಾಮಂಗಳಾರತಿ ಹಾಗೂ ಶಿಖರ ಪ್ರತಿಷ್ಠೆಯನ್ನು ನೆರವೇರಿಸಲಾಯಿತು.ಈ ಸಂದರ್ಭದಲ್ಲಿ ಪುನರ್ ಪ್ರತಿಷ್ಠೆ ಮತ್ತು ಬ್ರಹ್ಮ ಕುಂಭಾಭಿಷೇಕ […]






























































































































































































































































































































































































































































































































































































































































































































































































































































































































































































































































































































































































































































































































































































































































































