ಏಪ್ರಿಲ್ 22 ರಂದು ಮಹಿಳಾ ಸಮಾವೇಶ,ಬೂತ್ ಕಡೆಗೆ ಸಮೃದ್ಧಿ ನಡಿಗೆ
ಬೈಂದೂರು:ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜನಪ್ರಿಯ ಸಂಸದರಾದ ಬಿಜೆಪಿ ಪಕ್ಷದ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರು ಏಪ್ರಿಲ್ 22ರಂದು ಸೋಮವಾರ ಬೈಂದೂರಿಗೆ ಆಗಮಿಸಿ ದಿನವಿಡಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಬಿ.ವೈ.ರಾಘವೇಂದ್ರ ಅವರು ಬಿಜೆಪಿಯ ಅಧಿಕೃತ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಬಳಿಕ ಮೊದಲ ಬಾರಿಗೆ ಬೈಂದೂರಿಗೆ ಆಗಮಿಸುತ್ತಿದ್ದಾರೆ. ರಾಘವೇಂದ್ರ ಅವರನ್ನು ಸ್ವಾಗತಿಸಲು ಕಾರ್ಯಕರ್ತರು ಪದಾಧಿಕಾರಿಗಳು ಕಾತರರಾಗಿದ್ದಾರೆ.ಮಹಿಳಾ ಸಮಾವೇಶಎ.22ರ ಬೆಳಗ್ಗೆ 10.30ಕ್ಕೆ ಕಿರಿಮಂಜೇಶ್ವರ ಮೂಕಾಂಬಿಕಾ ಟಿಂಬರ್ ಮಿಲ್ ಸಮೀಪದಲ್ಲಿ ಮಂಡಲ ಬಿಜೆಪಿ ಮಹಿಳಾ ಮೋರ್ಚಾದಿಂದ ಹಮ್ಮಿಕೊಂಡಿರುವ ಮಹಿಳಾ ಸಮಾವೇಶದಲ್ಲಿ ಬಿ.ವೈ.ರಾಘವೇಂದ್ರ ಅವರು ಭಾಗವಹಿಸಿ […]