ಮಹಿಳೆಗೆ ಕಾರು ಡಿಕ್ಕಿ,ಆಸ್ಪತ್ರೆಗೆ ದಾಖಲು

ಕುಂದಾಪುರ:ತಾಲೂಕಿನ ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸಾಡು-ಮುಳ್ಳಿಕಟ್ಟೆ ಸರ್ಕಲ್‍ನಲ್ಲಿ ನಾವುಂದ ಗ್ರಾಮದ ರೂಪ ಗಾಣಿಗ (32) ಅವರು ರಸ್ತೆ ದಾಟುತ್ತಿದ್ದ ಸಮಯದಲ್ಲಿ ತ್ರಾಸಿ ಕಡೆಯಿಂದ ಕುಂದಾಪುರ ಕಡೆಗೆ ವೇಗದಿಂದ ಸಾಗುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಸ್ವರೂಪದ ಗಾಯದೊಂದಿಗೆ ಆಸ್ಪತ್ರೆ ದಾಖಲಾದ ಘಟನೆ ಶನಿವಾರ ನಡೆದಿದೆ.ಏಪ್ರಿಲ್ 12 ರ ಶುಕ್ರವಾರದಂದು ಮುಳ್ಳಿಕಟ್ಟೆ ಸರ್ಕಲ್‍ನಲ್ಲಿ ಸಂಭವಿಸಿದ ಅಪಘಾತದಲ್ಲಿ ಮೂವರು ಮಹಿಳೆಯರು ಸಹಿತ ಒಟ್ಟು ನಾಲ್ಕು ಜನರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.ಮುಳ್ಳಿಕಟ್ಟೆ ಸರ್ಕಲ್‍ನಲ್ಲಿ ಪದೆ ಪದೆ ಅಪಘಾತ ಸಂಭವಿಸುತ್ತಿದ್ದರು […]

ಎಕ್ಸಲೆಂಟ್ ಕಾಲೇಜು ಕುಂದಾಪುರ ತಾಲೂಕಿಗೆ ಗರಿಷ್ಠ ಸಾಧನೆ.

ಕುಂದಾಪುರ:2023-240 ಶೈಕ್ಷಣಿಕ ವರ್ಷದ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಕುಂದಾಪುರದ ಎಕ್ಸಲೆಂಟ್ಪಪೂ ಕಾಲೇಜಿಗೆ ರಾಜ್ಯಮಟ್ಟದಲ್ಲಿ 13 ಸ್ಥಾನಗಳು ಬಂದಿದ್ದು, ಶೇ.1೦೦ ಫಲಿತಾಂಶ ಲಭಿಸಿದೆ. ಅತೀ ಹೆಚ್ಚು ರ‍್ಯಾಂಕ್‌ಗಳನ್ನು ಪಡೆದ ಕುಂದಾಪುರದ ಏಕೈಕ ಕಾಲೇಜು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.ಸಂಸ್ಥೆಯಲ್ಲಿ ವಾಣಿಜ್ಯ ಹಾಗೂ ವಿಜ್ಞಾನ ವಿಭಾಗಗಳಿದ್ದು ಒಟ್ಟು 404 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಗೊಂಡು ಶೇ.1೦೦ ಫಲಿತಾಂಶ ಬರುವುದರೊಂದಿಗೆ ವಿಜ್ಞಾನ ವಿಭಾಗದಲ್ಲಿ ೦8 ಸ್ಥಾನಗಳು ಹಾಗೂ ವಾಣಿಜ್ಯ ವಿಭಾಗದಲ್ಲಿ ೦5 ಸ್ಥಾನಗಳನ್ನು ರಾಜ್ಯಮಟ್ಟದಲ್ಲಿ ಗಳಿಸುವುದರ […]

ಅಷ್ಟಪವಿತ್ರ ನಾಗಮಂಡಲೋತ್ಸವ,ಚಪ್ಪರ ಮುಹೂರ್ತ

ಕುಂದಾಪುರ:ತಾಲೂಕಿನ ಕನ್ಯಾನ ಗ್ರಾಮದ ಕೂಡ್ಲು ಬಾಡಬೆಟ್ಟು ಶ್ರೀಶನೀಶ್ವರ ಮತ್ತು ಶ್ರೀಚೌಡೇಶ್ವರಿ ದೇವಸ್ಥಾನದಲ್ಲಿ ಏಪ್ರಿಲ್.14 ರಂದು ನಡೆಯಲಿರುವ ಅಷ್ಟಪವಿತ್ರ ನಾಗಮಂಡಲೋತ್ಸವ ಕಾರ್ಯಕ್ರಮದ ಅಂಗವಾಗಿ ಚಪ್ಪರ ಮುಹೂರ್ತ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು.ಶ್ರೀಕ್ಷೇತ್ರದ ಆಡಳಿತ ಧರ್ಮದರ್ಶಿಗಳಾದ ಜಯರಾಮ ಸ್ವಾಮಿ,ಬಸ್ರೂರು ಶ್ರೀಮಾಹಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿಗಳಾದ ಬಿ.ಅಪ್ಪಣ್ಣ ಹೆಗ್ಡೆ,ಕ್ಷೇತ್ರದ ಪ್ರಧಾನ ಪುರೋಹಿತರಾದ ಗುರುರಾಜ ಸೋಮಯಾಜಿ ಬ್ರಹ್ಮನಜೆಡ್ಡು ನೇರಳಕಟ್ಟೆ ಅವರು ಚಪ್ಪರ ಮುಹೂರ್ತಕ್ಕೆ ಚಾಲನೆಯನ್ನು ನೀಡಿದರು.ಶ್ರೀಕ್ಷೇತ್ರ ಧರ್ಮಸ್ಥಳ ಕುಂದಾಪು ತಾಲೂಕು ಭಜನಾ ಪರಿಷತ್ ಅಧ್ಯಕ್ಷ ರಾಜೇಂದ್ರ ಕುಮಾರ ಬಸ್ರೂರು,ನಾಗಮಂಡಲೋತ್ಸವ ಸಮಿತಿ […]

You cannot copy content of this page