ಪ್ರಜಾಪ್ರಭುತ್ವಕ್ಕೆ ಚುನಾವಣೆಯೇ ತಳಪಾಯ, ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ
ಕುಂದಾಪುರ:ಪ್ರಜಾಪ್ರಭುತ್ವಕ್ಕೆ ಚುನಾವಣೆಯೇ ತಳಪಾಯಈ ಪ್ರಕ್ರಿಯೆ ಪಾರದರ್ಶಕವಾಗಿ ನಡಿಯಬೇಕು ಮತ್ತು ಎಲ್ಲರೂ ಭಾಗವಹಿಸುವಂತಾಗಬೇಕು. ಜನರು ಊರ ಹಬ್ಬವನ್ನು ಉತ್ಸಾಹದಿಂದ ಆಚರಿಸುವಂತೆ ಮತದಾನವೂ ಆಗಬೇಕು ಎಂಬುದು ನಮ್ಮ ಉದ್ದೇಶವಾಗಿದೆ ಎಂದು ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ. ಕೆ ಹೇಳಿದರು.ಉಡುಪಿ ಜಿಲ್ಲಾಡಳಿತ ಹಾಗೂ ಸ್ವೀಪ್ ಸಮಿತಿ ನೇತೃತ್ವದಲ್ಲಿ ಬೈಂದೂರು ತಾಲೂಕಿನ ಶಿರೂರು ಅಳ್ವೆಗದ್ದೆ ಮೀನುಗಾರಿಕಾ ಲಂಗರು ಪ್ರದೇಶದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಮತದಾನ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಇತ್ತಿಚಿಗೆ ಯುವಜನತೆ ಚುನಾವಣೆಯಿಂದ ವಿಪುಖರಾಗುತ್ತಿರುವುದು ಕಂಡುಬರುತ್ತಿದೆ.ಚುನಾವಣಾ ದಿನವೆಂದರೆ ರಜಾ ದಿನವಲ್ಲ. ಸಂವಿಧಾನ ನಮಗೆ ನೀಡುವ […]