ಹೇರೂರು:ಮಕ್ಕಳ ವಿಶೇಷ ಗ್ರಾಮಸಭೆಯಲ್ಲಿ ಜ್ವಲಂತ ಸಮಸ್ಯೆಗಳು ಅನಾವರಣ
ಕುಂದಾಪುರ:ಕರ್ನಾಟಕ ಸರಕಾರ,ಜಿಲ್ಲಾ ಪಂಚಾಯತ್ ಉಡುಪಿ,ತಾಲೂಕು ಪಂಚಾಯತ್ ಬೈಂದೂರು ಹಾಗೂ ಹೇರೂರು ಗ್ರಾಮ ಪಂಚಾಯತ್ ಆಶ್ರಯದಲ್ಲಿ ಮಕ್ಕಳ ವಿಶೇಷ ಗ್ರಾಮಸಭೆ ಪ್ರಕೃತಿ ಮಡಿಲಲ್ಲಿ ಬುಧವಾರ ನಡೆಯಿತು.ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮ ಜರುಗಿತು.ಮಕ್ಕಳ ವಿಶೇಷ ಗ್ರಾಮ ಸಭೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ತಮ್ಮ ಮೂಲಭೂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸ್ಥಳೀಯಾಡಳಿತದ ಪ್ರತಿನಿಧಿಗಳೊಂದಿಗೆ ಚರ್ಚಿಸಿದರು. ಬೈಂದೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಭಾರತಿ ಅವರು ಮಕ್ಕಳ ಗ್ರಾಮ ಸಭೆಯನ್ನು ಉದ್ಘಾಟಿಸಿ ಮಾತನಾಡಿ,ಗ್ರಾಮ ಪಂಚಾಯತ್ ಪ್ರತಿನಿಧಿಗಳು ಮತ್ತು ಅಧಿಕಾರಿ ವರ್ಗದವರು ಮಕ್ಕಳ ಗ್ರಾಮ ಸಭೆಯಲ್ಲಿ ಭಾಗವಹಿಸುವದರ […]