ಗಂಗೊಳ್ಳಿ:ಮುಸ್ಲಿಂ ಬಾಂಧವರಿಂದ ಈದ್ ಮಿಲಾದ್ ಆಚರಣೆ

ಗಂಗೊಳ್ಳಿ:ಕುಂದಾಪುರ ತಾಲೂಕಿನ ಗಂಗೊಳ್ಳಿಯಲ್ಲಿ ಈದ್ ಮಿಲಾದ್ ಹಬ್ಬವನ್ನು ಮುಸ್ಲಿಂ ಬಾಂಧವರು ಸಂಭ್ರಮದಿಂದ ಗುರುವಾರ ಆಚರಣೆ ಮಾಡಿದರು.ಗಂಗೊಳ್ಳಿ ಜುಮ್ಮಾ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಮಸೀದಿ ಯಿಂದ ಗಂಗೊಳ್ಳಿ ಲಾಸ್ಟ್ ಬಸ್‍ಸ್ಟ್ಯಾಂಡ್ ತನಕ ಪಾದಯಾತ್ರೆ ನಡೆಯಿತು.ಈ ಸಂದರ್ಭ ಸಮುದಾಯದ ಮುಖಂಡರುಗಳು ಉಪಸ್ಥಿತರಿದ್ದರು.

ಹೆಮ್ಮಾಡಿ:ಅನಿರ್ದಿಷ್ಟಾವಧಿ ಲಾರಿ ಮುಷ್ಕರ ಎರಡನೇ ದಿನಕ್ಕೆ

ಕುಂದಾಪುರ:ಬೈಂದೂರು ಮತ್ತು ಕುಂದಾಪುರ ತಾಲೂಕು ಲಾರಿ ಮತ್ತು ಟೆಂಪೆÇ ಮಾಲೀಕರು ಹಾಗೂ ಚಾಲಕರ ಸಂಘದ ವತಿಯಿಂದ ನಾನಾ ಬೇಡಿಕೆಗಳ ಈಡೇರಿಕೆಗಾಗಿ ಕೈಗೊಂಡಿದ್ದ ಕಟ್ಟಡ ಸಾಮಗ್ರಿ ಸಾಗಾಟದ ವಾಹನಗಳ ಅನಿರ್ದಿಷ್ಟಾವಧಿ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದ್ದು ತಾಲೂಕಿನ ಭಾಗಗಳಲ್ಲಿ ಲಾರಿಗಳ ಓಡಾಟ ಸಂಪೂರ್ಣ ಸ್ತಬ್ಧಗೊಂಡಿದೆ.ಅನಿರ್ದಿಷ್ಟಾವಧಿಗಳ ವರೆಗೆ ಕೈಗೊಂಡಿದ್ದ ಮುಷ್ಕರದ ಅಂಗವಾಗಿ ಲಾರಿ ಮಾಲೀಕರು ಮತ್ತು ಚಾಲಕರು ತಮ್ಮ ವಾಹನಗಳನ್ನು ಹೆಮ್ಮಾಡಿ ಹೆದ್ದಾರಿ ಬದಿಯಲ್ಲಿ ನಿಲ್ಲಿಸಿ ಪ್ರತಿಭಟನೆಯನ್ನು ಮಾಡುತ್ತಿದ್ದಾರೆ. ಗುರುವಾರವೂ ನೂರಾರು ಲಾರಿಗಳು ಹೆಮ್ಮಾಡಿ ಹೆದ್ದಾರಿ ರಸ್ತೆ ಬದಿಯಲ್ಲಿ ಠಿಕಾಣಿ […]

ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕ್ ವಾರ್ಷಿಕ ಮಹಾಸಭೆ

ಕುಂದಾಪುರ:ಸದಸ್ಯರ ಹೆಚ್ಚಿನ ಪ್ರೆÇೀತ್ಸಾಹದಿಂದ ಪ್ರತಿವರ್ಷ ಠೇವಣಿ ಸಂಗ್ರಹಣೆ ಮತ್ತು ಸಾಲ ವಸೂಲಾತಿಯಲ್ಲಿ ಗುರಿಯನ್ನು ಸಾಧಿಸಲಾಗುತ್ತಿದೆ.2022-23ನೇ ಸಾಲಿನಲ್ಲಿ 114 ಕೋಟಿ ರೂ.ಗೂ ಮಿಕ್ಕಿ ವ್ಯವಹಾರ ನಡೆಸಿದ್ದು, 40.99 ಲಕ್ಷ ರೂ. ನಿವ್ವಳ ಲಾಭ ಹೊಂದಿದೆ.ಲಾಭಾಂಶದಲ್ಲಿ ಸದಸ್ಯರಿಗೆ ಶೇ.10 ಪಾಲು ಮುನಾಫೆ ನೀಡಲು ನಿರ್ಧರಿಸಲಾಗಿದೆ ಎಂದು ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕ್‍ನ ಅಧ್ಯಕ್ಷ ಆನಂದ ಬಿಲ್ಲವ ಹೇಳಿದರು.ಗಂಗೊಳ್ಳಿ ಶ್ರೀರಾಮ ಮಂದಿರದಲ್ಲಿ ನಡೆದ ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕಿನ 2022-23ನೇ ಸಾಲಿನ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ನಿರ್ದೇಶಕರಾದ ಕೆ.ಮಾಧವ […]

You cannot copy content of this page