ಹೆಮ್ಮಾಡಿ:ಅನಿರ್ದಿಷ್ಟಾವಧಿ ಲಾರಿ ಮುಷ್ಕರ ಎರಡನೇ ದಿನಕ್ಕೆ

ಕುಂದಾಪುರ:ಬೈಂದೂರು ಮತ್ತು ಕುಂದಾಪುರ ತಾಲೂಕು ಲಾರಿ ಮತ್ತು ಟೆಂಪೆÇ ಮಾಲೀಕರು ಹಾಗೂ ಚಾಲಕರ ಸಂಘದ ವತಿಯಿಂದ ನಾನಾ ಬೇಡಿಕೆಗಳ ಈಡೇರಿಕೆಗಾಗಿ ಕೈಗೊಂಡಿದ್ದ ಕಟ್ಟಡ ಸಾಮಗ್ರಿ ಸಾಗಾಟದ ವಾಹನಗಳ ಅನಿರ್ದಿಷ್ಟಾವಧಿ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದ್ದು ತಾಲೂಕಿನ ಭಾಗಗಳಲ್ಲಿ ಲಾರಿಗಳ ಓಡಾಟ ಸಂಪೂರ್ಣ ಸ್ತಬ್ಧಗೊಂಡಿದೆ.ಅನಿರ್ದಿಷ್ಟಾವಧಿಗಳ ವರೆಗೆ ಕೈಗೊಂಡಿದ್ದ ಮುಷ್ಕರದ ಅಂಗವಾಗಿ ಲಾರಿ ಮಾಲೀಕರು ಮತ್ತು ಚಾಲಕರು ತಮ್ಮ ವಾಹನಗಳನ್ನು ಹೆಮ್ಮಾಡಿ ಹೆದ್ದಾರಿ ಬದಿಯಲ್ಲಿ ನಿಲ್ಲಿಸಿ ಪ್ರತಿಭಟನೆಯನ್ನು ಮಾಡುತ್ತಿದ್ದಾರೆ. ಗುರುವಾರವೂ ನೂರಾರು ಲಾರಿಗಳು ಹೆಮ್ಮಾಡಿ ಹೆದ್ದಾರಿ ರಸ್ತೆ ಬದಿಯಲ್ಲಿ ಠಿಕಾಣಿ […]

ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕ್ ವಾರ್ಷಿಕ ಮಹಾಸಭೆ

ಕುಂದಾಪುರ:ಸದಸ್ಯರ ಹೆಚ್ಚಿನ ಪ್ರೆÇೀತ್ಸಾಹದಿಂದ ಪ್ರತಿವರ್ಷ ಠೇವಣಿ ಸಂಗ್ರಹಣೆ ಮತ್ತು ಸಾಲ ವಸೂಲಾತಿಯಲ್ಲಿ ಗುರಿಯನ್ನು ಸಾಧಿಸಲಾಗುತ್ತಿದೆ.2022-23ನೇ ಸಾಲಿನಲ್ಲಿ 114 ಕೋಟಿ ರೂ.ಗೂ ಮಿಕ್ಕಿ ವ್ಯವಹಾರ ನಡೆಸಿದ್ದು, 40.99 ಲಕ್ಷ ರೂ. ನಿವ್ವಳ ಲಾಭ ಹೊಂದಿದೆ.ಲಾಭಾಂಶದಲ್ಲಿ ಸದಸ್ಯರಿಗೆ ಶೇ.10 ಪಾಲು ಮುನಾಫೆ ನೀಡಲು ನಿರ್ಧರಿಸಲಾಗಿದೆ ಎಂದು ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕ್‍ನ ಅಧ್ಯಕ್ಷ ಆನಂದ ಬಿಲ್ಲವ ಹೇಳಿದರು.ಗಂಗೊಳ್ಳಿ ಶ್ರೀರಾಮ ಮಂದಿರದಲ್ಲಿ ನಡೆದ ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕಿನ 2022-23ನೇ ಸಾಲಿನ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ನಿರ್ದೇಶಕರಾದ ಕೆ.ಮಾಧವ […]

ಪಡುಕೋಣೆ:ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ:ರಜತ ಮಹೋತ್ಸವ ಸಂಭ್ರಮ

ಬೈಂದೂರು:ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶ್ರೀ ಮಹಾವಿಷ್ಣು ದೇವಸ್ಥಾನ ಹಡವು-ಪಡುಕೋಣೆ ಹಾಗೂ ಶ್ರೀ ಮಹಾವಿಷ್ಣು ಫ್ರೆಂಡ್ಸ್ ಸರ್ಕಲ್ ಸಹಭಾಗಿತ್ವದಲ್ಲಿ ರಜತ ಮಹೋತ್ಸವ ಸಂಭ್ರಮ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು.ಕಳೆದ 25 ವರ್ಷಗಳಿಂದ ಶ್ರೀಮಹಾವಿಷ್ಣು ದೇವಸ್ಥಾನದಲ್ಲಿ ಗಣೇಶ ಚತುರ್ಥಿ ದಿನದಂದು ಗಣೇಶ ವಿಗ್ರಹವನ್ನು ಪ್ರತಿಷ್ಠಾಪಿಸಿ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಪೂಜಿಸಿಕೊಂಡು ಬರಲಾಗುತ್ತಿದೆ.ಮೂರೂ ದಿನಗಳ ಕಾಲ ಆಚರಣೆ ಗೊಳ್ಳುವ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮ ಗುರುವಾರ ಸಂಪನ್ನಗೊಂಡಿತು.ಮಹಾ ಅನ್ನಸಂತರ್ಪಣೆ ಸಹಿತ ಧಾರ್ಮಿಕ ಕಾರ್ಯಕ್ರಮ, ಮನರಂಜನೆ ಕಾರ್ಯಕ್ರಮ, ಧಾರ್ಮಿಕ ಸಭಾ ಕಾರ್ಯಕ್ರಮ ಜರುಗಿತು.ಮಂಗಳ ಮೂರ್ತಿ […]

You cannot copy content of this page