ಹಿರಿಯ ಭಜಕ ಕೃಷ್ಣ ಮೊಗವೀರರಿಗೆ ಸನ್ಮಾನ

ಕುಂದಾಪುರ:ಶ್ರೀರಾಮ ಭಜನಾ ಮಂಡಳಿ ಅರಾಟೆ-ಹೊಸಾಡು ವತಿಯಿಂದ ಶ್ರೀಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶುಕ್ರವಾರ ನಡೆದ ಮಕ್ಕಳ ಕುಣಿತಾ ಭಜನೆ ಪಾದಾರ್ಪಣೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಹಿರಿಯ ಭಜಕರಾದ ಕೃಷ್ಣ ಮೊಗವೀರ ಅರಾಟೆ ಅವರನ್ನು ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಶ್ರೀರಾಮ ಭಜನಾ ಮಂಡಳಿ ಅರಾಟೆ-ಹೊಸಾಡು ಅಧ್ಯಕ್ಷ ಸುರೇಶ ಪೂಜಾರಿ,ತಾಲೂಕು ಭಜನಾ ಮಂಡಳಿಗಳ ಒಕ್ಕೂಟ ಅಧ್ಯಕ್ಷ ನಿತಿನ್ ವಿಠಲವಾಡಿ,ವಂಡ್ಸೆ ವಲಯಾಧ್ಯಕ್ಷ ಸಂತೋಷ ಪೂಜಾರಿ,ಎಂ.ಎಂ ಸುವರ್ಣ,ರಮೇಶ್ ಆಚಾರ್ಯ,ಸುಮತಿ,ರಘುರಾಮ ಶೆಟ್ಟಿ,ಶಂಕರ ಶೆಟ್ಟಿ,ರಾಮ ಪೂಜಾರಿ ಹಾಗೂ ಭಜನಾ ಮಂಡಳಿ ಸದಸ್ಯರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

ವಿಚಾರಣೆಗೆ ತೆರಳಿದ ಪೊಲೀಸರ ಮೇಲೆ ಹಲ್ಲೆ ನಡೆಸಿದ ಮಹಿಳೆ

ಕುಂದಾಪುರ:ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆಂದು ಹೋದ ಪೊಲೀಸರ ಮೇಲೆ ಫ್ಯಾನ್ಸಿ ಸ್ಟೋರ್ ನಡೆಸುತ್ತಿದ್ದ ಮಹಿಳೆಯೊಬ್ಬರು ಹಲ್ಲೆ ನಡೆಸಲು ಯತ್ನಿಸಿದ ಘಟನೆ ಕೋಟೇಶ್ವರದಲ್ಲಿ ಮಂಗಳವಾರ ನಡೆದಿದೆ.ಸಾರ್ವಜನಿಕರಿಗೆ ಸಮಸ್ಯೆಯಾಗುವ ರೀತಿಯಲ್ಲಿ ರಸ್ತೆಯ ಮೇಲೆ ವ್ಯವಹಾರ ನಡೆಸುತ್ತಿದ್ದಾರೆ ಎಂದು ಸ್ಥಳೀಯ ವಾಹನ ಸವಾರರ ದೂರಿನ ಮೇರೆಗೆ ಸ್ಥಳಕ್ಕೆ ವಿಚಾರಣೆಗೆ ಬಂದ ಪೊಲೀಸರ ಮೇಲೆ ಫ್ಯಾನ್ಸಿ ಸ್ಟೋರ್ ನಡೆಸುತ್ತಿದ್ದ ಮಹಿಳೆ ಸೀಮೆ ಎಣ್ಣೆ ಸುರಿದು ಬೆಂಕಿ ಸೂಡಿ ಯಿಂದ ಹಲ್ಲೆಗೆ ಯತ್ನಿಸಿದ್ದಾರೆ.ಸ್ಥಳೀಯರ ಸಹಕಾರದಿಂದ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಶ್ರೀನಾಗಕನ್ನಿಕಾ ಪರಮೇಶ್ವರಿ ದೇವಸ್ಥಾನ ಶ್ರೀಕ್ಷೇತ್ರ ಹಣಿನಮಕ್ಕಿ

ಕುಂದಾಪುರ:ಹೊಸಾಡು ಗ್ರಾಮದ ಅರಾಟೆ ಶ್ರೀನಾಗಕನ್ನಿಕಾ ಪರಮೇಶ್ವರಿ ದೇವಸ್ಥಾನ ಶ್ರೀ ಕ್ಷೇತ್ರ ಹಣಿನಮಕ್ಕಿಯಲ್ಲಿ ನಾಗರ ಪಂಚಮಿ ಉತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಸೋಮವಾರ ನಡೆಯಿತು.ನಾಗರ ಪಂಚಮಿ ಹಬ್ಬದ ಪ್ರಯುಕ್ತ ಶ್ರೀ ಕ್ಷೇತ್ರದಲ್ಲಿ ವಿಶೇಷ ಪೂಜಾಭಿಷೇಕ,ಹಣ್ಣುಕಾಯಿ,ಮಂಗಳಾರತಿ ಸೇವೆ ಹಾಗೂ ಪ್ರಸಾದ ವಿತರಣಾ ಕಾರ್ಯಕ್ರಮ ಜರುಗಿರತು.

You cannot copy content of this page