ಬಿಜೆಪಿ ಪಕ್ಷದ ಬಂಡಾಯ ಅಭ್ಯರ್ಥಿ ಲೋಕೇಶ್ ಖಾರ್ವಿಗೆ ಒಲಿದ ಅಧ್ಯಕ್ಷ ಸ್ಥಾನ

ಬೈಂದೂರು:ರಾಷ್ಟ್ರಮಟ್ಟದಲ್ಲಿ ಹೆಸರನ್ನು ಗಳಿಸಿರುವ ಬೈಂದೂರು ತಾಲೂಕಿನ ಮರವಂತೆ ಗ್ರಾಮ ಪಂಚಾಯತಿನ ಅಧ್ಯಕ್ಷ,ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಬಂಡಾಯ ಅಭ್ಯರ್ಥಿ ಹಾಲಿ ಪಂಚಾಯತ್ ಉಪಾಧ್ಯಕ್ಷ ಲೋಕೇಶ್ ಖಾರ್ವಿ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ಸುಶೀಲ ಉಪಾಧ್ಯಕ್ಷರಾಗಿ ಆಯ್ಕೆಯಾದರು.ಬಿಜೆಪಿ ಪಕ್ಷದ ಬೆಂಬಲಿತ 11 ಸದಸ್ಯರು ಹಾಗೂ ಕಾಂಗ್ರೆಸ್ ಪಕ್ಷದ ಬೆಂಬಲಿತ 02 ಸದಸ್ಯರು ಮತ್ತು ಜೆಡಿಎಸ್ ಪಕ್ಷದ ಬೆಂಬಲಿತ ಅಭ್ಯರ್ಥಿ 01 ಸದಸ್ಯರೊಳಗೊಂಡ ಮರವಂತೆ ಪಂಚಾಯತ್‍ನಲ್ಲಿ ಒಟ್ಟು 14 ಗ್ರಾಮ ಪಂಚಾಯತ್ ಸದಸ್ಯರಿದ್ದಾರೆ.ಅಧ್ಯಕ್ಷ,ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಬೆಂಬಲಿತ ಸದಸ್ಯ ನಾಗರಾಜ ಪಠಗಾರ […]

ಬಿಜೆಪಿಗೆ ಮತ ಹಾಕುವವರು ರಾಕ್ಷಸರು:ಕಾಂಗ್ರೆಸ್ ಮುಖಂಡ ಸುರ್ಜೇವಾಲಾ ವಿವಾದಾತ್ಮಕ ಹೇಳಿಕೆ

ಬೆಂಗಳೂರು:ಹರಿಯಾಣದ ಕೈದಾಲ್‍ನಲ್ಲಿ ಭಾನುವಾರ ನಡೆದ ಜನಕ್ರೋಶ ಸಭೆಯಲ್ಲಿ ಮಾತನಾಡಿದ ಕಾಂಗ್ರಸ್ ಪಕ್ಷದ ಮುಖಂಡ ರಣದೀಪ್ ಸುರ್ಜೇವಾಲಾ ಬಿಜೆಪಿ ನಾಯಕರು,ಬಿಜೆಪಿಗೆ ಮತ ಹಾಕುವವರು ರಾಕ್ಷಸರು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.ಬಿಜೆಪಿಗೆ ಮತ ಹಾಕುವವರು ಮತ್ತು ಬಿಜೆಪಿ ಬೆಂಬಲಿಗರು ಅವರು ರಾಕ್ಷಸ ಸ್ವಭಾವದವರು.ನಾನು ಅವರನ್ನು ಇಂದು ಮಹಾಭಾರತದ ಈ ಭೂಮಿಯಿಂದ ಶಪಿಸುತ್ತೇನೆ,ಮಹಾಭಾರತ ನಡೆದ ಸ್ಥಳದಿಂದ ಇದನ್ನು ಹೇಳುತ್ತಿದ್ದೇನೆ ಎಂದಿದ್ದಾರೆ.ಸುರ್ಜೇವಾಲ ಅವರ ಈ ವಿವಾದಾತ್ಮಕ ವಿಡಿಯೋ ವೈರಲ್ ಆಗಿದೆ.

ಸಿದ್ದಾಪುರದ ಸೂರ,ಗಿರಿಜಾ ಪೂಜಾರಿ ದಂಪತಿಗೆ ಮೋದಿ ಆಹ್ವಾನ

ಕುಂದಾಪುರ:ಉದ್ಯೋಗ ಖಾತರಿ ಯೋಜನೆಯಡಿ ಅಮೃತ ಸರೋವರ ಯೋಜನೆಯಲ್ಲಿ ನೂರು ದಿನಕ್ಕೂ ಮಿಕ್ಕಿ ಕೆಲಸವನ್ನು ಮಾಡಿದ ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದ ಕೆಳಪೇಟೆ ಸೂರ ಪೂಜಾರಿ ಮತ್ತು ಗಿರಿಜಾ ಪೂಜಾರಿ ದಂಪತಿಗಳಿಗೆ ಆ.15 ರಂದು ದೆಹಲಿಯಲ್ಲಿ ನಡೆಯುವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಿವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಆಹ್ವಾನವನ್ನು ನೀಡಿದ್ದಾರೆ.ದಂಪತಿಗಳು ನಾಳೆ ನಡೆಯುವ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

You cannot copy content of this page