ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರದಲ್ಲಿ ನೋಶ್ ಅನ್ವೇಶನ್ ಕಾರ್ಯಕ್ರಮ
ಕುಂದಾಪುರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರದಲ್ಲಿ ಆಹಾರ ತಂತ್ರಜ್ಞಾನ ವಿಭಾಗದಿಂದ ನೋಶ್ ಅನ್ವೇಶನ್ ಎನ್ನುವ ಕಾರ್ಯಕ್ರಮ ನಡೆಯಿತು. ನೋಶ್ ಅನ್ವೇಶನ್ ಕಾರ್ಯಕ್ರಮದ ಅಂಗವಾಗಿ ನವೀನ ಮಾದರಿಯ ಹೊಸ ಉತ್ಪನ್ನಗಳನ್ನು ತಯಾರಿಸುವ ಕುರಿತಾಗಿ ಮಾಹಿತಿ ನೀಡಲಾಯಿತು. ವಿದ್ಯಾರ್ಥಿಗಳಿಗೆ ಹೊಸ ಆಹಾರ ಉತ್ಪನ್ನಗಳನ್ನು ತಯಾರಿಸುವ ಸ್ಪರ್ಧೆಯನ್ನು ಏರ್ಪಡಿಸಿಲಾಗಿದ್ದು,ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆಯನ್ನು ಮಾಡಲಾಯಿತು.
ವೆರ್ಲಿನ್ ಜಾನ್ ಗೋವೇಸ್ ಪ್ರಾವಿಟ್ ಫುಡ್ಸ್ ಪ್ರೈವೇಟ್ ಲಿಮಿಟೆಡ್ ಮಂಗಳೂರು ಅವರು ವಿದ್ಯಾರ್ಥಿಗಳಿಗೆ ಆಹಾರ ತಂತ್ರಜ್ಞಾನ ವಿಭಾಗವನ್ನು ಆಯ್ಕೆ ಮಾಡಿಕೊಳ್ಳುವುದರ ಮೂಲಕ ಇರುವ ಉಪಯೋಗ ,ಭವಿಷ್ಯದಲ್ಲಿ ಸಿಗುವ ಉದ್ಯೋಗದ ಕುರಿತು ಹಾಗೂ ಯಾವ ರೀತಿ ಹೊಸ ಆಹಾರ ಉತ್ಪನ್ನಗಳನ್ನು ತಯಾರಿಸ ಬಹುದು ಎನ್ನುವ ಕುರಿತು ಮಾಹಿತಿ ನೀಡಿದರು.ಇದರ ಜೊತೆಗೆ ವಿದ್ಯಾರ್ಥಿಗಳೇ ರಚಿಸಿದ ಭಿತ್ತಿ ಪತ್ರಿಕೆ ಅನಾವರಣ ಮಾಡಲಾಯಿತು.ಕಾಲೇಜಿನ ಸಂಸ್ಥಾಪಕರಾದ ಶ್ರೀ ಸುಬ್ರಮಣ್ಯ ,ಹಾಗೂ ಕಾಲೇಜಿನ ನಿರ್ದೇಶಕಿಯಾದ ಶ್ರೀಮತಿ ಮಮತಾ ಉಪಸ್ಥಿತರಿದ್ದರು. ಉಪಪ್ರಾಂಶುಪಾಲರಾದ ಶ್ರೀಮತಿ ಸುಜಾತ ,ಆಹಾರ ತಂತ್ರಜ್ಞಾನ ವಿಭಾಗದ ಮುಖ್ಯಸ್ಥೆ ಶ್ರೀಮತಿ ವಿನಂತಿ,ವಿದ್ಯಾರ್ಥಿ ಪ್ರತಿನಿಧಿಯಾಗಿ ಕ್ರೂಸ್ ,ನಿಶ್ಚಿತಾ, ಎಲ್ಲಾ ಉಪನ್ಯಾಸಕರು ಹಾಗೂ ಉಪನ್ಯಾಸಕೇತರರು ಆಹಾರ ತಂತ್ರಜ್ಞಾನ ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಆಹಾರ ತಂತ್ರಜ್ಞಾನದ ವಿದ್ಯಾರ್ಥಿ ಕೈರುನಿಸಾ ನಿರೂಪಿಸಿದರು, ಪೃಥ್ವಿ ಸ್ವಾಗತಿಸಿ ,ವಿದ್ಯಾರ್ಥಿನಿ ಆ್ಯನಂ ವಂದಿಸಿದರು.