ಪೌಷ್ಟಿಕ ಆಹಾರ ಪ್ರದರ್ಶನ,ಪೋಷಣ್ ಅಭಿಯಾನ ಕಾರ್ಯಕ್ರಮ

ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು ಕಿಶೋರಿಯರಲ್ಲಿ ರಕ್ತಹೀನತೆ ಕಂಡು ಬಂದಿರುವುದು ಮಾತ್ರವಲ್ಲದೆ,ಶೇ.30 ರಷ್ಟು ಗಂಡು ಮಕ್ಕಳಲ್ಲಿಯೂ ಕೂಡ ರಕ್ತಹೀನತೆ ಇದೆ ಎಂದು ವರದಿಯಾಗಿರುವುದು ಆತಂಕಕಾರಿ ವಿಷಯವಾಗಿದೆ.ಪೌಷ್ಟಿಕ ಆಹಾರ ಸೇವನೆಯಿಂದ ಮಾತ್ರ ಪರಿಹಾರವನ್ನು ಕಂಡು ಕೊಳ್ಳಲು ಸಾಧ್ಯವಾಗಿರುವುದರಿಂದ ಆಂದೋಲನದ ರೀತಿಯಲ್ಲಿ ಪೋಷಣ್ ಅಭಿಯಾನ ಕಾರ್ಯಕ್ರಮವನ್ನು ಗ್ರಾಮ ಮಟ್ಟದಲ್ಲಿ ಆಯೋಜನೆ ಮಾಡಲಾಗುತ್ತಿದೆ ಎಂದು ತಾಲೂಕು ಆರೋಗ್ಯ ಶಿಕ್ಷಣ ಅಧಿಕಾರಿ ಭಾಗ್ಯಲಕ್ಷ್ಮೀ ಹೇಳಿದರು.
ಹೊಸಾಡು ಗ್ರಾಮ ಪಂಚಾಯತಿ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ,ಶಿಶು ಅಭಿವೃದ್ಧಿ ಯೋಜನೆ ಕುಂದಾಪುರ, ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರ,ಹೊಸಾಡು ಗ್ರಾ.ಪಂ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳು ಹಾಗೂ ಸಂಜೀವಿನಿ ಒಕ್ಕೂಟ ಹೊಸಾಡು ಸಂಯುಕ್ತ ಆಶ್ರಯದಲ್ಲಿ ಬುಧವಾರ ಹೊಸಾಡು ಗ್ರಾಮ ಪಂಚಾಯತಿ ಸಭಾಭವನದಲ್ಲಿ ನಡೆದ ಪೋಷಣ್ ಮಾಸಾಚರಣೆ ಕಾರ್ಯಕ್ರಮ ಹಾಗೂ ಪೌಷ್ಟಿಕ ಆಹಾರಗಳ ಬಗೆಗಿನ ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಹೊಸಾಡು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶೋಭಾ ಅಧ್ಯಕ್ಷತೆ ವಹಿಸಿ ಉದ್ಘಾಟಿಸಿದರು.
ಅಂಗನವಾಡಿ ವಲಯ ಮೇಲ್ವಿಚಾರಕಿ ರೇಖಾ ಕೆ,ದಾನಿ ಎಂ.ಎಂ.ಸುವರ್ಣ,ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘದ ಅಧ್ಯಕ್ಷೆ ಫಿಲೋಮಿನಾ ಫೆರ್ನಾಂಡಿಸ್,ಹಿರಿಯ ಆರೋಗ್ಯ ಸಹಾಯಕ ಹುಲಿಯಪ್ಪ ಗೌಡ,ಎನ್‍ಆರ್‍ಎಲ್‍ಎಂ ಮೇಲ್ವಿಚಾರಕಿ ಮಮತಾ,ಆರೋಗ್ಯ ಸುರಕ್ಷಾ ಅಧಿಕಾರಿ ದೀಪಾ,ಹೊಸಾಡು ಒಕ್ಕೂಟದ ಅಧ್ಯಕ್ಷೆ ಯಶೋಧ,ಬಾಲ ವಿಕಾಸ ಸಮಿತಿ ಅಧ್ಯಕ್ಷೆ ರೇಖಾ,ಕಪಿಲ್ ಚೋಪ್ರಾ, ಅಂಗನವಾಡಿ ಕಾರ್ಯಕರ್ತೆಯರು,ಸಹಾಯಕಿಯರು,ಸಂಜೀವಿನಿ ಒಕ್ಕೂಟದ ಸದಸ್ಯರು,ಆಶಾ ಕಾರ್ಯಕರ್ತರು,ಪ್ರಾಥಮಿಕ ಆರೋಗ್ಯ ಕೇಂದ್ರ ಸಿಬಂದಿಗಳು,ಗ್ರಾಮಸ್ಥರು,ಸಂಜೀವಿನಿ ಎಲ್‍ಸಿಆರ್‍ಪಿ,ಸಖಿಯರು,ಪಂಚಾಯಿತಿ ಸಿಬ್ಬಂದಿಗಳು ಉಪಸ್ಥಿತರಿದ್ದರು.ಗರ್ಭಿಣಿ ಮಹಿಳೆಯರಿಗೆ ಸೀಮಂತ ನೆರವೇರಿಸಲಾಯಿತು.ಪೌಷ್ಟಿಕಾಂಶಭರಿತ ಆಹಾರ ಪ್ರದರ್ಶನ ಜರುಗಿತು.ಎಂಬಿಕೆ ಚೈತ್ರಾ ಸ್ವಾಗತಿಸಿದರು,ಅಂಗನವಾಡಿ ಕಾರ್ಯಕರ್ತೆ ಸುನೀತಾ ನಿರೂಪಿಸಿದರು.ಪ್ರೇಮ ವಂದಿಸಿದರು.