ಗುಜ್ಜಾಡಿ ಗ್ರಾಮ ಪಂಚಾಯತ್‍ನ,ಪ್ರಥಮ ಸುತ್ತಿನ ಗ್ರಾಮಸಭೆ

Share

ಕುಂದಾಪುರ:ಗುಜ್ಜಾಡಿ ಗ್ರಾಮ ಪಂಚಾಯತಿಯ 2023-24ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಗುರುವಾರ ನಡೆಯಿತು.ಗ್ರಾ.ಪಂ ಅಧ್ಯಕ್ಷೆ ಯಮುನಾ ಪೂಜಾರಿ ಅಧ್ಯಕ್ಷತೆಯನ್ನು ವಹಿಸಿದ್ದರು.
ಸಹಾಯಕ ಕಾರ್ಯನಿರ್ವಾಹಕ ಇಂಜಿಯರ್ ಬೈಂದೂರು ರಾಜ್‍ಕುಮಾರ್ ನೋಡಲ್ ಅಧಿಕಾರಿಯಾಗಿ ಭಾಗವಹಿಸಿ ಗ್ರಾಮ ಸಭೆಯನ್ನುದ್ದೆಶೀಸಿ ಮಾತನಾಡಿ ಗ್ರಾಮದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯ ಬೇಕಾದರೆ ಗ್ರಾಮಸ್ಥರ ಪಾತ್ರ ಬಹುಮುಖ್ಯವಾಗಿರುತ್ತದೆ ಎಂದು ಹೇಳಿದರು.ಗ್ರಾಮ ಪಂಚಾಯತ್‍ನಲ್ಲಿ ಕೈ ಗೊಂಡ ವಿವಿಧ ಕಾಮಗಾರಿ,ಜನರ ಬೇಡಿಕೆಗಳನ್ನು ಸಭೆಯಲ್ಲಿ ಓದಿ ಹೇಳಲಾಯಿತು.ವರ್ಷದಲ್ಲಿ ಎರಡು ಗ್ರಾಮ ಸಭೆಗಳನ್ನು ಕಡ್ಡಾಯವಾಗಿ ನಡೆಸುವಂತೆ ಸಾರ್ವಜನಿಕರ ಬೇಡಿಕೆ ಮೆರೆಗೆ ಕಡತದಲ್ಲಿ ದಾಖಲಿಸಿಕೊಳ್ಳಲಾಯಿತು.ಗ್ರಾಮದ ಸಮಸ್ಯೆಗಳ ಬಗ್ಗೆ ಗ್ರಾಮಸ್ಥರು ಚರ್ಚಿಸಿದರು.ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷ ರಾಜು.ಎನ್ ಪೂಜಾರಿ ಮತ್ತು ಸಸದ್ಯರು,ಇಲಾಖಾಧಿಕಾರಿಗಳು,ಗ್ರಾಮಸ್ಥರು ಉಪಸ್ಥಿತರಿದ್ದರು.ಕಾರ್ಯದರ್ಶಿ ಶಕುಂತಲಾ ನಿರೂಪಿಸಿದರು.ಅಭಿವೃದ್ಧಿ ಅಧಿಕಾರಿ ಅನಿತಾ ಸ್ವಾಗತಿಸಿದರು.

Advertisement

Share

Leave a comment

Your email address will not be published. Required fields are marked *

You cannot copy content of this page