ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು ಬಳಗವನ್ನು ಅಗಲಿದ್ದಾರೆ.
ಪಂಚಗಂಗಾವಳಿ ಸೊಸೈಟಿ ಸ್ಥಾಪಕಾಧ್ಯಕ್ಷರಾಗಿ,ತ್ರಾಸಿ ಹೊಸಾಡು ಗುಜ್ಜಾಡಿ ಸಂಘದ ಸ್ಥಾಪಕಾಧ್ಯಕ್ಷರಾಗಿಯೂ, ಪಂಚಾಂಗ ಸೊಸೈಟಿ ಹೆಮ್ಮಾಡಿ ಅದರ ಅಧ್ಯಕ್ಷರಾಗಿಯೂ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.ಎಲ್ಲಾ ಸಮುದಾಯದ ಜನರ ಮೆಚ್ಚುಗೆಗೆ ಪಾತ್ರರಾಗಿರುವ ರಾಜು ದೇವಾಡಿಗ ತ್ರಾಸಿ ಅವರ ಸಾವು ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ದೇವಾಡಿಗ ಸಮಾಜದ ಮುಖಂಡರು ತಿಳಿಸಿದ್ದಾರೆ.




























































































































































































































































































































































































































































































































































































































































































































































































































































































































































































































































































































































































































































































































































































































































































