ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರ ಸಂಘ ನವೀಕೃತ ಶಾಖೆ ಉದ್ಘಾಟನೆ
ಕುಂದಾಪುರ:ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರ ಸಂಘ ಗಂಗೊಳ್ಳಿ ಅದರ ಕುಂದಾಪುರ ಶಾಖೆಯ ನವೀಕೃತ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ ವಿದ್ಯಾರಂಗ ಮಿತ್ರ ಮಂಡಳಿ ಖಾರ್ವಿಕೇರಿ ಕುಂದಾಪುರದಲ್ಲಿ ನಡೆಯಿತು.ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅವರು ಉದ್ಘಾಟಿಸಿ ಶುಭಹಾರೈಸಿದರು.
ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರ ಸಂಘ ಅಧ್ಯಕ್ಷ ಸದಾಶಿವ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು,ಶ್ರೀಮಹಾಕಾಳಿ ದೇವಸ್ಥಾನ ಕುಂದಾಪುರ ಅಧ್ಯಕ್ಷ ಜಯಾನಂದ ಖಾರ್ವಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ,ಸಹಕಾರ ಸಂಘಗಳ ಸಹಾಯಕ ನಿಬಂಧಕರು ಕುಂದಾಪುರ ಅರುಣಕುಮಾರ್ ಎಸ್.ವಿ,ಕರಾವಳಿ ಸಾಂಪ್ರದಾಯಿಕ ನಾಡದೋಣಿ ಅಧ್ಯಕ್ಷ ಯಶವಂತ್ ಖಾರ್ವಿ,ಹಸಿ ಮೀನು ವ್ಯಾಪರಸ್ಥರ ಸಂಘ ಗಂಗೊಳ್ಳಿ ಗಾಳಿ ಜನಾರ್ಧನ ಖಾರ್ವಿ,ವಿದ್ಯಾರಂಗ ಮಿತ್ರ ಮಂಡಳಿ ಅಧ್ಯಕ್ಷ ಕುಂದಾಪುರ ದಾಮೋದರ ಖಾರ್ವಿ ಹಾಗೂ ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರ ಸಂಘದ ನಿರ್ದೇಶಕರು,ಸಿಬ್ಬಂದಿಗಳು,ಸದಸ್ಯರು ಉಪಸ್ಥಿತರಿದ್ದರು.ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರವಿಚಂದ್ರ ಸ್ವಾಗತಿಸಿದರು.ಉಪಾಧ್ಯಕ್ಷ ಸೂರಜ್ ಖಾರ್ವಿ ವಂದಿಸಿದರು.