ಆಲೂರು:ಸಿಂಚನ ಶೆಟ್ಟಿ ರಾಷ್ಟ್ರಮಟ್ಟಕ್ಕೆ ಆಯ್ಕೆ
ಕುಂದಾಪುರ:ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನಲ್ಲಿ ನಡೆದ ರಾಜ್ಯ ಮಟ್ಟದ ಪ್ರೌಢಶಾಲಾ ಬಾಲಾಕಿಯರ ಥ್ರೊಬಾಲ್ ಪಂದ್ಯಾಟದಲ್ಲಿ ಮೈಸೂರು ವಿಭಾಗವನ್ನು ಪ್ರತಿನಿಧಿಸಿದ ಕುಂದಾಪುರ ತಾಲೂಕಿನ ಆಲೂರು ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಾದ ಸಿಂಚನ ಶೆಟ್ಟಿ,ನಿಶ್ಮಿತಾ ಹಾಗೂ ಪ್ರೀತಿ ಉತ್ತಮ ಪ್ರದರ್ಶನವನ್ನು ನೀಡಿದ್ದಾರೆ.ಸಿಂಚನ ಶೆಟ್ಟಿ ರಾಷ್ಟ್ರಮಟ್ಟದ ಥ್ರೋಪಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.ಶಾಲೆಯ ದೈಹಿಕ ಶಿಕ್ಷಕ ಪ್ರವೀಣ್ ಕುಮಾರ್ ಶೆಟ್ಟಿ,ವೀರೇಂದ್ರ ಜೋಗಿ,ಮುಖ್ಯ ಶಿಕ್ಷಕ ಉದಯ ಕುಮಾರ್ ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ಸಹಕಾರವನ್ನು ನೀಡಿದ್ದರು.