ಎನ್ ಜಿಟಿ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ:ಎನ್ ಜಿಟಿಗೆ ಅರ್ಜಿ ಸಲ್ಲಿಸಿದ್ದ ಅರ್ಜಿದಾರನಿಗೆ ನೋಟಿಸ್
ಬೆಂಗಳೂರು:ದೆಹಲಿ ಲೆಫ್ಟಿನೆಂಟ್ ಗವರ್ನರ್ ಅವರು ಯಮುನಾ ನದಿ ಸ್ವಚ್ಛಗೊಳಿಸುವುದಕ್ಕೆ ಸಂಬಂಧಿಸಿ ರಚಿಸಿರುವ ಉನ್ನತ ಮಟ್ಟದ ಸಮಿತಿ ನೇತೃತ್ವ ವಹಿಸಿಕೊಳ್ಳುವಂತೆ ಸೂಚಿಸಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಎನ್ ಜಿಟಿ ಆದೇಶ ಪ್ರಶ್ನಿಸಿ ದೆಹಲಿ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಪಿ.ಎಸ್ ನರಸಿಂಹ ಮತ್ತು ಮನೋಜ್ ಮಿಶ್ರಾ ಅವರಿದ್ದ ನ್ಯಾಯಪೀಠ ನಡೆಸಿದೆ.ಎನ್ ಜಿಟಿಗೆ ಸಲ್ಲಿಸಿದ್ದ ಅರ್ಜಿದಾರನಿಗೆ ನೋಟಿಸ್ ನೀಡಿ ನ್ಯಾಯಪೀಠ, ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿತು.
ಎನ್ ಜಿಟಿ ಆದೇಶದಲ್ಲಿ ಉಲ್ಲೇಖವಾಗಿರುವ, ಲೆಫ್ಟಿನೆಂಟ್ ಗವರ್ನರ್ ಅವರು ಉನ್ನತ ಮಟ್ಟದ ಸಮಿತಿಯ ಸದಸ್ಯರಾಗಿರುವ ಜೊತೆಗೆ ಸಮಿತಿ ನೇತೃತ್ವ ವಹಿಸಬೇಕು ಎಂಬುದಕ್ಕೆ ಮಾತ್ರ ತಡೆ ನೀಡಲಾಗಿದ್ದು,ಆದೇಶದಲ್ಲಿನ ಉಳಿದ ಅಂಶಗಳಿಗೆ ತಡೆ ಅನ್ವಯಿಸುವುದಿಲ್ಲ ಎಂದು ನ್ಯಾಯಪೀಠ ಹೇಳಿದೆ.