ದ್ವಿತೀಯ ಪಿಯುಸಿ ಫಲಿತಾಂಶ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿಗೆ ಶೇಕಡಾ 100 ಫಲಿತಾಂಶ.
ಹೆಮ್ಮಾಡಿ:ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿ 2023-24ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ ದಾಖಲಿಸಿದ್ದಾರೆ.
386 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು,226 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ,(ಡಿಸ್ಟ್ರಿಂಕ್ಷನ್) ಉತ್ತೀರ್ಣರಾಗಿದ್ದು, ಈ ವಿದ್ಯಾರ್ಥಿಗಳು ಅತ್ಯದಿಕ ಅಂಕಗಳನ್ನು ಪಡೆದು ಸಾಧನೆ ಮೆರೆದಿದ್ದಾರೆ.
ಪ್ರತೀಕ್ಷಾ 589 (ವಾಣಿಜ್ಯ ವಿಭಾಗ), ಪ್ರಜ್ವಲ್ ಪೂಜಾರಿ 588 (ವಿಜ್ಞಾನ ವಿಭಾಗ), ಪವಿತ್ರಾ 588(ವಿಜ್ಞಾನ ವಿಭಾಗ),
ಲಾವಣ್ಯ 588(ವಾಣಿಜ್ಯ ವಿಭಾಗ) ಐಶ್ವರ್ಯ ವೈದ್ಯ 587(ವಿಜ್ಞಾನ ವಿಭಾಗ).
155 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ,ಹಾಗೂ 5 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.
ಕಾಲೇಜು ಪ್ರಾರಂಭಗೊಂಡ 2ನೇ ವರ್ಷದಲ್ಲಿಯೂ ಅತ್ಯುತ್ತಮ ಫಲಿತಾಂಶವನ್ನು ಪಡೆಯುವುದರ ಮೂಲಕ ಕರಾವಳಿ ಭಾಗದಲ್ಲಿ ವಿಶೇಷವಾಗಿ ಗುರುತಿಸಿಕೊಂಡಿದೆ.
ಶೈಕ್ಷಣಿಕ ಚಟುವಟಿಕೆಗಳೊಂದಿಗೆ ಕ್ರೀಡೆ, ಕಲೆ, ಸಾಹಿತ್ಯ ಚಟುವಟಿಕೆಗಳಿಗೂ ಪ್ರೋತ್ಸಾಹ ನೀಡುತ್ತಿರುವುದು ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಗೆ ಪೂರಕವಾಗಿದ್ದು,ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು ಅಭಿನಂದಿಸಿದ್ದಾರೆ.