ಧಾರಾವಾಹಿಯಲ್ಲಿ ದೈವದ ವೇಷ ಬಳಕೆ,ದೈವಾರಾಧಕ ರಿಂದ ದೂರು ದಾಖಲು
ಮಂಗಳೂರು:ಖಾಸಗಿ ಟಿವಿ ವಾಹಿನಿಯೊಂದು ತನ್ನ ಧಾರವಾಹಿಯಲ್ಲಿ ಕರಾವಳಿಯ ನಂಬಿಕೆ ಭೂತಾರಾಧನೆ ಬಗ್ಗೆ ದೃಶ್ಯಾವಳಿಯನ್ನು ಬಳಸಿಕೊಂಡಿರುವುದು ವಿವಾದಕ್ಕೆ ಕಾರಣವಾಗಿದ್ದು,ಕರಾವಳಿ ಭಾಗದ ದೈವಾರಾಧಕರ ಆಕ್ರೋಶ ಭುಗಿಲೆದ್ದಿದೆ. ಮಾತ್ರವಲ್ಲ ತುಳುನಾಡ ಮಂದಿ ಕೂಡ ಈ ಬಗ್ಗೆ ಆಕ್ರೋಶ ಮತ್ತು ಬೇಸರ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹಿಗ್ಗಾಮುಗ್ಗಾ ವಾಹಿನಿ ಬಗ್ಗೆ ಹಾಗೂ ಧಾರಾವಾಹಿ ತಂಡ ಮತ್ತು ಡೈರೆಕ್ಟರ್ ರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಆರ್ ಪ್ರೀತಮ್ ಶೆಟ್ಟಿ ಈ ಧಾರಾವಾಹಿ ಯನ್ನು ನಿರ್ದೇಶನ ಮಾಡುತ್ತಿದ್ದಾರೆ.ದೈವಾರಾಧನೆ ಪ್ರದರ್ಶನ ಧಾರಾವಾಹಿಗೂ ವ್ಯಾಪಿಸಿರುವುದು ದೈವಾರಾಧಕರ ಕೆಂಗಣ್ಣಿಗೆ ಗುರಿಯಾಗಿದೆ. ಧಾರಾವಾಹಿಯಲ್ಲಿ ದೈವಕೋಲ ಮಾಡಿರುವುದಕ್ಕೆ ತುಳುನಾಡ ದೈವಾರಾಧಕರು ಗರಂ ಆಗಿದ್ದಾರೆ.ಭೂತಾರಾಧನೆ ಪ್ರದರ್ಶನ ಬೆನ್ನಲ್ಲೇ ದೈವಾರಾಧಕರು ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದ್ದಾರೆ. ಖಾಸಗಿ ವಾಹಿನಿಯ ಧಾರಾವಾಹಿಯ ಪ್ರೋಮೋ ದೈವದಂತೆ ವೇಷ ಭೂಷಣ ಧರಿಸಿ ನಟನೆ ಮಾಡಲಾಗಿದೆ. ದೈವದ ಪಾತ್ರ ನಿರ್ವಹಿಸಿದ ಕಲಾವಿದನಿಗೆ ಸಾಮಾಜಿಕ ಜಾಲತಾಣದಲ್ಲೂ ಕ್ಲಾಸ್ ತೆಗೆದುಕೊಳ್ಳಲಾಗಿದೆ.ವಿಡಿಯೋ ವೈರಲ್ ಬೆನ್ನಲ್ಲೇ ಯಾವುದೇ ಕಾರಣಕ್ಕೂ ಧಾರವಾಹಿ ತೆರೆ ಮೇಲೆ ಬರಬಾರದೆಂದು ಪಟ್ಟು ಹಿಡಿದಿರುವ ತುಳುನಾಡ ದೈವಾರಾಧೆ ಸಂರಕ್ಷಣಾ ಯುವ ವೇದಿಕೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.































































































































































































































































































































































































































































































































































































































































































































































































































































































































































































































































































































































































































































































































































































































































































