ಜನತಾ ನವನೀತ-2024 ಅಭಿವಿನ್ಯಾಸ ಕಾರ್ಯಕ್ರಮ ಉದ್ಘಾಟನೆ




ಕುಂದಾಪುರ:ಮಕ್ಕಳ ಒಳಗೆ ಅಡಗಿರುವ ಆತಂತರಿಕ ತುಡಿತವನ್ನು ಹುಡುಕಿ ಅವರ ಅಭಿರುಚಿಗೆ ತಕ್ಕಂತೆ ಶಿಕ್ಷಣವನ್ನು ನೀಡುವುದರಿಂದ ವಿದ್ಯಾರ್ಥಿಗಳಿಗೆ ಉತ್ತಮ ಅಂಕಗಳನ್ನು ಪಡೆಯಲು ಸಾಧ್ಯವಾಗುತ್ತದೆ.ಆ ನಿಟ್ಟಿನಲ್ಲಿ ಹೆಮ್ಮಾಡಿ ಜನತಾ ಕಾಲೇಜು ಮುಂದುಡಿ ಇಡುತ್ತಿದ್ದು ಹೆಚ್ಚಿನ ರ್ಯಾಂಕ್‍ಗಳನ್ನು ಗಳಿಸಲು ಸಾಧ್ಯವಾಗಿದೆ.ಕಾಲೇಜು ಆರಂಭಗೊಂಡ ಕೇವಲ ಎರಡೆ ವರ್ಷದಲ್ಲಿ 256 ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿರುವುದು ಐತಿಹಾಸಿಕ ದಾಖಲೆ ಎಂದು ಶಿಕ್ಷಕರು ಮತ್ತು ರಾಷ್ಟ್ರೀಯ ಮಟ್ಟದ ವ್ಯಕ್ತಿತ್ವ ವಿಕಸನ ತರಬೇತುದಾರರಾದ ರಾಜೇಂದ್ರ ಭಟ್.ಕೆ ಹೇಳಿದರು.
ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಮತ್ತು ಜನತಾ ನ್ಯೂ ಇಂಗ್ಲೀಷ್ ಸ್ಕೂಲ್ ಕಿರಿಮಂಜೇಶ್ವರ ವತಿಯಿಂದ ಕುಂದಾಪುರ ಮೊಗವೀರ ಭವನದಲ್ಲಿ ಸೋಮವಾರ ನಡೆದ ಜನತಾ ನವನೀತ-2024,ಅಭಿವಿನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಣ್ಣ ಸಣ್ಣ ಸವಾಲು ಮತ್ತು ಸೋಲನ್ನು ಎದುರಿಸುವ ಮನೋಭಾವವನ್ನು ವಿದ್ಯಾರ್ಥಿಗಳು ಹೊಂದಿರುವುದು ಬಹಳ ಮುಖ್ಯವಾಗಿದ್ದು.ಅನ್ವೇಷಣೆಯಲ್ಲಿ ತೊಡಗಿಕೊಂಡು ಹೆಚ್ಚಾಗಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ಇಟ್ಟುಕೊಳ್ಳಬೇಕು ಎಂದು ಕಿವಿ ಮಾತನ್ನು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷ ಹಾಗೂ ಪ್ರಿನ್ಸಿಪಾಲ್ ಗಣೇಶ ಮೊಗವೀರ ಮಾತನಾಡಿ,2022 ರಲ್ಲಿ ಆರಂಭಗೊಂಡಿರುವ ಜನತ ಕಾಲೇಜು ಎರಡೆ ವರ್ಷದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರನ್ನು ಗಳಿಸಿದೆ.ಕನಿಷ್ಠ ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಿಕೊಂಡು ಉತ್ತಮ ಶಿಕ್ಷಣವನ್ನು ನೀಡುವುದರ ಮೂಲಕ ಶೇಕಡಾ 100 ಫಲಿತಾಂಶವನ್ನು ಗಳಿಸಿರುವುದು ಕಾಲೇಜಿನಲ್ಲಿ ನೀಡುತ್ತಿರುವ ಉತ್ತಮ ಶಿಕ್ಷಣಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದರು.ಶಿಕ್ಷಣ ಪಠ್ಯೇತರ ಚಟುವಟಿಕೆ ಜತೆಗೆ ಎಲ್ಲಾ ವಿಭಾಗದಲ್ಲಿಯೂ ತೊಡಗಿಕೊಂಡಿರುವ ವಿದ್ಯಾರ್ಥಿಗಳು ರಾಷ್ಟ್ರೀಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ರ್ಯಾಂಕ್‍ಗಳನ್ನು ಗಳಿಸಿರುವುದು ಹೆಮ್ಮೆ ವಿಷಯವಾಗಿದೆ ಎಂದರು.
ಜನತಾ ಪ್ರೌಢಶಾಲೆ ಹೆಮ್ಮಾಡಿ ಮುಖ್ಯ ಶಿಕ್ಷಕ ಮಂಜು ಕಾಳವಾರ,ಜನತಾ ಕಾಲೇಜಿನ ವೈಸ್ ಪ್ರಿನ್ಸಿಪಾಲ್ ರಮೇಶ ಪೂಜಾರಿ,ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಕಿರಿಮಂಜೇಶ್ವರ ಮುಖ್ಯ ಶಿಕ್ಷಕಿ ದೀಪಿಕಾ ಆಚಾರ್ಯ ಉಪಸ್ಥಿತರಿದ್ದರು.ಪ್ರಿನ್ಸಿಪಾಲ್ ಗಣೇಶ ಮೊಗವೀರ ಸ್ವಾಗತಿಸಿದರು.ಉಪನ್ಯಾಸಕ ಉದಯ ನಾಯ್ಕ್ ನಿರೂಪಿಸಿದರು.2023-24ನೇ ಸಾಲಿನಲ್ಲಿ ಅಧಿಕ ಅಂಕಗಳಿಸಿದ ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ರ್ಯಾಂಕ್‍ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.ಕಾಲೇಜಿನ ಸಾಂಸ್ಕ್ರತಿಕ ತಂಡದ ವಿದ್ಯಾರ್ಥಿಗಳಿಂದ ಹಿಗ್ಗಿನ-ಬುಗ್ಗೆ ಸಾಂಸ್ಕøತಿಕ ವೈಭವ ಕಾರ್ಯಕ್ರಮ ಜರುಗಿತು.ವಿದ್ಯಾರ್ಥಿಗಳ ಪೆÇೀಷಕರು ಹಾಜರಿದ್ದರು.























































































































































































































































































































































































































































































































































































































































































































































































































































































































































































































































































































































































































































































































































































































































































