ಗಂಗೊಳ್ಳಿ:ಚರ್ಮರೋಗ ತಪಾಸಣೆ,ಚಿಕಿತ್ಸಾ ಶಿಬಿರ ಉದ್ಘಾಟನೆ
ಕುಂದಾಪುರ:ಜಿಲ್ಲಾ ಪಂಚಾಯತ್ ಉಡುಪಿ,ಜಿಲ್ಲಾ ರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಜಿಲ್ಲಾ ಕುಷ್ಠ ರೋಗ ನಿಯಂತ್ರಣ ಘಟಕ,ರೋಟರಿ ಕ್ಲಬ್ ಗಂಗೊಳ್ಳಿ,ಗ್ರಾಮ ಪಂಚಾಯತ್ ಗಂಗೊಳ್ಳಿ,ಪ್ರಾಥಮಿಕ ಆರೋಗ್ಯ ಕೇಂದ್ರ ಗಂಗೊಳ್ಳಿ ಮತ್ತು ಕೆಎಂಸಿ ಆಸ್ಪತ್ರೆ ಮಣಿಪಾಲ ಅವರ ಜಂಟಿ ಆಶ್ರಯದಲ್ಲಿ ಚರ್ಮರೋಗ ಉಚಿತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗುರುವಾರ ನಡೆಯಿತು.
ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಆರೋಗ್ಯ ಅಧಿಕಾರಿ ಡಾ.ಪ್ರೇಮಾನಂದ ಶಿಬಿರವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಮಣಿಪಾಲ ಕೆಎಂಸಿ ಆಸ್ಪತ್ರೆಯ ಚರ್ಮರೋಗ ತಜ್ಞ ಡಾ.ಸತೀಶ ಪೈ ಅವರು ಚರ್ಮರೋಗದ ಬಗ್ಗೆ ಮಾಹಿತಿ ನೀಡಿದರು.ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಎಂ.ನಾಗೇಂದ್ರ ಪೈ ಉಪಸ್ಥಿತರಿದ್ದರು.
ಗಂಗೊಳ್ಳಿ ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ಕೆ.ರಾಮನಾಥ ನಾಯಕ್ ಸ್ವಾಗತಿಸಿ,ನಿರ್ವಹಿಸಿದರು. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅಮಿತಾ ಪ್ರಾಸ್ತಾವಿಕವಾಗಿ ಮಾತನಾಡಿದರು.