ಗಾಳಿ ಅಬ್ಬರಕ್ಕೆ ಧರೆಗುರುಳಿದ ವಿದ್ಯುತ್ ಕಂಬ:50 ಕ್ಕೂ ಹೆ0ಚ್ಚು ಕಂಬಕ್ಕೆ ಹಾನಿ


ಕುಂದಾಪುರ:ಏಕಏಕಿ ಶನಿವಾರ ಸಂಜೆ ಬೀಸಿದ ಭಾರಿ ಗಾಳಿಗೆ ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗೆ ಒಳಪಟ್ಟಿರುವ ತಲ್ಲೂರು ಉಪವಿಭಾಗದ ವ್ಯಾಪ್ತಿಯಲ್ಲಿನ ಹೆಮ್ಮಾಡಿ,ದೇವಲ್ಕುಂದ,ಆಲೂರು,ಬಡಾಕೆರೆ,ಗಂಗೊಳ್ಳಿ ಸೇರಿದಂತೆ ನಾನಾ ಕಡೆಗಳಲ್ಲಿ ಒಟ್ಟು 45 ರಿಂದ 50 ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗುರುಳಿ ಬಿದ್ದು ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ.ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿತ್ತು.
