ಶಂಕರನಾರಾಯಣ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕ ಗಂಟಿಹೊಳೆ ಭೇಟಿ
ಕುಂದಾಪುರ:ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅವರು ಶಂಕರನಾರಾಯಣ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ,ಆಸ್ಪತ್ರೆಯ ವೈದ್ಯಾಧಿಕಾರಿ ಜತೆ ಚರ್ಚೆಸಿ ಮಾತುಕತೆ ನಡೆಸಿದರು.
ಶಂಕರನಾರಾಯಣ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಎಲ್ಲ ರೀತಿಯ ಸೌಲಭ್ಯಗಳಿದ್ದರು ಉತ್ತಮ ರೀತಿಯಲ್ಲಿ ಸೇವೆಯನ್ನು ನೀಡುವಲ್ಲಿ ವೈದ್ಯಾಧಿಕಾರಿಗಳು ಸಹಿತ ಸಿಬ್ಬಂದಿಗಳು ನಿರ್ಲಕ್ಷ್ಯ ತೋರುತ್ತಿದ್ದುದರ ಬಗ್ಗೆ ಮಾಹಿತಿ ಪಡೆದು ತರಾಟೆಗೆ ತೆಗೆದುಕೊಂಡರು.ಕರ್ತವ್ಯ ನಿರ್ಲಕ್ಷ್ಯವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ, ಮತ್ತೆ ಇದೇ ರೀತಿ ಮುಂದುವರೆದರೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದರು.
ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ,ಉಮೇಶ್ ಶೆಟ್ಟಿ ಕಲ್ಗದ್ದೆ, ಉಪಾಧ್ಯಕ್ಷ ರವಿ ಕುಲಾಲ್, ಪಕ್ಷದ ಪ್ರಮುಖರು, ಸ್ಥಳೀಯರು ಉಪಸ್ಥಿತರಿದ್ದರು.