ಯು.ಬಿ.ಶೆಟ್ಟಿ ಆಂಗ್ಲ ಮಾಧ್ಯಮ ಶಾಲಾ ಮುಖ್ಯಶಿಕ್ಷಕಿ ಅಮಿತಾ ಶೆಟ್ಟಿ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆಯ್ಕೆ

ಬೈಂದೂರು:ಡಾ.ಎಸ್.ರಾಧಾಕೃಷ್ಣನ್ ಅವರ ಜನ್ಮಜಯಂತಿ ಅಂಗವಾಗಿ ಉಡುಪಿ ಆದರ್ಶ ಚಾರಿಟೆಬಲ್ ಟ್ರಸ್ಟ್ ಕೊಡಮಾಡುವ ಜಿಲ್ಲಾಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಬೈಂದೂರು ಯು.ಬಿ.ಶೆಟ್ಟಿ ಆಂಗ್ಲ ಮಾಧ್ಯಮ ಶಾಲಾ ಮುಖ್ಯಶಿಕ್ಷಕಿ ಅಮಿತಾ ಶೆಟ್ಟಿ ಆಯ್ಕೆಯಾಗಿದ್ದಾರೆ.
ಆದರ್ಶ ಕಾಲೇಜ್ ಆಫ್ ನರ್ಸಿಂಗ್,ಆದರ್ಶ ಇನ್‌ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್,ಆದರ್ಶ ಪ್ಯಾರಾ ಮಡೆಕಲ್ ಕಾಲೇಜ್,ಆದರ್ಶ ಆಸ್ಪತ್ರೆ ಉಡುಪಿ ಮತ್ತು ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಉಡುಪಿ ಅಲೆವೂರಿನ ಆದರ್ಶ ಸಮೂಹ ವಿದ್ಯಾಸಂಸ್ಥೆಗಳ ಸಂಕೀರ್ಣದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನಿಸಲಾಗುವುದು.