ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ
ಗಂಗೊಳ್ಳಿ:ಉಡುಪಿ ಜಿಲ್ಲಾ ಪೊಲೀಸ್ ಕುಂದಾಪುರ ವಿಭಾಗ,ಬೈಂದೂರು ವೃತ್ತ,ಗಂಗೊಳ್ಳಿ ಪೊಲೀಸ್ ಠಾಣೆ ವತಿಯಿಂದ ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಹಾಗೂ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ ತ್ರಾಸಿ ಅಣ್ಣಪ್ಪಯ್ಯ ಸಭಾಭವನದಲ್ಲಿ ಮಂಗಳವಾರ ನಡೆಯಿತು.
ಗಂಗೊಳ್ಳಿ ಪೊಲೀಸ್ ಠಾಣೆ ಠಾಣಾಧಿಕಾರಿ ಹರೀಶ್ ಮಾದಕ ದ್ರವ್ಯ ಸೇವನೆ ಯಿಂದಾಗುವ ದುಷ್ಪರಿಣಾಮ ಮತ್ತು ಸಂಚಾರ ನಿಯಮ ಸುರಕ್ಷತೆ ಬಗ್ಗೆ ಮಾಹಿತಿಯನ್ನು ನೀಡಿದರು.ಈ ಸಂದರ್ಭ ಬಸ್ ಮಾಲೀಕರು ಮತ್ತು ಚಾಲಕರು,ಆಟೋ ಮಾಲೀಕ ಮತ್ತು ಚಾಲಕ ಸಂಘದ ಸದಸ್ಯರು,ಸ್ಥಳೀಯರು,ಪೊಲೀಸ್ ಠಾಣೆ ಸಿಬ್ಬಂದಿಗಳು ಉಪಸ್ಥಿತರಿದ್ದರು.