ಹರ್ಕೂರು-ನಾರ್ಕಳಿ ಮದುಕೋಡ್ಲು ಎಸ್.ಟಿ ಕಾಲೋನಿ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ

Share

ಕುಂದಾಪುರ:ಆದಿವಾಸಿ ಜನಾಂಗದ ಮುಖಂಡರಾದಂತಹ ಬಿರ್ಸಾ ಮುಂಡ ಅವರ ಜನ್ಮ ದಿನಾಚರಣೆ ದಿನದಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸಂಕಲ್ಪ ಮಾಡಿದಂತೆ ಬುಡಕಟ್ಟು ಜನಾಂಗದವರು ವಾಸ ಮಾಡುವಂತಹ ಪ್ರದೇಶಗಳನ್ನು ಗುರುತಿಸಿ ಎಲ್ಲಾ ರೀತಿಯ ಸೌಲಭ್ಯಗಳನ್ನು ದೊರಕಿಸಿ ಕೊಡಬೇಕು ಎನ್ನುವ ಉದ್ದೇಶದಿಂದ ಯೋಜನೆಯನ್ನು ರೂಪಿಸಲಾಗಿದ್ದು.ಅದರ ಭಾಗವಾಗಿ ಬೈಂದೂರು ಕ್ಷೇತ್ರದಲ್ಲಿ ಸುಮಾರು 4.ಕೋಟಿಗೂ ಅಧಿಕ ಮೊತ್ತದ ಅನುದಾನದಲ್ಲಿ ಪಿಎಂ ಜನ್‍ಮನ್ ರಸ್ತೆ ಅಭಿವೃದ್ಧಿ ಕಾಮಗಾರಿ ಮಾಡಲಾಗುತ್ತಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದರು.
ಪಿಎಂ ಜನ್‍ಮನ್ ಯೋಜನೆಯಡಿ 94.34 ಲಕ್ಷ.ರೂ ವೆಚ್ಚದಲ್ಲಿ ಅಭಿವೃದ್ಧಿಗೊಳ್ಳಲಿರುವ ಬೈಂದೂರು ವಿಧಾನಸಭಾ ಕ್ಷೇತ್ರದ ಆಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹರ್ಕೂರು-ನಾರ್ಕಳಿ ಮದುಕೊಡ್ಲು ಎಸ್.ಟಿ ಕಾಲೋನಿ ರಸ್ತೆ ಅಭಿವೃದ್ಧಿ ಕಾಮಗಾರಿ ಕೆಲಸಕ್ಕೆ ಬುಧವಾರ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಜಲಜೀವನ್ ಮೆಷಿನ್ ಯೋಜನೆಯಡಿ 800 ಕೋಟಿ ರೂ. ವೆಚ್ಚದಲ್ಲಿ ಕುಡಿಯುವ ನೀರಿನ ಯೋಜನೆ ಕಾಮಗಾರಿ ಕೆಲಸ ಪ್ರಗತಿಯಲ್ಲಿದೆ.ಮೋದಿ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಅನೇಕ ಜನಾಪಯೋಗಿ ಯೋಜನೆಗಳನ್ನು ಜಾರಿಗೆ ತರಲು ಪ್ರಯತ್ನಿಸಲಾಗಿದೆ ಎಂದರು.
ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಮಾತನಾಡಿ,ಜನ್‍ಮನ್ ಯೋಜನೆ ದೇಶದ ಅಭಿವೃದ್ಧಿ ದಿಕ್ಕನೆ ಬದಲಿಸಲಿದೆ ಎಂದು ಅಭಿಪ್ರಾಯಪಟ್ಟರು.
ಬೈಂದೂರು ಮಂಡಲ ಅಧ್ಯಕ್ಷೆ ಅನಿತಾ ಆರ್.ಕೆ,ನಿಕಟಪೂರ್ವ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ,ಆಲೂರು ಪಂಚಾಯಿತಿ ಅಧ್ಯಕ್ಷ ರಾಜೇಶ ಆರ್ ದೇವಾಡಿಗ,ಬಿಜೆಪಿ ಪಕ್ಷದ ಮುಖಂಡರಾದ ಚಿತ್ತರಂಜನ್ ಹೆಗ್ಡೆ ಹರ್ಕೂರು,ಮಂಜಯ್ಯ ಶೆಟ್ಟಿ ಹರ್ಕೂರು,ಪಂಚಾಯಿತಿ ಸದಸ್ಯರಾದ ಸುಬ್ಬಣ್ಣ ಶೆಟ್ಟಿ,ಪ್ರಸನ್ನ ಶೆಟ್ಟಿ,ಪ್ರಮೋದ ಶೆಟ್ಟಿ,ರವಿ ಶೆಟ್ಟಿ ಆಲೂರು,ಅಪ್ಪÅ ಕುಲಾಲ್,ರಾಜು ಪೂಜಾರಿ,ಪ್ರಶಾಂತ್ ಕುಲಾಲ್,ಬಿರ್ಸಾ ಮುಖಂಡ ರಾಜೇಶ ರಾಮಣ್ಣ,ಬಿಜೆಪಿ ಪಕ್ಷದ ಮುಖಂಡರು,ಕಾರ್ಯಕರ್ತರು ಉಪಸ್ಥಿತರಿದ್ದರು.

Advertisement

Share

Leave a comment

Your email address will not be published. Required fields are marked *

You cannot copy content of this page